ಪೇಜಾವರ ಶ್ರೀಗಳಿಂದ ಯೋಗಿ ಆದಿತ್ಯನಾಥ್ ಭೇಟಿ‌; ರಾಮಮಂದಿರ ನಿರ್ಮಾಣದ ಕುರಿತು ಚರ್ಚೆ

ಉತ್ತರಪ್ರದೇಶ: ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಇಂದು ಸಂಜೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದರು. ಸಿಎಂ ಯೋಗಿಯವರು ಶ್ರೀಗಳನ್ನು ಆದರಪೂರ್ವಕ ಬರಮಾಡಿಕೊಂಡರು . ಉಭಯ ಕುಶಲೋಪರಿಯ ಬಳಿಕ ಕೊರೊನಾ ವಿಪತ್ತಿನ ಕುರಿತು ವಿಷಯ ಮಾತನಾಡಿ ಲೋಕದೊಳಿತಿಗಾಗಿ ಶ್ರೀ ಕೃಷ್ಣನಲ್ಲಿ ಪ್ರಾರ್ಥಿಸುವಂತೆ ಯೋಗಿಯವರು ಶ್ರೀಗಳವರಲ್ಲಿ ವಿನಂತಿಸಿದರು. ಬಳಿಕ ಶ್ರೀರಾಮಮಂದಿರ ನಿರ್ಮಾಣದ ವಿಷಯದ ಬಗ್ಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಅಧ್ಯಕ್ಷರು ಮಹಾಂತ ನೃತ್ಯ ಗೋಪಾಲ ದಾಸ್ […]

ಉಡುಪಿ: ಮೂರೂರು ವಿಷ್ಣು ಭಟ್ಟರಿಗೆ ಚಿಟ್ಟಾಣಿ ಪ್ರಶಸ್ತಿ

ಉಡುಪಿ: ಉಡುಪಿಯ ಚಿಟ್ಟಾಣಿ ಅಭಿಮಾನಿ ಬಳಗದಿಂದ ಕೊಡಲ್ಪಡುವ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿಗೆ ಹಿರಿಯ ಸ್ತ್ರೀವೇಷಧಾರಿ ಉತ್ತರ ಕನ್ನಡ ಜಿಲ್ಲೆಯ ಮೂರೂರು ವಿಷ್ಣು ಭಟ್ಟ ಹಾಗೂ ವೇಷಧಾರಿ ಅಜಿತ್ ಕುಮಾರ್ ಅಂಬಲಪಾಡಿ ಅವರನ್ನು ‘ಟಿ.ವಿ.ರಾವ್ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ ಎಂದು ಚಿಟ್ಟಾಣಿ ಅಭಿಮಾನಿ ಬಳಗದ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಕಾರ್ಯದರ್ಶಿ ಎಂ.ಗೋಪಿಕೃಷ್ಣ ರಾವ್ ತಿಳಿಸಿದ್ದಾರೆ. ನವೆಂಬರ್‌ 7ರಂದು ಸಂಜೆ 5.15ಕ್ಕೆ ಕೃಷ್ಣಮಠದ ರಾಜಾಂಗಣದಲ್ಲಿ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ಪ್ರಶಸ್ತಿ ಪ್ರದಾನ […]

ಮಣಿಪಾಲ: ವಿಜಯನಗರ ಕೋಡಿಯ ನಿವಾಸಿ ನಾಪತ್ತೆ

ಮಣಿಪಾಲ: ಹೆರ್ಗಾ ಗ್ರಾಮದ ಸರಳೇಬೆಟ್ಟು ವಿಜಯನಗರ ಕೋಡಿಯ ನಿವಾಸಿ ಅನಂತ ನಾಯ್ಕ್ (49) ಎಂಬುವವರು ಅಕ್ಟೋಬರ್ 30ರಿಂದ ಕಾಣೆಯಾಗಿದ್ದಾರೆ. ಅಂದು ಮನೆಯಿಂದ ಈಶ್ವರನಗರ ಕಡೆಗೆ ಹೋದವರು ಈವರೆಗೆ ಮನೆಗೆ ಬರಲಿಲ್ಲ. ಈ ಬಗ್ಗೆ ಪತ್ನಿ ಲಲಿತಾ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬ್ರಹ್ಮಾವರ: ಜಿಲ್ಲಾಧಿಕಾರಿ ನೇತೃತ್ವದಲ್ಲಿ ದಾಳಿ; ಅಕ್ರಮವಾಗಿ ದಾಸ್ತಾನು ಮಾಡಿದ್ದ 600 ಕ್ವಿಂಟಲ್ ಅನ್ನಭಾಗ್ಯ ಅಕ್ಕಿ ವಶ

ಉಡುಪಿ: ಬ್ರಹ್ಮಾವರ ತಾಲೂಕು ಶಿರಿಯಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಮರ್ಗಿ ಎಂಬಲ್ಲಿನ ರೈಸ್ ಮಿಲ್ ಮೇಲೆ ಸೋಮವಾರ ಮಧ್ಯಾಹ್ನ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಜಿಲ್ಲಾಧಿಕಾರಿ ಜಿ. ಜಗದೀಶ್ ನೇತೃತ್ವದ ಅಧಿಕಾರಗಳ ತಂಡ ಅನ್ನಭಾಗ್ಯ ಯೋಜನೆಯ ಸುಮಾರು 600 ಕ್ವಿಂಟಾಲ್ ಗೂ ಅಧಿಕ ಅಕ್ಕಿಯನ್ನು ವಶಪಡಿಸಿಕೊಂಡಿದೆ. ಜಿಲ್ಲೆಯಲ್ಲಿ ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮತ್ತು ದಾಸ್ತಾನು ಮಾಡುತ್ತಿರುವ ಸುಮಾರು ಒಂದು ತಿಂಗಳಿದ ಸತತವಾಗಿ ಮಾಹಿತಿಯನ್ನು ಸಂಗ್ರಹಿಸಿ, ಈ ದಾಳಿಯನ್ನು ನಡೆಸಲಾಗಿದೆ. ಅಂದಾಜು 16.5 ಲಕ್ಷ ಮೌಲ್ಯದ […]

ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕೇಂದ್ರ ತೆರೆಯಲು ಸರ್ಕಾರಕ್ಕೆ ಪ್ರಸ್ತಾವನೆ: ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ: ಕೇಂದ್ರ ಸರ್ಕಾರ ನಿಗದಿಪಡಿಸಿರುವ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯಲ್ಲಿ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವ ಕುರಿತಂತೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅಧಿಕಾರಿಗಳಿಗೆ ಸೂಚಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ, ಕಾರ್ಕಳ ಮತ್ತು ಕುಂದಾಪುರದಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಸಾಮಾನ್ಯ ಭತ್ತವನ್ನು ಕ್ವಿಂಟಾಲ್ ಗೆ ₹ 1868 ದರದಲ್ಲಿ ಮತ್ತು ಗ್ರೇಡ್ ಎ […]