ಡ್ರಗ್ಸ್ ಪ್ರಕರಣ: ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಜಾಮೀನು ಅರ್ಜಿ ವಜಾ
ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಬಂಧಿತರಾಗಿರುವ ಚಲನಚಿತ್ರ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಮತ್ತು ಅವರ ಸ್ನೇಹಿತ ಪ್ರಶಾಂತ್ ರಂಕಾ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರ ಪೀಠ ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 24ರಂದು ಪೂರ್ಣಗೊಳಿಸಿ, ತೀರ್ಪನ್ನು ಕಾಯ್ದಿರಿಸಿತ್ತು. ಅದರಂತೆ ಇಂದು (ಮಂಗಳವಾರ) ಮೂವರ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ ಆದೇಶ ನೀಡಿದೆ. ರಾಗಿಣಿ ಅವರನ್ನು ಸಿಸಿಬಿ ಪೊಲೀಸರು ಸೆಪ್ಟೆಂಬರ್ 14ರಂದು ಹಾಗೂ ಸಂಜನಾ […]
ಕನ್ನಡದ ಹಿರಿಯ ನಟ ಸೋಮಶೇಖರ ರಾವ್ ನಿಧನ
ಬೆಂಗಳೂರು: ಹಿರಿಯ ಕಲಾವಿದ ಎಚ್.ಜಿ. ಸೋಮಶೇಖರ ರಾವ್ (86) ಅವರು ಮಂಗಳವಾರ ನಿಧನ ಹೊಂದಿದರು. ರಂಗಭೂಮಿ, ಕಿರುತೆರೆ ಹಾಗೂ ಚಲನಚಿತ್ರ ಈ ಮೂರು ಕ್ಷೇತ್ರದಲ್ಲಿ ಮಿಂಚಿದ್ದ ಸೋಮಶೇಖರ್ ರಾವ್, ಈಚೆಗೆ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಎರಡು ದಿನಗಳಿಂದ ಅಸ್ವಸ್ಥರಾಗಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ವೈದ್ಯರು ತಪಾಸಣೆ ನಡೆಸುವ ಮುನ್ನವೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸಹೋದರ ನಟ ದತ್ತಣ್ಣ ಜತೆ ಸೋಮಶೇಖರ್ ರಾವ್ ಹಿರಿಯ ಚಲನಚಿತ್ರ ನಟ ದತ್ತಣ್ಣ (ದತ್ತಾತ್ರೇಯ) ಅವರ ಸಹೋದರರಾಗಿರುವ ಸೋಮಶೇಖರ ರಾವ್, […]
ನೂತನ ಕಾಪು ತಾಪಂ ಅಧ್ಯಕ್ಷರಾಗಿ ಬಿಜೆಪಿಯ ಶಶಿಪ್ರಭಾ ಶೆಟ್ಟಿ, ಉಪಾಧ್ಯಕ್ಷರಾಗಿ ಕಾಂಗ್ರೆಸ್ ನ ಯು ಶೇಖಬ್ಬ ಆಯ್ಕೆ
ಕಾಪು: ಹೊಸದಾಗಿ ಅಸ್ಥಿತ್ವಕ್ಕೆ ಬಂದಿರುವ ಕಾಪು ತಾಲೂಕು ಪಂಚಾಯಿತಿಯ ಪ್ರಥಮ ಅಧ್ಯಕ್ಷರಾಗಿ ಬಿಜೆಪಿಯ ಶಶಿಪ್ರಭಾ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಕಾಂಗ್ರೆಸ್ ನ ಯು ಶೇಖಬ್ಬ ಉಚ್ಚಿಲ ಚುನಾವಣೆಯ ಮೂಲಕ ಆಯ್ಕೆಯಾಗಿದ್ದಾರೆ. ಉಡುಪಿ ತಾಪಂ ನಿಂದ ಪ್ರತ್ಯೇಕಗೊಂಡು ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಕಾಪು ತಾಲೂಕು ಪಂಚಾಯಿತಿ ಕಾಂಗ್ರೆಸ್ ಹಾಗೂ ಬಿಜೆಪಿ ತಲಾ 5 ಸದಸ್ಯರು ಸೇರಿದಂತೆ 12 ಸದಸ್ಯ ಬಲ ಹೊಂದಿದೆ. ಅಧ್ಯಕ್ಷ ಸ್ಥಾನವು ಹಿಂದುಳಿದ ವರ್ಗ ಮಹಿಳೆಗೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗ ಮೀಸಲಾಗಿತ್ತು. […]
ಪೆರ್ವಾಜೆ ಸರಕಾರಿ ಶಾಲೆಗೆ ಅನಂತಶಯನ ಶಾರದಾ ಮಹಿಳಾ ಮಂಡಲದಿಂದ ₹ 71 ಸಾವಿರ ದೇಣಿಗೆ ಹಸ್ತಾಂತರ
ಕಾರ್ಕಳ: ಶಾರದಾ ಮಹಿಳಾ ಮಂಡಲ ಅನಂತಶಯನ ಇದರ ವತಿಯಿಂದ ಪೆರ್ವಾಜೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಅಂಕಣಕ್ಕೆ ಶೀಟ್ ಹಾಕುವ ಸಲುವಾಗಿ ₹ 71 ಸಾವಿರ ಮೊತ್ತದ ಚೆಕ್ ಅನ್ನು ಮುಖ್ಯೋಪಾಧ್ಯಾಯಿನಿ ಲಕ್ಷ್ಮೀ ಹೆಗಡೆ ಅವರಿಗೆ ಸೋಮವಾರ ನೀಡಲಾಯಿತು. ಮಹಿಳಾ ಮಂಡಲದ ಅಧ್ಯಕ್ಷೆ ವಾರಿಜಾ ವಿ. ಕಾಮತ್ ಚೆಕ್ ಹಸ್ತಾಂತರ ಮಾಡಿದರು. ಪುರಸಭೆ ಸದಸ್ಯೆ ಭಾರತಿ ಅಮೀನ್, ಮಂಡಲದ ಕಾರ್ಯದರ್ಶಿ ಡಾ. ಹರ್ಷಾ ಕಾಮತ್, ಪದಾಧಿಕಾರಿಗಳು ಹಾಗೂ ಸದಸ್ಯರು, ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.
ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ಭವನ ನಿರ್ಮಾಣಕ್ಕೆ ಶೀಘ್ರ ಭೂಮಿ ಮಂಜೂರು: ಪೇಜಾವರ ಶ್ರೀಗಳಿಗೆ ಯೋಗಿ ಆದಿತ್ಯನಾಥ್ ಭರವಸೆ
ಉಡುಪಿ: ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರು ಆಗಿರುವ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಸೋಮವಾರ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿ, ರಾಮಮಂದಿರ ನಿರ್ಮಾಣದ ಬಗ್ಗೆ ಸಮಾಲೋಚನೆ ನಡೆಸಿದರು. ಇದೇ ಸಂದರ್ಭದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಅಯೋಧ್ಯೆಯಲ್ಲಿ ಭವಿಷ್ಯದಲ್ಲಿ ರಾಮಮಂದಿರಕ್ಕಾಗಿ ತೆರಳುವ ರಾಜ್ಯದ ಲಕ್ಷಾಂತರ ಭಕ್ತರ ಅನುಕೂಲಕ್ಕಾಗಿ ಭವ್ಯ ಕರ್ನಾಟಕ ಯಾತ್ರಿ ಭವನ ನಿರ್ಮಿಸಲು ಭೂಮಿ ಒದಗಿಸುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರಿಗೆ ಪತ್ರ ಬರೆದು ಮನವಿ ಮಾಡಿದ್ದರು. […]