ಕಾರ್ಯಕರ್ತರ ಸಂಘಟನಾ ಸಾಮರ್ಥ್ಯದಿಂದ ಬಿಜೆಪಿ ಜಗತ್ತಿನ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ಹೊರಹೊಮ್ಮುತ್ತಿದೆ: ಶಾಸಕ ರಘುಪತಿ ಭಟ್
ಕಿನ್ನಿಮೂಲ್ಕಿ: ಬಿಜೆಪಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ರಾಜಕೀಯ ಸಂಘಟನೆಯಲ್ಲಿ ಹಾಗೂ ಪರಿಣಾಮಕಾರಿ ಜನಪರ ಆಡಳಿತಾತ್ಮಕ ನಿಲುವುಗಳ ಮೂಲಕ ಅತೀ ದೊಡ್ಡ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದ್ದು, ಇಡೀ ದೇಶವನ್ನು ವ್ಯಾಪಿಸಿಕೊಂಡಿದೆ. ಪಕ್ಷದ ಕಾರ್ಯಕರ್ತರು ದೇಶಾದ್ಯಂತ ಪಕ್ಷ ಸಂಘಟನೆಯಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡು ಬಿಜೆಪಿ ಇಂದು ಜಗತ್ತಿನ ಅತೀ ದೊಡ್ಡ ರಾಜಕೀಯ ಪಕ್ಷವಾಗಿ ಮೂಡಿ ಬರಲು ಕಾರಣೀಕರ್ತರಾಗಿದ್ದಾರೆ ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದರು. ಉಡುಪಿ ಕಿನ್ನಿಮೂಲ್ಕಿ ವೀರಭದ್ರ ದೇವಸ್ಥಾನದ ಸಭಾಂಗಣದಲ್ಲಿ ಬಿಜೆಪಿ ಉಡುಪಿ ನಗರ ಇದರ […]
ಶಿರಾ, ಆರ್ ಆರ್ ನಗರ ಉಪಚುನಾವಣೆ ಪ್ರಜಾಪ್ರಭುತ್ವದ ಗೆಲುವು: ಕುಯಿಲಾಡಿ
ಉಡುಪಿ : ಶಿರಾ ಮತ್ತು ಆರ್.ಆರ್. ನಗರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಡಾ. ರಾಜೇಶ್ ಗೌಡ ಮತ್ತು ಮುನಿರತ್ನ ಅವರ ಜಯಭೇರಿ ಪ್ರಜಾಪ್ರಭುತ್ವದ ಗೆಲುವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಈ ಗೆಲುವು ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರ ಜನಪರ ಆಡಳಿತ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಸಂಘಟನಾ ಚಾತುರ್ಯಕ್ಕೆ ಸಂದ ಗೌರವ. ಮಾತ್ರವಲ್ಲದೆ ರಾಜ್ಯ ಸರಕಾರ ಅಭಿವೃದ್ಧಿ ಕೆಲಸ ಕಾರ್ಯಗಳ ಜೊತೆಗೆ ಕೊರೊನಾ ಮಹಾಮಾರಿ ಮತ್ತು ನೆರೆ […]
ಐಪಿಎಲ್ 2020: ಐದನೇ ಬಾರಿಗೆ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಮುಂಬೈ ಇಂಡಿಯನ್ಸ್
ದುಬೈ: ಐಪಿಎಲ್ 2020 ಟೂರ್ನಿಯ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 5 ವಿಕೆಟ್ ಗಳಿಂದ ಗೆಲುವು ಸಾಧಿಸುವ ಮೂಲಕ ಐದನೇ ಬಾರಿಗೆ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿತು. ಐಪಿಎಲ್ ಟೂರ್ನಿಯಲ್ಲಿ ಮೊದಲ ಬಾರಿಗೆ ಫೈನಲ್ ಹಂತಕ್ಕೆ ತಲುಪಿದ್ದ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬ್ಯಾಟಿಂಗ್ ಮಾಡಿದ್ದು ನಿಗದಿತ ಓವರ್ ನಲ್ಲಿ 7 ವಿಕೆಟ್ ಕಳೆದುಕೊಂಡು 156 ರನ್ ಪೇರಿಸಿತ್ತು. ಸಾಧಾರಣ ಮೊತ್ತ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ಇನ್ನು 8 ಎಸೆತಗಳು ಇರುವಂತೆ 5 ವಿಕೆಟ್ […]
ನ. 12ರಂದು ರಾಷ್ಟ್ರೀಯ ಹೆದ್ದಾರಿಯ ಅಸಮರ್ಪಕ ಅಗಲೀಕರಣ ಕಾಮಗಾರಿ ವಿರೋಧಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ
ಉಡುಪಿ: ಮಲ್ಪೆ- ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿ 169ಎ ಯ ಅಸಮರ್ಪಕ ಅಗಲೀಕರಣ ಕಾಮಗಾರಿಯನ್ನು ವಿರೋಧಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನವೆಂಬರ್ 12ರಂದು ಬೆಳಿಗ್ಗೆ 10 ಗಂಟೆಗೆ ಪರ್ಕಳ ಗಾಂಧಿ ಮೈದಾನದಲ್ಲಿ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬ್ಲಾಕ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ ಹಾಗೂ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕಾಗಿ ಬ್ಲಾಕ್ […]
ಭರವಸೆಗಳ ಸಮಿತಿ ಅಧ್ಯಕ್ಷರಾಗಿ ಶಾಸಕ ಕೆ. ರಘುಪತಿ ಭಟ್ ನೇಮಕ
ಬೆಂಗಳೂರು: ಕರ್ನಾಟಕ ವಿಧಾನ ಸಭೆಯ 2020 –21ನೇ ಸಾಲಿನ ಸರಕಾರಿ ಭರವಸೆಗಳ ಸಮಿತಿಯ ಅಧ್ಯಕ್ಷರಾಗಿ ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರು ನೇಮಕಗೊಂಡಿದ್ದಾರೆ. ರಘುಪತಿ ಭಟ್ ಅವರು ಉಡುಪಿ ವಿಧಾನಸಭಾ ಕ್ಷೇತ್ರದಿಂದ ಮೂರನೇ ಬಾರಿಗೆ ಶಾಸಕರಾಗಿದ್ದಾರೆ.