ವಿಜಯನಗರ ಜಿಲ್ಲೆ ರಚನೆ ಬೆನ್ನಲ್ಲೇ ಬಿಜೆಪಿಗೆ ಜನ ತಕ್ಕ ಪಾಠ ಕಲಿಸುತ್ತಾರೆಂದ ಬಿಜೆಪಿ ಶಾಸಕ
ಬೆಂಗಳೂರು: ಬಳ್ಳಾರಿ ಜಿಲ್ಲೆಯಿಂದ ಹೊಸಪೇಟೆ ತಾಲ್ಲೂಕನ್ನು ಬೇರ್ಪಡಿಸಿ, ನೂತನ ವಿಜಯನಗರ ಜಿಲ್ಲೆಯನ್ನಾಗಿ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇಂದು ಸಿಎಂ ಯಡಿಯೂರಪ್ಪನವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸದ್ಯ ಸಭೆಯಲ್ಲಿ ಅನೌಪಚಾರಿಕ ಒಪ್ಪಿಗೆ ಸಿಕ್ಕಿದ್ದು, ಮುಂದಿನ ಸಭೆಯಲ್ಲಿ ಅಧಿಕೃತ ಅನುಮೋದನೆ ದೊರಕಲಿದೆ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ. ಜಿಲ್ಲೆ ಘೋಷಣೆ ಬೆನ್ನಲ್ಲೇ ಆಕ್ರೋಶ: ಬಳ್ಳಾರಿಯಿಂದ ಹೊಸಪೇಟೆ ಬೇರ್ಪಡಿಸಿ ಹೊಸ ಜಿಲ್ಲೆಯನ್ನಾಗಿ ಮಾಡಲು ಸರ್ಕಾರ ಒಪ್ಪಿಗೆ ಸೂಚಿಸಿದ […]
ನಟಿ, ಬಿಜೆಪಿ ನಾಯಕಿ ಖುಷ್ಬೂ ಪ್ರಯಾಣಿಸುತ್ತಿದ್ದ ಕಾರು ಅಪಘಾತ
ಚೆನ್ನೈ: ನಟಿ, ಬಿಜೆಪಿ ನಾಯಕಿ ಖುಷ್ಬೂ ಪ್ರಯಾಣಿಸುತ್ತಿದ್ದ ಕಾರಿಗೆ ಕಂಟೇನರ್ ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಖುಷ್ಬೂ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಅವರು ತಮಿಳುನಾಡಿನ ಕಡಲೂರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಘಟನೆ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಖುಷ್ಬೂ ಅವರು, ನಿಮ್ಮೆಲ್ಲರ ಆಶೀರ್ವಾದ ಹಾಗೂ ದೇವರ ಕೃಪೆಯಿಂದ ನಾನು ಸುರಕ್ಷಿತವಾಗಿದ್ದೇನೆ. ಕಡೂರು ಕಡೆಗೆ ನಾನು ಪ್ರಯಾಣಿಸುತ್ತಿದ್ದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನನ್ನ ಪತಿ ನಂಬಿರುವ ದೇವರು ಮುರುಗನ್ […]
ಸುಳ್ಳುಸುದ್ದಿ ತಡೆಯಲು ಸೂಕ್ತ ವ್ಯವಸ್ಥೆ ರೂಪಿಸಿ: ಕೇಂದ್ರಕ್ಕೆ ಖಡಕ್ ಸೂಚನೆ ಕೊಟ್ಟ ಸುಪ್ರೀಂ ಕೋರ್ಟ್
ನವದೆಹಲಿ: ಸುದ್ದಿವಾಹಿನಿಗಳು ಮತ್ತು ಇತರ ಮಾಧ್ಯಮಗಳಲ್ಲಿ ಸುಳ್ಳುಸುದ್ದಿ ಹಬ್ಬಿಸುವುದನ್ನು ನಿಯಂತ್ರಿಸಲು ವ್ಯವಸ್ಥೆ ರೂಪಿಸಿ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ. ತಬ್ಲೀಗ್ ಜಮಾತ್‌ನಿಂದ ಕೋವಿಡ್ ಹರಡಿತು ಎಂದು ಕೆಲವು ಸುದ್ದಿವಾಹಿನಿಗಳು ಪ್ರಸಾರ ಮಾಡಿದ್ದ ವರದಿಗಳ ವಿರುದ್ಧ ಜಮಾತ್ ಉಲೇಮಾ ಎ ಹಿಂದ್ ಸಂಘಟನೆಯು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ನ್ಯಾಯಮೂರ್ತಿಗಳಾಧ ಎ.ಎಸ್.ಬೋಪಣ್ಣ ಮತ್ತು ವಿ.ರಾಮಸುಬ್ರಮಣಿಯನ್ ಅವರಿದ್ದ ಪೀಠವು ಅರ್ಜಿಯ ವಿಚಾರಣೆ ನಡೆಸಿ ಮಂಗಳವಾರ ಈ ಸೂಚನೆ ನೀಡಿತು. ಸುದ್ದಿವಾಹಿನಿಗಳಲ್ಲಿ ಸುಳ್ಳುಸುದ್ದಿಗಳನ್ನು ತಡೆಯಲು ಕೇಬಲ್ ಟಿವಿ […]
ಎರಡು ಟ್ರಕ್ ಗಳು ಮುಖಾಮುಖಿ ಡಿಕ್ಕಿ: 9 ಮಂದಿ ದುರ್ಮರಣ, 17ಕ್ಕೂ ಹೆಚ್ಚು ಮಂದಿ ಗಂಭೀರ
ವಡೋದರಾ: ಗುಜರಾತ್ ನ ವಡೋದರಾದಲ್ಲಿ ಎರಡು ಟ್ರಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, 17ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ. ವಡೋದರಾದ ವಾಘೋಡಿಯಾ ಕ್ರಾಸ್ ರಸ್ತೆ ಬಳಿಯ ಇರುವ ಸೇತುವೆ ಬಳಿ ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ಅಪಘಾತ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದು, ಮೃತಪಟ್ಟರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆಯೇ […]
ಕೇಂದ್ರ ಸಚಿವೆಯರಿಗೆ ಅಚ್ಚರಿಯ ಉಡುಗೊರೆ ಕೊಟ್ಟ ಸಂಸದೆ ಶೋಭಾ ಕರಂದ್ಲಾಜೆ
ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆಯವರು ಕೇಂದ್ರದ ಮಹಿಳಾ ಸಚಿವರಿಗೆ ಅಚ್ಚರಿಯ ಉಡುಗೊರೆ ನೀಡಿ ಹಬ್ಬದ ಶುಭಾಶಯ ಕೋರಿದ್ದಾರೆ. ಕೇಂದ್ರ ಸಚಿವೆಯರಾದ ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ ಹಾಗೂ ಇತರೆ ಉನ್ನತ ನಾಯಕರಿಗೆ ವಿಶೇಷ ಉಡುಗೊರೆ ನೀಡಿ ಶುಭಕೋರಿದ್ದಾರೆ. ಸ್ಮೃತಿ ಇರಾನಿ, ಮನೇಕಾ ಗಾಂಧಿ, ನಿರ್ಮಲಾ ಸೀತಾರಾಮನ್, ಶೆಫಾಲಿ ವೈದ್ಯ, ದೇಬಶ್ರೀ, ಮೀನಾಕ್ಷಿ ಲೆಖಿ, ವನತಿ, ಡಿಎಂಕೆ ಕನಿಮೋಳಿ ಸೇರಿದಂತೆ ಹಲವರಿಗೆ ಉಡುಪಿ ಸೀರೆಗಳನ್ನು ಶೋಭಾ ಅವರು ಉಡುಗೊರೆಯಾಗಿ ನೀಡಿದ್ದಾರೆ. ದೀಪಾವಳಿ ಹಬ್ಬದ ಪ್ರಯುಕ್ತ […]