ಪಾಕ್ ಸೈನಿಕರ ಕುತಂತ್ರಕ್ಕೆ ಭಾರತೀಯ ಸೇನೆಯ ತಕ್ಕ ಪ್ರತ್ಯುತ್ತರ: ಎಂಟು ಪಾಕ್ ಸೈನಿಕರ ಹತ್ಯೆ
ಶ್ರೀನಗರ: ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ( ಎಲ್ ಒಸಿಯಲ್ಲಿ) ಕದನ ವಿರಾಮ ಉಲ್ಲಂಘಿಸಿ ಭಾರತೀಯ ಸೇನೆಯ ಮೇಲೆ ದಾಳಿ ನಡೆಸಿದ ಪಾಕಿಸ್ತಾನ ಸೇನೆಯ ಎಸ್ ಎಸ್ ಜಿ ಕಮಾಂಡೋ ಸಹಿತ 8 ಮಂದಿ ಸೈನಿಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಪಾಕ್ ಸೇನೆಯ ಅಪಾರ ಪ್ರಮಾಣದ ಬಂಕರ್ ಗಳು, ಇಂಧನ ಡಂಪಿಂಗ್ ಮತ್ತು ಕಾರ್ಯಸ್ಥಳಗಳನ್ನು ಭಾರತೀಯ ಸೇನೆ ನಾಶಪಡಿಸಿದ್ದು, ಘಟನೆಯಲ್ಲಿ 10-12 ಪಾಕ್ ಯೋಧರು ಗಾಯಗೊಂಡಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ. ಇದಕ್ಕೂ ಮುನ್ನ ನೆರೆಯ ರಾಷ್ಟ್ರದಿಂದ ಕದನ ವಿರಾಮ […]
ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಮಕ್ಕಳಿಗಾಗಿ ವಿಶೇಷ ನೇತ್ರ ಚಿಕಿತ್ಸಾ ವಿಭಾಗ ಮತ್ತು ಎಕ್ಸ್ಪ್ರೆಸ್ ಕ್ಲಿನಿಕ್
ಮಣಿಪಾಲ: ಇಲ್ಲಿನ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮಕ್ಕಳಿಗಾಗಿ ಆರಂಭಿಸಿರುವ ವಿಶೇಷ ನೇತ್ರ ಚಿಕಿತ್ಸಾ ವಿಭಾಗ ಮತ್ತು ಎಕ್ಸ್ಪ್ರೆಸ್ ಕ್ಲಿನಿಕ್ ವಿಭಾಗವನ್ನು ಶುಕ್ರವಾರ ಉದ್ಘಾಟನೆಗೊಂಡಿತು. ಮಕ್ಕಳ ನೇತ್ರ ಚಿಕಿತ್ಸಾಲಯವನ್ನು ಆಸ್ಪತ್ರೆಯ ಡೀನ್ ಡಾ. ಶರತ್ ಕುಮಾರ್ ರಾವ್ ಮತ್ತು ಎಕ್ಸ್ಪ್ರೆಸ್ ನೇತ್ರ ಚಿಕಿತ್ಸಾಲಯವನ್ನು ಕಸ್ತೂರ್ಬಾ ಆಸ್ಪತ್ರೆಯ ಮುಖ್ಯ ನಿರ್ವಹಣಾಧಿಕಾರಿ ಸಿ. ಜಿ. ಮುತ್ತಣ್ಣ ಉದ್ಘಾಟಿಸಿದರು. ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, ಡಾ ಚಿರಂಜೊಯ್ ಮುಖೋಪಾಧ್ಯಾಯ್, ಡಾ ಪದ್ಮರಾಜ್ ಹೆಗ್ಡೆ ಮತ್ತು ನೇತ್ರಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಸುಲತಾ ವಿ ಭಂಡಾರಿ […]
ಬಿಹಾರ: ನಿತೀಶ್ ಸಂಪುಟಕ್ಕೆ ಸೇರುವುದಿಲ್ಲ- ಮಾಂಜಿ
ಪಾಟ್ನಾ: ಬಿಹಾರದಲ್ಲಿ ನಿತೀಶ್ ಕುಮಾರ್ ನೇತೃತ್ವದಲ್ಲಿ ರಚನೆಯಾಗಲಿರುವ ನೂತನ ಸರ್ಕಾರದ ಭಾಗವಾಗುವುದಿಲ್ಲ ಎಂದು ಹಿಂದೂಸ್ತಾನ್ ಆವಂ ಮೋರ್ಚಾ ಸಂಸ್ಥಾಪಕ ಜಿತನ್ ರಾಮ್ ಮಾಂಜಿ ಹೇಳಿದ್ದಾರೆ. ಎನ್ ಡಿಎ ಮೈತ್ರಿಕೂಟದ ಜತೆ ಸ್ಪರ್ಧಿಸಿದ ಮಾಂಜಿ ಅವರ ಹಿಂದೂಸ್ತಾನ್ ಆವಂ ಮೋರ್ಚಾ ಪಕ್ಷ ನಾಲ್ಕು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಆದರೆ ಹೊಸ ಸರ್ಕಾರದ ಭಾಗವಾಗುವುದಿಲ್ಲ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ನಾನು ಈ ಹಿಂದೆ ಸಿಎಂ ಆಗಿದ್ದೆ. ಹೀಗಾಗಿ ಯಾವುದೇ ಕಾರಣಕ್ಕೂ ನಿತೀಶ್ ಕುಮಾರ್ ಸಂಪುಟದಲ್ಲಿ ಸಚಿವರಾಗುವುದಿಲ್ಲ ಎಂದು […]
ಮೂವರು ಮಕ್ಕಳಿಗೆ ನೇಣುಬಿಗಿದು ತಂದೆ ಆತ್ಮಹತ್ಯೆಗೆ ಶರಣು
ಬೆಂಗಳೂರು: ಮೂವರು ಮಕ್ಕಳನ್ನು ನೇಣು ಬಿಗಿದು ಬಳಿಕ ತಂದೆಯೂ ಆತ್ಮಹತ್ಯೆ ಮಾಡಿಕೊಂಡ ಮನಕಲಕುವ ಘಟನೆ ಬೆಂಗಳೂರಿನ ಮೈಕೋ ಲೇಔಟ್ ನ ರಮಣಶ್ರೀ ಎನ್ ಕ್ಲೇವ್ ಬಳಿ ಶುಕ್ರವಾರ ನಡೆದಿದೆ. ಮೈಕೋ ಲೇಔಟ್ ನಿವಾಸಿ ಜನಕರಾಜ್ ಬಿಸ್ತಾ (32) ಆತ್ಮಹತ್ಯೆ ಮಾಡಿಕೊಂಡ ತಂದೆ. ಈತ ತನ್ನ ಮಕ್ಕಳಾದ ಸರಸ್ವತಿ (14), ಹೇಮತಿ (11) ಹಾಗೂ ಮೂರು ವರ್ಷದ ರಾಜ್ ಕುಮಾರ್ ಮಗುವಿಗೆ ನೇಣು ಬಿಗಿದು. ಬಳಿಕ ಈತನು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈತ ರಮಣಶ್ರೀ ಎನ್ ಕ್ಲೇವ್ ನಲ್ಲಿ ಸೆಕ್ಯೂರಿಟಿ […]
ನ. 17ರಿಂದಲೇ ಮಂಗಳೂರು ವಿವಿ ವ್ಯಾಪ್ತಿ ಅಂತಿಮ ಪದವಿ, ಸ್ನಾತಕೋತ್ತರ ಪದವಿ ಆರಂಭ:ವಿವಿ ಅಧೀಕೃತ ಮಾಹಿತಿ
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕಾಲೇಜುಗಳು ಹಾಗೂ ಸ್ನಾತಕೋತ್ತರ ಪದವಿ ತರಗತಿಗಳು ಡಿಸೆಂಬರ್ 1ರಿಂದ ಆರಂಭಗೊಳ್ಳಲಿದೆ ಎಂದು ಈ ಹಿಂದೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಸ್.ಯಡಪಡಿತ್ತಾಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಶಿಕ್ಷಣ ಇಲಾಖೆ ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳಲ್ಲಿ ನ.17ರಿಂದಲೇ ಕಾಲೇಜು ಆರಂಭಿಸಬೇಕು ಎಂದು ಆದೇಶ ನೀಡಿರುವ ಹಿನ್ನೆಲೆಯಲ್ಲಿ ನವೆಂಬರ್ 17ರಿಂದ ಶಾಲಾ ಕಾಲೇಜು ಆರಂಭ ಇದೀಗ ನಿಶ್ಚಿತವಾಗಿದೆ. ಸರ್ಕಾರದ ಕೋವಿಡ್ ನಿಯಮಾವಳಿಯಂತೆ ತರಗತಿಗಳು ಆರಂಭವಾಗಲಿವೆ.