ರಾಜ್ಯ ಸರ್ಕಾರದಿಂದ ಸುವರ್ಣ ತ್ರಿಭುಜ ದೋಣಿ ದುರಂತದ ಮೀನುಗಾರರ ಕುಟುಂಬಕ್ಕೆ ₹ 10 ಲಕ್ಷ ಹೆಚ್ಚುವರಿ ಪರಿಹಾರ: ಯಶ್ಪಾಲ್ ಸುವರ್ಣ ಸ್ವಾಗತ
ಉಡುಪಿ: ಸುವರ್ಣ ತ್ರಿಭುಜ ಬೋಟ್ ದುರಂತದಲ್ಲಿ ಮೃತಪಟ್ಟ 7 ಮೀನುಗಾರರ ಕುಟುಂಬಗಳಿಗೆ ವಿಶೇಷ ಪ್ರಕರಣದಡಿಯಲ್ಲಿ ಹೆಚ್ಚುವರಿ ಪರಿಹಾರವಾಗಿ ತಲಾ 10 ಲಕ್ಷ ರೂಪಾಯಿಗಳನ್ನು ಮಂಜೂರು ಮಾಡಿದ ರಾಜ್ಯ ಸರಕಾರದ ನಿರ್ಧಾರವನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ ಸ್ವಾಗತಿಸಿದ್ದಾರೆ. ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ಮುಳುಗಡೆಯಾಗಿ ಕಣ್ಮರೆಯಾದ 7 ಮಂದಿ ಮೀನುಗಾರರ ಕುಟುಂಬಸ್ಥರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಮಾಡಿದ ಮನವಿಗೆ ಸ್ಪಂದಿಸಿ, […]
ಬಿಹಾರ ಮೈತ್ರಿ ಸರ್ಕಾರದ ಮೊದಲ ವಿಕೆಟ್ ಪತನ
ಪಾಟ್ನಾ: ಬಿಹಾರದಲ್ಲಿ ನಿತೀಶ್ ಕುಮಾರ್ ನೇತೃತ್ವದ ನೂತನ ಬಿಜೆಪಿ-ಜೆಡಿಯು ಮೈತ್ರಿ ಸರ್ಕಾರದ ಸಂಪುಟ ರಚನೆಯಾಗಿ ಒಂದು ವಾರ ಕೂಡ ಕಳೆದಿಲ್ಲ. ಅಷ್ಟರೊಳಗೆ ಶಿಕ್ಷಣ ಸಚಿವ ಸ್ಥಾನಕ್ಕೆ ಮೇವಾಲಾಲ್ ಚೌಧರಿ ರಾಜೀನಾಮೆ ನೀಡಿದ್ದಾರೆ. ತಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದ್ದರಿಂದ ಮೇವಾಲಾಲ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎನ್ನಲಾಗಿದೆ. ಚೌಧರಿ ಬಿಹಾರ ಕೃಷಿ ವಿವಿಯ ಕುಲಪತಿಯಾಗಿದ್ದರು. ಈ ವೇಳೆ ಪ್ರಾಧ್ಯಾಪಕರು, ಸಹಪ್ರಾಧ್ಯಾಪಕರ ನೇಮಕಾತಿಯಲ್ಲಿ ಅಕ್ರಮ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಮೇವಾಲಾಲ್ ರಾಜೀನಾಮೆ ನೀಡಿದ್ದಾರೆ ಎಂದು […]
ಸಿಎಂ ಮಾಧ್ಯಮ ಸಲಹೆಗಾರ ಹುದ್ದೆಗೆ ಮಹದೇವ ಪ್ರಕಾಶ್ ರಾಜೀನಾಮೆ
ಬೆಂಗಳೂರು: ಸಿಎಂ ಮಾಧ್ಯಮ ಸಲಹೆಗಾರ ಹುದ್ದೆಗೆ ಮಹದೇವ ಪ್ರಕಾಶ್ ರಾಜೀನಾಮೆ ನೀಡಿದ್ದಾರೆ. ಮಹದೇವ್ ಪ್ರಕಾಶ್ ಅವರು ಸಿಎಂ ಯಡಿಯೂರಪ್ಪನವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಆದರೆ ಅವರು ರಾಜೀನಾಮೆ ನೀಡಿರುವುದಕ್ಕೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.
ಆರು ಕಿ.ಮೀ. ಹಿಂಬಾಲಿಸಿಕೊಂಡು ಹೋಗಿ ಉದ್ಯಮಿಯಿಂದ ಲಕ್ಷಾಂತರ ರೂ. ದರೋಡೆ
ಬೆಂಗಳೂರು: ಆರು ಕಿ.ಮೀ ಉದ್ಯಮಿಯೊಬ್ಬರ ಕಾರನ್ನು ಹಿಂಬಾಲಿಸಿಕೊಂಡು ಹೋದ ಆರು ಜನ ದರೋಡೆಕೋರರ ತಂಡ ಉದ್ಯಮಿಯಿಂದ ₹ 6 ಲಕ್ಷ ಮೌಲ್ಯದ ರೊಲ್ಯಾಕ್ಸ್ ವಾಚ್ ದರೋಡೆ ಮಾಡಿದ ಘಟನೆ ಬೆಂಗಳೂರಿನ ಕಲ್ಯಾಣನಗರದಲ್ಲಿ ನಡೆದಿದೆ. ದ್ವಿಚಕ್ರ ವಾಹನದಲ್ಲಿ ಬಂದಿದ್ದ ಆರೋಪಿಗಳು ಉದ್ಯಮಿಯ ಆರು ಲಕ್ಷ ಮೌಲ್ಯದ ರೋಲೆಕ್ಸ್ ವಾಚ್, 2.75 ಲಕ್ಷ ರೂ. ನಗದು, ಎಟಿಎಂ ಕಾರ್ಡ್, ಬ್ಯಾಂಕ್ ಪಾಸ್ಬುಕ್ ದರೋಡೆ ಮಾಡಿದ್ದಾರೆ. ದರೋಡೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನ. 11ರಂದು ಕೇರಳ ಮೂಲದ ಉದ್ಯಮಿ ಸಮೀಲ್ […]
ವಿಜಯನಗರ ಜಿಲ್ಲೆ ರಚನೆಗೆ ವಿರೋಧ: ನ. 26ರಂದು ಬಳ್ಳಾರಿ ಜಿಲ್ಲೆ ಬಂದ್ ಗೆ ನಿರ್ಧಾರ
ಬಳ್ಳಾರಿ: ಬಳ್ಳಾರಿ ಜಿಲ್ಲೆಯಿಂದ ವಿಭಜಿಸಿ ನೂತನ ವಿಜಯನಗರ ಜಿಲ್ಲೆಗೆ ಸಂಪುಟ ಸಭೆಯಲ್ಲಿ ತಾತ್ವಿಕ ಒಪ್ಪಿಗೆ ಸಿಕ್ಕಿದ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಬಳ್ಳಾರಿ ಜಿಲ್ಲೆಯ ವಿಭಜನೆಯನ್ನು ವಿರೋಧಿಸಿ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ ನ.26 ರಂದು ಬಳ್ಳಾರಿ ಜಿಲ್ಲೆ ಬಂದ್ ಗೆ ಕರೆ ನೀಡಿದೆ. ಸ್ವಾರ್ಥಕ್ಕಾಗಿ ಬಳ್ಳಾರಿ ಜಿಲ್ಲೆಯನ್ನು ಒಡೆಯಬೇಡಿ. ಆನಂದ ಸಿಂಗ್ ತಮ್ಮ ಸ್ವಾರ್ಥಕ್ಕಾಗಿ, ಹೊಸಪೇಟೆಯಿಂದ ಹಂಪಿವರೆಗಿನ ತಮ್ಮ ಭೂಮಿಗೆ ಉತ್ತಮ ಬೆಲೆ ಬರಲಿ ಅನ್ನೋ ಕಾರಣಕ್ಕೆ ಹೊಸ ಜಿಲ್ಲೆ ರಚನೆಗೆ ಮುಂದಾಗಿದ್ದಾರೆ. ಜಿಲ್ಲೆ ಮಾಡೋದಿದ್ದರೆ […]