ಮೋದಿ ಸರ್ಕಾರದ ದುರ್ಬಲ ನೀತಿಗಳಿಂದ ಆರ್ಥಿಕ ಹಿಂಜರಿತ: ರಾಹುಲ್ ಗಾಂಧಿ ಟೀಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ದುರ್ಬಲ ಆರ್ಥಿಕ ನೀತಿಗಳಿಂದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತವು ದೊಡ್ಡಮಟ್ಟದ ಆರ್ಥಿಕ ಹಿಂಜರಿತವನ್ನು ಎದುರಿಸುವಂತಾಗಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಟೀಕಿಸಿದ್ದಾರೆ. ಟ್ವೀಟ್ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಅವರು, ಮೋದಿ ಅವರ ಕಾರ್ಯಕ್ರಮಗಳು ಭಾರತದ ಸದೃಢ ಆರ್ಥಿಕ ವ್ಯವಸ್ಥೆಯನ್ನು ದುರ್ಬಲಗೊಳಿಸಿವೆ. ಇದರಿಂದ ಜುಲೈ– ಸೆಪ್ಟೆಂಬರ್‌ ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ  8.6ಕ್ಕೆ ಕುಸಿಯುವ ಸಾಧ್ಯತೆಯಿದೆ ಎಂದಿರುವ ಆರ್‌ಬಿಐ ವರದಿಯನ್ನುಅವರು ಪ್ರಸ್ತಾಪಿಸಿದ್ದಾರೆ.  

ಶಾಸಕ ಅಖಂಡ ಶ್ರೀನಿವಾಸ ಮೂರ್ತಿಗೆ ಅನ್ಯಾಯ ಆಗಲು ಬಿಡುವುದಿಲ್ಲ: ನಳಿನ್ ಕುಮಾರ್ ಕಟೀಲ್

ಉಡುಪಿ: ಪುಲಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಅನ್ಯಾಯ ಆಗಲು ಬಿಡುವುದಿಲ್ಲ. ಅವರೇ ಬೆಂಬಲಕ್ಕೆ ರಾಜ್ಯ ಸರ್ಕಾರ ನಿಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಉಡುಪಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿಹಚ್ಚಿದ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡವಿದೆ. ಸ್ವತಃ ಶಾಸಕರೇ ಮಾಜಿ ಮೇಯರ್ ಸಂಪತ್ ರಾಜ್ ವಿರುದ್ಧ ದೂರು ನೀಡಿದ್ದಾರೆ. ಆದರೆ ಈಗ ಸಂಪತ್ ರಾಜ್ ತನಿಖೆಯಿಂದ ತಪ್ಪಿಸಿಕೊಳ್ಳಲು ತಲೆಮರೆಸಿಕೊಂಡಿದ್ದಾರೆ. ಇನ್ನೊಂದೆಡೆ ಡಿ.ಕೆ. ಶಿವಕುಮಾರ್ […]

ಸಚಿವ ಸಂಪುಟ ವಿಸ್ತರಣೆಗೆ ಶಾಸಕರ ಒತ್ತಡ

ಬೆಂಗಳೂರು: ಉಪಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಕೂಗು ಜೋರಾಗಿ ಕೇಳಿಬರುತ್ತಿದೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸಚಿವ ಸಂಪುಟ ವಿಸ್ತರಣೆಯ ಸುಳಿವು ನೀಡುತ್ತಿದ್ದಂತೆ ಅವರನ್ನು ಭೇಟಿ ಮಾಡಿ, ಒತ್ತಡ ಹೇರುವ ಶಾಸಕರ ಸಂಖ್ಯೆಯೂ ಹೆಚ್ಚಾಗಿದೆ. ಬುಧವಾರ ಬೆಳಿಗ್ಗೆ ಸುಮಾರು ಆರಕ್ಕೂ ಹೆಚ್ಚು ಶಾಸಕರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತನಾಡಿದ್ದಾರೆ. ಅದಕ್ಕೆ ಮುನ್ನ ಈ ಶಾಸಕರು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿಯನ್ನು ಭೇಟಿ ಮಾಡಿ ಈ ಸಂಬಂಧ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ಶಾಸಕರಾದ ಮುರುಗೇಶ […]