ಕೆನರಾ ಬ್ಯಾಂಕ್ ವಿಜಿಲೆನ್ಸ್ ಜಾಗೃತಿ ಸಪ್ತಾಹದ ಸಮಾರೋಪ
ಉಡುಪಿ: ನಗರದ ಕೆನರಾ ಬ್ಯಾಂಕ್ ಸರ್ಕಲ್ ಕಚೇರಿ ವತಿಯಿಂದ ಅ. 17ರಿಂದ ನ. 2ರ ವರೆಗೆ ಹಮ್ಮಿಕೊಂಡ ವಿಜಿಲೆನ್ಸ್ ಜಾಗೃತಿ ಸಪ್ತಾಹದ ಸಮಾರೋಪ ಸೋಮವಾರ ನಡೆಯಿತು. ನಗರದ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ವಿನಯ್ ಎ. ಗಾಂವ್ಕರ್ ಮಾತನಾಡಿ, ಕೋವಿಡ್ 19ರ ಬಳಿಕ ಸಾರ್ವಜನಿಕ ಸೇವೆಯಲ್ಲಿರು ಎಲ್ಲರ ಜವಾಬ್ದಾರಿಯೂ ಹೆಚ್ಚಾಗಿದೆ. ನಾವೆಲ್ಲರೂ ಮತ್ತೊಮ್ಮೆ ನಾಡು ಕಟ್ಟಲು ಹೆಚ್ಚಿನ ಪರಿಶ್ರಮ ಪಡಬೇಕು. ಸಾಮಾಜಿಕ, ಆರ್ಥಿಕ ಚೇತರಿಕೆಗೆ ಎಲ್ಲರೂ ಶ್ರಮಿಸಬೇಕು. ಆ ಮೂಲಕ ದೇಶವನ್ನು ಆರ್ಥಿಕವಾಗಿ ಬಲಪಡಿಸಬೇಕಿದೆ ಎಂದರು. […]
ಉಡುಪಿ: ಸೈಕ್ಯಾಟ್ರಿಸ್ಟ್ ಹುದ್ದೆಗೆ ನೇರ ನೇಮಕಾತಿ
ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ಸೈಕ್ಯಾಟ್ರಿಸ್ಟ್ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ನವೆಂಬರ್ 9ರಂದು ಬೆಳಗ್ಗೆ 10.30 ರಿಂದ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಅಭ್ಯರ್ಥಿಗಳು ಶೈಕ್ಷಣಿಕ ಮೂಲ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಕಾರ್ಮಿಕರ ಮಕ್ಕಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
ಉಡುಪಿ: ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ಪ್ರಸಕ್ತ ಸಾಲಿನಲ್ಲಿ ವಂತಿಗೆ ಪಾವತಿಸುವ ವಿವಿಧ ಸಂಸ್ಥೆ ಹಾಗೂ ಕಾರ್ಖಾನೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಂಘಟಿತ ಕಾರ್ಮಿಕರ ಮಕ್ಕಳಿಂದ ಶೈಕ್ಷಣಿಕ ಪ್ರೋತ್ಸಾಹ ಧನಸಹಾಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನವಾಗಿದ್ದು, ಅರ್ಜಿಯನ್ನು (www.klwb.karnataka.gov.in ) ನಲ್ಲಿ ಸಲ್ಲಿಸಬಹುದಾಗಿದೆ ಎಂದು ಉಡುಪಿ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಲವ್ ಜಿಹಾದ್’ ಮಟ್ಟ ಹಾಕಲು ಶೀಘ್ರವೇ ಕಾನೂನು: ಸಚಿವ ಸಿ.ಟಿ. ರವಿ
ಬೆಂಗಳೂರು: ‘ಲವ್ ಜಿಹಾದ್’ ಗೆ ಸಂಪೂರ್ಣವಾಗಿ ಕಡಿವಾಣ ಹಾಕಲು ರಾಜ್ಯದಲ್ಲೂ ಶೀಘ್ರವೇ ಪ್ರಬಲವಾದ ಕಾನೂನನ್ನು ಜಾರಿಗೆ ತರಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ. ರಾಜ್ಯದಲ್ಲಿ ಮದುವೆಗಾಗಿ ನಡೆಯುವ ಮತಾಂತರ ತಡೆಯಲು ಪ್ರಬಲ ಕಾನೂನಿನ ಅಗತ್ಯವಿದೆ. ಜಿಹಾದಿ ಶಕ್ತಿಗಳು ನಮ್ಮ ಸಹೋದರಿಯರ ಘನತೆ, ಗೌರವ ಹರಣ ಮಾಡುವುದನ್ನು ಸುಮ್ಮನೆ ನೋಡುತ್ತಾ ಕೂರಲು ಆಗುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಯಾರೇ ಇರಲಿ ಮತಾಂತರದಂತಹ ಕೃತ್ಯದಲ್ಲಿ ತೊಡಗಿದರೆ ಕಠಿಣ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಗೆ ₹ 2.59 ಕೋಟಿ ಲಾಭ; ಯಶ್‍ಪಾಲ್ ಸುವರ್ಣ
ಉಡುಪಿ: ಕರಾವಳಿ ಭಾಗದ ಪ್ರತಿಷ್ಟಿತ ಪಟ್ಟಣ ಸಹಕಾರಿ ಸಂಸ್ಥೆಗಳಲ್ಲಿ ಒಂದಾದ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ 2020-21ನೇ ಸಾಲಿನ ಅರ್ಧವಾರ್ಷಿಕದಲ್ಲಿ ಕೋವಿಡ್-19 ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಸುಮಾರು ₹502.25 ಕೋಟಿ ವ್ಯವಹಾರ ನಡೆಸಿ ₹2.59 ಕೋಟಿ ಒಟ್ಟು ಲಾಭ ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಯಶ್‍ಪಾಲ್ ಎ ಸುವರ್ಣ ತಿಳಿಸಿದ್ದಾರೆ. ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಸಹಕಾರಿ ಇಲಾಖೆ ಹಾಗೂ ಭಾರತೀಯ ರಿಸರ್ವ್ ಬ್ಯಾಂಕಿನ ಪರಿವೀಕ್ಷಣೆಗೆ ಒಳಪಟ್ಟು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಶಾಖೆಗಳ ಮೂಲಕ 25,000 […]