ರಾಜ್ಯ ಸರ್ಕಾರ ಮರಾಠ ಅಭಿವೃದ್ದಿ ಪ್ರಾಧಿಕಾರ ಘೋಷಿಸಿ ಕನ್ನಡಿಗರನ್ನು ಕೆರಳಿಸುವ ಕೆಲಸ ಮಾಡುತ್ತಿದೆ: ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಗಡಿಭಾಗದಲ್ಲಿ ಕನ್ನಡ ಮತ್ತು ಮರಾಠಿಗರ ನಡುವೆ ಆಗಾಗ ಸಂಘರ್ಷ ನಡೆದರೂ, ರಾಜ್ಯಾದ್ಯಂತ ಎರಡೂ ಸಮುದಾಯಗಳ ಜನರು ಸೌಹಾರ್ದತೆಯಿಂದ ಬದುಕುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಮರಾಠ ಅಭಿವೃದ್ದಿ ಪ್ರಾಧಿಕಾರ ಘೋಷಿಸಿ ಅನಗತ್ಯವಾಗಿ ಕನ್ನಡಿಗರನ್ನು ಕೆರಳಿಸುವ ಮೂರ್ಖತನ ಕೆಲಸಕ್ಕೆ ಕೈಹಾಕಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬುಧವಾರ ಸರಣಿ ಟ್ವೀಟ್‌ ಮಾಡಿರುವ ಅವರು, ಯಾವುದೇ ವೈಜ್ಞಾನಿಕ ಅಧ್ಯಯನಗಳಿಲ್ಲದೆ ಜಾತಿ ಆಧಾರಿತ ನಿಗಮ-ಪ್ರಾಧಿಕಾರ ಸ್ಥಾಪನೆ ಸಮಾಜ ವಿರೋಧಿ ಮಾತ್ರವಲ್ಲ, ಪ್ರಜಾಪ್ರಭುತ್ವ ವಿರೋಧಿ ತೀರ್ಮಾನ ಎಂದು […]

ಹಸು, ಎಮ್ಮೆಗಳಿಗೆ ವಿಮೆ ಭದ್ರತೆ: ಜಾರಕಿಹೊಳಿ

ಬೆಳಗಾವಿ: ರಾಜ್ಯದ 12 ಲಕ್ಷ ಹಸು ಹಾಗೂ ಎಮ್ಮೆಗಳಿಗೆ ವಿಮಾ ಭದ್ರತೆ ಒದಗಿಸಲಾಗುವುದು ಎಂದು ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ವತಿಯಿಂದ ಬೆಳಗಾವಿಯ ಮಹಾಂತೇಶ ನಗರದ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ಆವರಣದಲ್ಲಿ ಬುಧವಾರ ನಡೆದ 67ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿಮೆಗೆ ಒಳಪಟ್ಟ ರಾಸು ಮೃತಪಟ್ಟಲ್ಲಿ ₹ 40ರಿಂದ ₹ 50ಸಾವಿರ ಪರಿಹಾರವನ್ನು ಹೈನುಗಾರರಿಗೆ ನೀಡಲಾಗುವುದು. ಕೆಎಂಎಫ್‌ ಹಾಗೂ 14 ಜಿಲ್ಲಾ ಸಹಕಾರಿ ಹಾಲು […]

ಪಕ್ಷ ಸಂಘಟನೆಯಲ್ಲಿ ಕಾರ್ಯಕರ್ತರ ಪಾತ್ರ ಮಹತ್ತರವಾದುದು: ಮಹೇಶ್ ಠಾಕೂರ್

ಉಡುಪಿ: ಪಕ್ಷ ಸಂಘಟನೆಯಲ್ಲಿ ತಳಮಟ್ಟದ ಕಾರ್ಯಕರ್ತರ ಕೊಡುಗೆ ಅಪಾರವಾಗಿದೆ ಎಂದು ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ಹೇಳಿದರು. ಉಡುಪಿ ಬಿಜೆಪಿ ಕಚೇರಿಯಲ್ಲಿ ನಡೆದ ವಿಶೇಷ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಿಜೆಪಿ ಕಾರ್ಯಕರ್ತರಿಗೆ ಮನ್ನಣೆ ನೀಡುವ ಪಕ್ಷ. ಇತರ ಪಕ್ಷಗಳಂತೆ ಕುಟುಂಬದವರಿಗೆ ಗೌರವ ಕೊಡುವ ಪಕ್ಷವಲ್ಲ. ಇತ್ತೀಚಿನ ದಿನಗಳಲ್ಲಿ ನಮ್ಮಲ್ಲಿ ಕಾರ್ಯಕರ್ತರಿಗೆ ಹೆಚ್ಚೆಚ್ಚು ಸ್ಥಾನಮಾನಗಳನ್ನು ನೀಡಲಾಗುತ್ತಿದೆ ಎಂದರು. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಕುಮಾರ್ ಶೆಟ್ಟಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ […]

ಕೋವಿಡ್ 19 ಪರಿಸ್ಥಿತಿಯೊಂದಿಗೆ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಿ: ಸುಮಿತ್ರಾ ನಾಯಕ್

ಉಡುಪಿ: ಕೋವಿಡ್ 19 ಸೋಂಕು ಇಡೀ ಜಗತ್ತಿಗೆ ತನ್ನ ಕರಾಳ ಛಾಯೆಯನ್ನು ಆವರಿಸಿ ಜನಜೀವನವನ್ನು ಅಸ್ತವ್ಯಸ್ಥ ಗೊಳಿಸಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ನೇತೃತ್ವದಲ್ಲಿ ಕೈಗೊಂಡ ಕ್ರಮಗಳಿಂದ ಭಾರತದಲ್ಲಿ ಸೋಂಕನ್ನು ನಿಯಂತ್ರಿಸುವ ಕಾರ್ಯವಾಗಿದೆ. ಸರಕಾರ ಸೂಚಿಸಿದ ನಿಯಮಾವಳಿಗಳನ್ನು ಅಷ್ಟೇ ಬದ್ಧತೆಯಿಂದ ಪಾಲಿಸಿ ಸರಕಾರದ ಪ್ರಯತ್ನಗಳಿಗೆ ಸಹಕರಿಸುವುದು ಜನಸಾಮಾನ್ಯರ ಕರ್ತವ್ಯ ಎಂದು ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್ ಕರೆನೀಡಿದರು. ಅವರು ಮಣಿಪಾಲದ ಡಾ. ಟಿಎಂಎ ಪೈ ಪಾಲಿಟೆಕ್ನಿಕ್ ನಲ್ಲಿ ರಾಷ್ಟ್ರೀಯ ನಗರ ಅರೋಗ್ಯ ಅಭಿಯಾನ, […]

ಕುಟುಂಬ ಮಿಲನ ಕಾರ್ಯಕ್ರಮದಿಂದ ಕಾರ್ಯಕರ್ತರ ಮನೋಸ್ಥೆರ್ಯ ವೃದ್ಧಿ: ಕುಯಿಲಾಡಿ

ಉಡುಪಿ: ಬಿಜೆಪಿಯ ಯಾವುದೇ ಕಾರ್ಯಕರ್ತ ಸಂಕಷ್ಟದಲ್ಲಿದ್ದಾಗ ಪರಸ್ಪರ ಸಹಾಯ ಹಸ್ತ ಚಾಚುವುದರಿಂದ ಕಾರ್ಯಕರ್ತರ ಮನೋಸ್ಥೆರ್ಯ ವೃದ್ದಿಯಾಗುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಕಾಪು ವಿಧಾನಸಭಾ ಕ್ಷೇತ್ರದ ಬೊಮ್ಮಾರಬೆಟ್ಟು ಗ್ರಾಮದ ಹಿರಿಯಡಕದಲ್ಲಿ ನಡೆದ ಬಿಜೆಪಿ ಕುಟುಂಬ ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಸುದೈವ ಕುಟುಂಬಕಂ’ ತತ್ವದಲ್ಲಿ ನಂಬಿಕೆ ಇರಿಸಿರುವ ಬಿಜೆಪಿ ಸ್ವತ: ಒಂದು ಕುಟುಂಬವಿದ್ದಂತೆ. ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನೂ ಒಂದೇ ಕುಟುಂಬದ ಸದಸ್ಯನಿದ್ದಂತೆ. ಕುಟುಂಬದ ಸರ್ವ ಸದಸ್ಯರ ಯೋಗ ಕ್ಷೇಮ ಕುಟುಂಬದಲ್ಲಿ ಆರೋಗ್ಯಕರ […]