ವಿದ್ಯುತ್ ದರ ಏರಿಕೆ: ಎಂಎಸ್ಎಂಇಗಳಿಗೆ ಹೊರೆ-ಅರಸಪ್ಪ

ಉಡುಪಿ: ಕರ್ನಾಟಕ ವಿದ್ಯುಚ್ಯಕ್ತಿ ನಿಯಂತ್ರಣ ಆಯೋಗವು (ಕೆಇಆರ್‌ಸಿ) ವಿದ್ಯುತ್ ದರವನ್ನು ಪ್ರತಿ ಯೂನಿಟ್‌ಗೆ ವಿದ್ಯುತ್ ದರ ₹25 ಪೈಸೆ ಹಾಗೂ ಮಾಸಿಕ ನಿಗದಿತ ಶುಲ್ಕವನ್ನು ರೂ.₹10 ಹೆಚ್ಚಳ ಮಾಡಿರುವುದರಿಂದ ಎಂಎಸ್ಎಂಇಗಳಿಗೆ ಹೊರೆಯಾಗಲಿದೆ ಎಂದು ಕಾಸಿಯಾ ಅಧ್ಯಕ್ಷ ಕೆ.ಬಿ. ಅರಸಪ್ಪ ತಿಳಿಸಿದ್ದಾರೆ. ಎಂಎಸ್‌ಎಂಇಗಳು ಕೋವಿಡ್ ಸಾಂಕ್ರಾಮಿಕ ಮತ್ತು ಆರ್ಥಿಕತೆಯ ತೀವ್ರ ಮಂದಗತಿಯಿಂದ ಕಾರ್ಯಾಚರಣೆ ಪುನರುಜ್ಜೀವನಗೊಳಿಸಲು ಹೆಣಗಾಡುತ್ತಿರುವಾಗ ಈ ಸಂದರ್ಭದಲ್ಲಿ ವಿದ್ಯುತ್ ದರ ಹೆಚ್ಚಳ ಮಾಡಿರುವುದು ಮತ್ತಷ್ಟು ಪರಿಣಾಮ ಉಂಟುಮಾಡಲಿದೆ ಎಂದು ಹೇಳಿದ್ದಾರೆ. ವಿದ್ಯುತ್ ದರದ ವಿಚಾರಣೆಯ ಸಮಯದಲ್ಲಿ ಉದ್ಯಮದ […]

ಉಡುಪಿ: ಪ್ರೋಗ್ರಾಮ್ ಕೋ ಆರ್ಡಿನೇಟರ್ ಹುದ್ದೆಗೆ ನೇರ ಸಂದರ್ಶನ

ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಎನ್‌ಪಿಸಿಡಿಸಿಎಸ್/ಎನ್‌ಪಿಹೆಚ್‌ಸಿಇ ಕಾರ್ಯಕ್ರಮದಡಿ ಜಿಲ್ಲಾ ಪ್ರೋಗ್ರಾಮ್ ಕೋ ಆರ್ಡಿನೇಟರ್ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ನವೆಂಬರ್ 9 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ. ಎಂ.ಬಿ.ಬಿ.ಎಸ್ ಆಥವಾ ಬಿ.ಎ.ಎಮ್.ಎಸ್ / ಬಿ.ಡಿ.ಎಸ್ ನೊಂದಿಗೆ ಮಾಸ್ಟರ್ ಇನ್ ಪಬ್ಲಿಕ್ ಹೆಲ್ತ್ ಹಾಗೂ ಕಂಪ್ಯೂಟರ್‌ನಲ್ಲಿ ಅನುಭವ ಹೊಂದಿದ ಅಭ್ಯರ್ಥಿಗಳು ಸ್ವ-ವಿವರ, ವಿದ್ಯಾರ್ಹತೆ, ಸೇವಾನುಭವದ ಮೂಲ ಮತ್ತು ನಕಲು […]

ರಾಜ್ಯದಲ್ಲಿ ಲವ್ ಜಿಹಾದ್ ಕೊನೆಗಾಣಿಸಲು ಕಠಿಣ ಕ್ರಮ: ಸಿಎಂ ಯಡಿಯೂರಪ್ಪ

ಮಂಗಳೂರು: ರಾಜ್ಯದಲ್ಲಿ ಲವ್ ಜಿಹಾದ್ ಕೊನೆಗಾಣಿಸಲು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಅವರು ಗುರುವಾರ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕಾರಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ ಕಠಿಣ ಕಾನೂನು ಜಾರಿಗೊಳಿಸಿ, ಹಣದ ಆಮಿಷವೊಡ್ಡಿ ಪ್ರೀತಿ ಪ್ರೇಮದಲ್ಲಿ ಹೆಸರಿನಲ್ಲಿ ನಡೆಯುವ ಮತಾಂತರಕ್ಕೆ ಕಡಿವಾಣ ಹಾಕುತ್ತೇವೆ ಎಂದರು. 18 ಮಂದಿ ಶಾಸಕರ ಸಹಾಯದಿಂದ ನಾವು ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದೇವೆ. ಮುಂದೆ ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ಪಕ್ಷ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ […]

ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ, ಸಹೋದರ ವಿಜಯ್ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ

ವಿನಯ್ ಕುಲಕರ್ಣಿ ಧಾರವಾಡ: ಇಲ್ಲಿನ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಗುರುವಾರ ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಯೋಗೀಶ್ ಗೌಡ ಇಂದು ಬೆಳಂಬೆಳಿಗ್ಗೆ ಇಲ್ಲಿನ ಬಾರಾಕೂಟ್ ದಲ್ಲಿನ ಅವರ ಮನೆಗೆ ತೆರಳಿದ ಸಿಬಿಐ ಅಧಿಕಾರಿಗಳು, ವಿನಯ ಕುಲಕರ್ಣಿ ವಶಕ್ಕೆ ಪಡೆದು ಉಪನಗರ ಠಾಣೆಗೆ ಕರೆತಂದು ವಿಚಾರಣೆ ಕೈಗೊಂಡಿದ್ದಾರೆ. 2016ರ ಜೂನ್ 15ರಂದು 2016ರಲ್ಲಿ ಧಾರವಾಡದ ಸಪ್ತಾಪುರದಲ್ಲಿ ಯೋಗೇಶ್​ ಗೌಡ ಮಾಲೀಕತ್ವದ ಜಿಮ್​ ಬಳಿ […]

ಅಮೆರಿಕಾ ಅಧ್ಯಕ್ಷ ಚುನಾವಣೆ: ಗೆಲುವಿನತ್ತಾ ಮುನ್ನುಗ್ಗುತ್ತಿರುವ ಜೊ ಬೈಡೆನ್

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಅಂತಿಮಘಟ್ಟ ತಲುಪಿದ್ದು, ಡೆಮಾಕ್ರಟಿಕ್‌ ಪಕ್ಷದ ಅಭ್ಯರ್ಥಿ ಜೊ ಬೈಡೆನ್‌ ಅವರು 264 ಎಲೆಕ್ಟೋರಲ್‌ ಮತಗಳ ಮುನ್ನಡೆಯೊಂದಿಗೆ ಅಧ್ಯಕ್ಷ ಗಾದಿಯನ್ನು ಹಿಡಿಯುವತ್ತಾ ಸಾಗುತ್ತಿದ್ದಾರೆ. ಅವರ ಪ್ರತಿಸ್ಪರ್ಧಿಯಾಗಿರುವ ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ ಡೊನಾಲ್ಡ್‌ ಟ್ರಂಪ್‌ 214 ಮತಗಳ ಮುನ್ನಡೆ ಪಡೆದಿದ್ದಾರೆ. ಅಮೆರಿಕದ ಅಧ್ಯಕ್ಷ ಸ್ಥಾನಕ್ಕೇರಲು 270 ಎಲೆಕ್ಟೋರಲ್‌ ಮತಗಳ ಮ್ಯಾಜಿಕ್‌ ಸಂಖ್ಯೆಯನ್ನು ಹೊಂದಬೇಕಿದೆ. ನವೆಡಾ ರಾಜ್ಯದಲ್ಲಿ ಮತ ಎಣಿಕೆ ಮುಂದುವರೆದದ್ದು, ಬೈಡೆನ್‌ ಅವರು 6 ಮತಗಳ ಮುನ್ನಡೆ ಸಾಧಿಸುವ ಸಾಧ್ಯತೆ […]