ಡ್ರಗ್ಸ್ ಪ್ರಕರಣ: ಮಾಜಿ ಸಚಿವರ ಪುತ್ರ ಸೇರಿ ಮೂವರ ಬಂಧನ
ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾವೇರಿಯ ರುದ್ರಪ್ಪ ಲಮಾಣಿ ಅವರ ಪುತ್ರ ದರ್ಶನ ಸೇರಿ ಮೂವರನ್ನು ಸಿಸಿಬಿ ಪೊಲೀಸರು ಗೋವಾದಲ್ಲಿ ಬಂಧಿಸಿದ್ದಾರೆ. ಡಾರ್ಕ್ ನೆಟ್ ಮೂಲಕ ಡ್ರಗ್ಸ್ ಖರೀದಿಸಿ ಮಾರಾಟ ಮಾಡುತ್ತಿದ್ದ ಆರೋಪದಡಿ ಸುಜಯ್ ಎಂಬಾತನನ್ನು ಪೊಲೀಸರು ಈಚೆಗೆ ಬಂಧಿಸಿದ್ದರು. ಆತನಿಂದ 500 ಗ್ರಾಂ ಹೈಡ್ರೊ ಗಾಂಜಾ ವಶಕ್ಕೆ ಪಡೆದಿದ್ದರು. ಇದೇ ಪ್ರಕರಣದಲ್ಲಿ ಹೇಮಂತ್ ಹಾಗೂ ಸುನೇಶ್ ಎಂಬುವರು ತಲೆಮರೆಸಿಕೊಂಡಿದ್ದರು. ಇವರಿಬ್ಬರ ಬಂಧನಕ್ಕಾಗಿ ಸಿಸಿಬಿ ಪೊಲೀಸರು ಗೋವಾಕ್ಕೆ ಹೋಗಿದ್ದು, ಅಲ್ಲಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. […]
ಮಲ್ಪೆ: ಸಮುದ್ರದಲ್ಲಿ ಮುಳುಗುತ್ತಿದ್ದ ಐವರು ಪ್ರವಾಸಿಗರ ರಕ್ಷಣೆ: ಇಬ್ಬರ ಸ್ಥಿತಿ ಗಂಭೀರ
ಮಲ್ಪೆ: ಸಮುದ್ರದಲ್ಲಿ ಮುಳುಗುತ್ತಿದ್ದ ಐವರನ್ನು ರಕ್ಷಣೆ ಮಾಡಿದ ಘಟನೆ ಇಂದು ಮಲ್ಪೆ ಕಡಲ ಕಿನಾರೆಯಲ್ಲಿ ನಡೆದಿದೆ. ಐವರ ಪೈಕಿ ಓರ್ವ ಯುವಕ ಹಾಗೂ ಯುವತಿ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಈ ಐವರು ಕೂಡ ಬೆಂಗಳೂರಿನರಾಗಿದ್ದು, ಒಟ್ಟು ಹತ್ತು ಮಂದಿ ಪ್ರವಾಸಕ್ಕೆ ಬಂದಿದ್ದರು. ಅದರಲ್ಲಿ ಐದು ಮಂದಿ ಈಜಲು ಇಳಿದಿದ್ದು, ಸಮುದ್ರದಲೆಯ ಅಬ್ಬರಕ್ಕೆ ಮುಳುಗಿದ್ದಾರೆ ಎನ್ನಲಾಗಿದೆ. ಐವರು ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡ ಜಸ್ಕಿ ಬೋಟ್ ಮತ್ತು ಪ್ರವಾಸಿಗರ ಬೋಟಿನ ಚಾಲಕರು ಕೂಡಲೇ ಅವರ ರಕ್ಷಣೆಗೆ ಧಾವಿಸಿದ್ದಾರೆ. ಅವರನ್ನು […]
ಪೆಟ್ರೋಲ್ ಸುರಿದು ಬೆಂಕಿಹಚ್ಚಿ ಜೀವಂತವಾಗಿ ಮಹಿಳೆಯನ್ನು ಸುಟ್ಟುಹಾಕಿದ ದುಷ್ಕರ್ಮಿಗಳು
ಮೈಸೂರು: ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಹೊಸಕೋಟೆ ರಸ್ತೆಯಲ್ಲಿ ಉರಿಯುತ್ತಿರುವ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಸಾವನ್ನಪ್ಪಿರುವ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಮಹಿಳೆಯನ್ನು ಕೊಲೆ ಮಾಡಿ ಬಳಿಕ ಪೆಟ್ರೊಲ್ ಸುರಿದು ಬೆಂಕಿಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮಸ್ಥರು ಪಿರಿಯಾಪಟ್ಟಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಪೇಜಾವರ ಶ್ರೀಗಳಿಗೆ ರಾಜಸ್ಥಾನ ಜಗದ್ಗುರು ಶ್ರೀ ಮಧ್ವಾಚಾರ್ಯ ಸಂಸ್ಥಾನದ ಗೌರವ ಸಮರ್ಪಣೆ
ಹರಿದ್ವಾರ: ಸುಮಾರು 5 ಶತಮಾನಗಳ ಇತಿಹಾಸ ಇರುವ ರಾಜಸ್ಥಾನದ ( ಮಹಾಭಾರತದ ತ್ರಿಗರ್ತದೇಶ) ಜಗದ್ಗುರು ಶ್ರೀ ಮಧ್ವಾಚಾರ್ಯ ಸಂಸ್ಥಾನದ ಪ್ರೇಮಪೀಠದ ( ಸಂತ ಮೀರಾಬಾಯಿ ಪರಂಪರೆ) ಆಚಾರ್ಯ ಲಲಿತ್ ಮೋಹನ್ ಓಜಾ ಅವರು ಹರಿದ್ವಾರದ ಪೇಜಾವರ ಶಾಖಾ ಮಠದಲ್ಲಿ ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಭೇಟಿಯಾಗಿ ರಾಜಸ್ತಾನದ ಸಾಂಪ್ರದಾಯಿಕ ಪೇಟಾ ತೊಡಿಸಿ ಗೌರವಿಸಿದರು. ಉಡುಪಿ ಅಷ್ಟಮಠಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಈ ಕ್ಷೇತ್ರವನ್ನು ಶ್ರೀ ಓಜಾರವರು ಉತ್ತಮ ರೀತಿಯಲ್ಲಿ ಅಭಿವೃದ್ಧಿ ಪಡಿಸಿ ಮಧ್ವಮತಪ್ರಸಾರಕಾರ್ಯ ನಡೆಸುತ್ತಿದ್ದಾರೆ. ಆದ್ದರಿಂದ ಉತ್ತರಭಾರತಕ್ಕೆ […]
ಉಡುಪಿ: ರಂಗ ಸಾಧಕರಿಗೆ ಮಲಬಾರ್ ವಿಶ್ವರಂಗ ಪುರಸ್ಕಾರ ಪ್ರದಾನ
ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಮಲಬಾರ್ ವಿಶ್ವರಂಗ ಪುರಸ್ಕಾರ -2020 ಪ್ರದಾನ ಸಮಾರಂಭವು ಉಡುಪಿ ಗೀತಾಂಜಲಿ ಬಳಿಯ ಮಲಬಾರ್ ಗೋಲ್ಡ್ ಸಂಕಿರ್ಣದಲ್ಲಿ ಭಾನುವಾರ ಜರಗಿತು. ರಂಗ ಕಲೆಗೆ ವಿಶೇಷ ಕೊಡುಗೆ ನೀಡಿದ ಸಾಧಕರಾದ ಶ್ರೀನಿವಾಸ್ ಶೆಟ್ಟಿಗಾರ್, ಡಾ. ಮಾಧವಿ ಭಂಡಾರಿ, ಜಯರಾಮ ನೀಲಾವರ, ರಾಜಗೋಪಾಲ್ ಶೇಟ್ ಹಾಗೂ ಅಭಿಲಾಷಾ ಎಸ್. ಅವರಿಗೆ ಪುರಸ್ಕಾರ ಪ್ರದಾನ ಮಾಡಲಾಯಿತು. ಬಡಗುಬೆಟ್ಟು ಕೋ-ಆಪರೇಟಿವ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕ […]