ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನದಲ್ಲಿ ಕೇಂದ್ರ, ರಾಜ್ಯ ನಾಯಕರ ಕೈವಾಡವಿದೆ: ಜಯಮೃತ್ಯುಂಜಯ ಸ್ವಾಮೀಜಿ
ಬೆಂಗಳೂರು: ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನದಲ್ಲಿ ಕೇಂದ್ರ ಹಾಗೂ ರಾಜ್ಯ ನಾಯಕರ ಕೈವಾಡ ಇದೆ ಎಂದು ಪಂಚಮಸಾಲಿ ಮಠದ ಜಯಮೃತ್ಯುಂಜಯ ಸ್ವಾಮೀಜಿ ಆರೋಪಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಪಂ ಸದಸ್ಯ ಯೋಗಿಶ್ ಗೌಡ ಕೊಲೆ ಪ್ರಕರಣದಲ್ಲಿ ಅಪರಾಧಿಯಲ್ಲದಿದ್ದರೂ ವಿನಯ್ ಕುಲಕರ್ಣಿ ಅವರನ್ನು ವಿಚಾರಣೆಗೆ ಒಳಪಡಿಸುವುದು ಸರಿಯಲ್ಲ. ಮುಖ್ಯ ಮಂತ್ರಿಗಳು ಈ ವಿಚಾರ ಕುರಿತು ಸಕಾರತಾತ್ಮಕ ನಿರ್ಧಾರ ಕೈಗೊಳ್ಳಬೇಕು ಎಂದರು. ಲಿಂಗಾಯತ ಸಮಾಜದ ಮುಖಂಡರೊಬ್ಬರನ್ನು ಸಿಬಿಐ ಪೋಲಿಸರು ಬಂದಿಸಿರುವುದು ಖಂಡನೀಯ. ವಿನಯ್ ಕುಲಕರ್ಣಿ ಅವರನ್ನು […]
ವರ್ಷಾಂತ್ಯಕ್ಕೆ ಸಿಎಂ ಬದಲಾವಣೆ: ಬ್ರಹ್ಮಾಂಡ ಗುರೂಜಿ ಭವಿಷ್ಯ
ಹಾಸನ: ಈ ವರ್ಷಾಂತ್ಯದಲ್ಲಿ ರಾಜ್ಯದ ಸಿಎಂ ಬದಲಾಗುತ್ತಾರೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮಾ ಭವಿಷ್ಯ ನುಡಿದಿದ್ದಾರೆ. ಗುರುವಾರ ಹಾಸನಾಂಬ ದೇವಿ ದರ್ಶನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಮೂರು ಮುಖ್ಯಮಂತ್ರಿಗಳ ಆಡಳಿತಾವಧಿ ನಂತರ ಕರ್ನಾಟಕವೂ ಆಂಧ್ರ-ತೆಲಂಗಾಣದಂತೆ ಒಡೆದು ಹೋಳಾಗುತ್ತದೆ. ಬೆಳಗಾವಿ ಉತ್ತರ ಕರ್ನಾಟಕದ ಕೇಂದ್ರ ಬಿಂದುವಾದರೆ ಬೆಂಗಳೂರು ದಕ್ಷಿಣದ ರಾಜಧಾನಿ ಆಗಿರುತ್ತದೆ ಎಂದೂ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಾರೆ. ಆದರೆ ಬಿಜೆಪಿಯವರೇ ಅವರನ್ನು ಪ್ರಧಾನಿ ಸ್ಥಾನದಲ್ಲಿ ಕೂರಲು ಬಿಡುವುದಿಲ್ಲ. ಅದಕ್ಕಾಗಿ […]
ಕಾಂಗ್ರೆಸ್ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ನ್ಯಾಯಾಂಗ ಬಂಧನ
ಹುಬ್ಬಳ್ಳಿ: ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ನಾಳೆ ಸಂಜೆಯ ವರೆಗೆ (ಒಂದು ದಿನ) ನ್ಯಾಯಾಂಗ ಬಂಧನ ವಿಧಿಸಿ ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯ ಆದೇಶ ನೀಡಿದೆ. ಇಂದು ಸಂಜೆ ವಿನಯ್ ಕುಲಕರ್ಣಿಯನ್ನು ಬಂಧಿಸಿದ ಸಿಸಿಬಿ ಅಧಿಕಾರಿಗಳು ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ವೇಳೆ ಸಿಬಿಐ ಅಧಿಕಾರಿಗಳು ಕಸ್ಟಡಿಗೆ ನೀಡುವಂತೆ ಮನವಿ ಮಾಡಿಕೊಂಡರು. ಆದರೆ ಕೋರ್ಟ್ ವಿನಯ್ ಕುಲಕರ್ಣಿಯನ್ನು ನಾಳೆ ಸಂಜೆಯವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಹೀಗಾಗಿ ಇಂದು ರಾತ್ರಿ […]
ಪಡುಬಿದ್ರಿ: ಈಜಲು ತೆರಳಿದ್ದ ಇಬ್ಬರು ಯುವಕರು ಮೃತ್ಯು; ಓರ್ವನ ರಕ್ಷಣೆ
ಪಡುಬಿದ್ರಿ: ಈಜಲು ಹೋಗಿದ್ದ ಮೂವರು ಯುವಕರ ಪೈಕಿ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಇನ್ನೋರ್ವ ಯುವಕನನ್ನು ರಕ್ಷಣೆ ಮಾಡಿದ ಘಟನೆ ಇಂದು ಸಂಜೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ಹೆಜಮಾಡಿ ಕಾಮಿನಿ ಹೊಳೆಯಲ್ಲಿ ನಡೆದಿದೆ. ಹೆಜಮಾಡಿಯ ಸುಲೈಮಾನ್ ಕಬೀರ್ ಎಂಬುವರ ಪುತ್ರ ಮೋಸಿನ್(16) ಮತ್ತು ರಮ್ಲಾನ್ ಎಂಬುವರ ಪುತ್ರ ಮೊಹಮ್ಮದ್ ರಾಯಿಸ್ (16) ಮೃತಪಟ್ಟ ದುರ್ದೈವಿಗಳು. ಮೊಹಮ್ಮದ್ ನಬೀಲ್ ಎಂಬಾತನನ್ನು ಸ್ಥಳೀಯರು ರಕ್ಷಿಸಿದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ಕೊರೊನಾ ಲಸಿಕೆ ಸಂಗ್ರಹಕ್ಕೆ ಕೊಠಡಿ ಸಿದ್ಧ
ಉಡುಪಿ: ಕೋವಿಡ್-19 ಮಹಾಮಾರಿಗೆ ಕಡಿವಾಣ ಹಾಕಲು ವಿಶ್ವದ ಅನೇಕ ದೇಶಗಳಲ್ಲಿ ಲಸಿಕೆ ಪ್ರಯೋಗಗಳು ನಡೆಯುತ್ತಿವೆ. ವಿಶ್ವ ಆರೋಗ್ಯ ಸಂಸ್ಥೆ ಸಹ ಕೊರೊನಾ ಲಸಿಕೆ ಪ್ರಯೋಗದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದೆ. ಸದ್ಯ ಲಸಿಕೆಯ ಅಂತಿಮ ಸಿದ್ದತೆಯಲ್ಲಿದ್ದು, ಶೀಘ್ರದಲ್ಲಿ ವಿಶ್ವದಾದ್ಯಂತ ಆರಂಭಿಕ ಲಸಿಕೆ ನೀಡುವ ಕಾರ್ಯಕ್ರಮ ಆರಂಭಗೊಳ್ಳಲಿದೆ. ಈ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಸಂಗ್ರಹ ಮಾಡಲು ಅಗತ್ಯವಿರುವ ಲಸಿಕಾ ಕೊಠಡಿ (ವಾಕ್ ಇನ್ ಕೂಲರ್)ಯನ್ನು ಸಂಪೂರ್ಣ ಸಿದ್ಧಗೊಳಿಸಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಸಿದ್ಧಗೊಂಡಿರುವ […]