ಉಡುಪಿ ಪೇಜಾವರ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಂದ ಉಜ್ಜಯಿನಿ ಕ್ಷೇತ್ರಕ್ಕೆ ಭೇಟಿ
ಉಡುಪಿ: ಉತ್ತರಭಾರತ ಪ್ರವಾಸದಲ್ಲಿರುವ ಉಡುಪಿ ಪೇಜಾವರ ಮಠಾಧೀಶ ಹಾಗೂ ಅಯೋಧ್ಯೆ ಶ್ರೀ ರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರೂ ಆಗಿರುವ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಗುರುವಾರ ಉಜ್ಜಯಿನಿ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಮಹಾಕಾಲೇಶ್ವರನ ದರ್ಶನ ಮಾಡಿದರು. ದೇವಳದ ಆಡಳಿತ ಮಂಡಳಿಯವರು ಶ್ರೀಗಳವರನ್ನು ಗೌರವಪೂರ್ವಕವಾಗಿ ಬರಮಾಡಿಕೊಂಡರು. ಇಂದು ಶ್ರೀಗಳು ಚಿತ್ರಕೂಟಕ್ಕೆ ಭೇಟಿ ನೀಡಲಿರುವರು.