ಮಣಿಪಾಲ: ಟೆಸ್ಟ್ ಡ್ರೈವ್ ಗೆ ಹೋಗಿ ಬರುತ್ತೇನೆಂದು ಬೈಕ್ ಜತೆ ಪರಾರಿಯಾದ ಅಪರಿಚಿತ

ಮಣಿಪಾಲ: ಬೈಕ್ ಖರೀದಿಸುವ ಸೋಗಿನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಟೆಸ್ಟ್ ಡ್ರೈವ್‌ ಗೆ ಹೋಗಿ ಬರುತ್ತೇನೆಂದು ಬೈಕ್ ವೊಂದನ್ನು ಕದ್ದುಕೊಂಡು ಹೋದ ಘಟನೆ ಮಣಿಪಾಲ ಲಕ್ಷ್ಮೀಂದ್ರನಗರದ ನ್ಯೂ ಮಣಿಪಾಲ್ ಬಜಾರಿನಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಅಪರಿಚಿತ ವ್ಯಕ್ತಿ 2017 ಮಾಡೆಲ್ ನ ಟಿವಿಎಸ್ ವಿಕ್ಟರ್ (ಕೆಎ 19 ಇಯು 6827) ನೋಂದಣಿ ಸಂಖ್ಯೆಯ ಬೈಕ್ ಅನ್ನು ಕದ್ದುಕೊಂಡು ಪರಾರಿಯಾಗಿದ್ದಾನೆ. ಮಧ್ಯಾಹ್ನ 2.45ರ ಸುಮಾರಿಗೆ ಬಜಾರ್ ಗೆ ಬಂದ ಅಪರಿಚಿತ ವ್ಯಕ್ತಿಯು ಬೈಕ್ ಖರೀದಿಸುವಂತೆ ನಟಿಸಿದ್ದಾನೆ. ಅಲ್ಲದೆ ಬಜಾರ್ […]

ಉಡುಪಿ: ಕಾಂಗ್ರೆಸ್ ನಿಂದ ಇಂದಿರಾ ಗಾಂಧಿ ಪುಣ್ಯಸ್ಮರಣೆ, ಸರ್ದಾರ್ ವಲ್ಲಭಭಾಯಿ ಪಟೇಲ್‌ ಜನ್ಮದಿನಾಚರಣೆ

ಉಡುಪಿ: ಭಾರತವನ್ನು ಗುಲಾಮಗಿರಿಯಿಂದ ಮುಕ್ತಗೊಳಿಸಿ ಸ್ವತಂತ್ರ ಪ್ರಜಾಪ್ರಭುತ್ವ ರಾಷ್ಟ್ರವಾಗಿ ನಿರ್ಮಾಣ ಮಾಡುವುದರಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲರ ಕೊಡುಗೆ ಅಪಾರವಾಗಿದೆ. ಹಾಗೆ ಹಿಂದುಳಿದ ವರ್ಗದ ಜನತೆಗೆ ಆರ್ಥಿಕ ಸ್ವಾತಂತ್ರ್ಯವನ್ನು ಕೊಟ್ಟ ಗೌರವ ಇಂದಿರಾ ಗಾಂಧಿ ಅವರಿಗೆ ಸಲ್ಲುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದರು. ಅವರು ಇಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ದಿ. ಸರ್ದಾರ್ ವಲ್ಲಭ ಭಾಯಿ ಪಾಟೇಲ್ ಜನ್ಮದಿನಾಚರಣೆ, ದಿ. ಇಂದಿರಾ ಗಾಂಧಿ ಪುಣ್ಯಸ್ಮರಣೆ ಹಾಗೂ ಕಿಸಾನ್ ಅಧಿಕಾರ್ ದಿವಸ […]

ಪೆರ್ಡೂರು ಅಪ್ರಾಪ್ತ ಬಾಲಕಿಯ ಅಪಹರಣ: ಆರೋಪಿಯನ್ನು ತಕ್ಷಣವೇ ಬಂಧಿಸಿ; ಹಿಂದೂ ಸಂಘಟನೆಗಳ ಆಗ್ರಹ

ಹಿರಿಯಡಕ: ಪೆರ್ಡೂರಿನ ಅಪ್ರಾಪ್ತ ಬಾಲಕಿಯನ್ನು ಅನ್ಯಕೋಮಿನ ಯುವಕ ಅಪಹರಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹಿಂದೂಪರ ಸಂಘಟನೆಯ ಸದಸ್ಯರು ಹಿರಿಯಡಕ ಪೊಲೀಸ್ ಠಾಣೆಯ ಪ್ರತಿಭಟನೆ ನಡೆಸಿದರು. ನೂರಾರು ಸಂಖ್ಯೆಯಲ್ಲಿ ಠಾಣೆಯ ಎದುರು ಜಮಾಯಿಸಿದ್ದ ಹಿಂದೂ ಕಾರ್ಯಕರ್ತರು ಘಟನೆ ನಡೆದು ಮೂರು ದಿನ ಕಳೆದರೂ ಬಾಲಕಿ ಪತ್ತೆಯಾಗದೆ ಇರುವುದನ್ನು ಖಂಡಿಸಿದರು. ಬಾಲಕಿಯನ್ನು ಅನ್ಯಕೋಮಿನ ಯುವಕ ಅಪಹರಣ ಮಾಡಿದ್ದಾನೆ. ಇದೊಂದು ಲವ್ ಜಿಹಾದ್ ಆಗಿದೆ. ಈ ಘಟನೆಗೆ ಕುಮ್ಮಕ್ಕು ನೀಡಿದ ಎಲ್ಲರನ್ನೂ ತಕ್ಷಣವೇ ಬಂಧಿಸಬೇಕು ಎಂದು ಹಿಂದೂ ಸಂಘಟನೆಯ ಮುಖಂಡರು ಜಿಲ್ಲಾ […]

ಬಿಜೆಪಿಯಿಂದ ಹಿಂದುಳಿದ ವರ್ಗಕ್ಕೆ ಶಕ್ತಿ ತುಂಬುವ ಕೆಲಸವಾಗಲಿದೆ: ಸಚಿವ ಕೋಟ

ಉಡುಪಿ: ಸಮಾಜದ ವಿವಿಧ ಜಾತಿಗಳನ್ನೊಳಗೊಂಡಿರುವ ಬಿಜೆಪಿಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾ ಪರಿಣಾಮಕಾರಿ ಪಕ್ಷ ಸಂಘಟನೆ, ಕ್ರಿಯಾಶೀಲತೆ, ಹೋರಾಟ ಮತ್ತು ಮಾದರಿ ಕಾರ್ಯಕ್ರಮಗಳ ಮೂಲಕ ಹಿಂದುಳಿದ ವರ್ಗಕ್ಕೆ ಶಕ್ತಿ ಕೆಲಸ ಮಾಡುತ್ತಿದೆ ಎಂದು ಹಿಂದೂ ಧಾರ್ಮಿಕ ದತ್ತಿ, ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ […]

ಕಾರ್ಕಳದ ಪ್ರಸಿದ್ಧ ಆಯುರ್ವೇದ ವೈದ್ಯ ಡಾ. ಎಂ. ರವಿರಾಜ್ ಶೆಟ್ಟಿ ಅವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಕಾರ್ಕಳ: ಕಾರ್ಕಳದ ಪ್ರಸಿದ್ಧ ಆಯುರ್ವೇದ ವೈದ್ಯ ಡಾ. ಎಂ. ರವಿರಾಜ್ ಶೆಟ್ಟಿ ಅವರಿಗೆ ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ರವಿರಾಜ್ ಶೆಟ್ಟಿ ಅವರು ಕಳೆದ 43 ವರ್ಷಗಳಿಂದ ಆಯುರ್ವೇದ ಚಿಕಿತ್ಸೆ ಹಾಗೂ ಸೇವೆಯನ್ನು ನೀಡುತ್ತಾ ಬಂದಿದ್ದಾರೆ. ಕಾರ್ಕಳದ ರಾಧಿಕಾ ಟಾಕೀಸ್ ಎದುರಿನ ಹಿತ ಆಯುರ್ವೇದಿಕ್ ಮೆಡಿಕಲ್ಸ್ ಅನ್ನು ಮುನ್ನಡೆಸಿಕೊಂಡು ಬರುತ್ತಿದ್ದಾರೆ.