ಕಾರ್ಕಳ: ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ; ₹ 4,100 ದಂಡ ವಸೂಲಿ

ಕಾರ್ಕಳ: ಜಿಲ್ಲೆಯಲ್ಲಿ ಕೋಟ್ಪಾ 2003 ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ ಕಾರ್ಕಳ ತಾಲೂಕಿನ ಕುಕ್ಕುಂದೂರು ವ್ಯಾಪ್ತಿಯ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೇಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ದಾಳಿ ನಡೆಸಿ ಸೆಕ್ಷನ್ 4, 6 (ಎ) ಮತ್ತು 6(ಬಿ) ಅಡಿಯಲ್ಲಿ 24 ಪ್ರಕರಣ ದಾಖಲಿಸಿ ₹ 4100 ದಂಡ ವಸೂಲಿ ಮಾಡಲಾಯಿತು. ಎಲ್ಲಾ ಅಂಗಡಿ, ಹೋಟೇಲ್‌ಗಳಲ್ಲಿ ಆಹಾರ ಸುರಕ್ಷತಾ ಪರವಾನಿಗೆಯನ್ನು ಪರೀಕ್ಷಿಸಲಾಯಿತು. ಮಾನವನ ಆರೋಗ್ಯಕ್ಕೆ ಹಾನಿಯುಂಟು ಮಾಡುವ ತಂಬಾಕು ಉತ್ಪನ್ನಗಳ […]

ಶಿರ್ವಾ: ಅಂಗಡಿಯ ಮುಂಭಾಗವೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಯುವಕ

ಕಾಪು: ಶಿರ್ವಾದ ಪೇಟೆಯ ರಸ್ತೆಯ ಬದಿಯ ಅಂಗಡಿಯೊಂದರ ಮುಂಭಾಗದ ಕಂಬಕ್ಕೆ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ರಾತ್ರಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಮಟ್ಟಾರು ನಿವಾಸಿ ಅಕ್ಷತ್ ಪೂಜಾರಿ (35) ಎಂದು ಗುರುತಿಸಲಾಗಿದೆ. ಈತ ವಿಪರೀತ ಮದ್ಯಸೇವನೆಯ ಚಟಕ್ಕೆ ಬಿದ್ದಿದ್ದು, ಇದರಿಂದಲೇ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ. ಈತ ಗುರುವಾರ ರಾತ್ರಿಯಿಂದ ಶುಕ್ರವಾರ ಬೆಳಿಗ್ಗೆಯ ಅವಧಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಿರ್ವಾ ಪೊಲೀಸರು ತಿಳಿಸಿದ್ದಾರೆ.

ರಾಜ್ಯದಲ್ಲಿ ಶೀಘ್ರವೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿ

ಬೆಂಗಳೂರು: ದೇಶದಾದ್ಯಂತ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸುವಂತೆ ಕೂಗು ಕೇಳಿ ಬರುತ್ತಿದ್ದು, ಈ ಮಧ್ಯೆ ಗೋಹತ್ಯೆ ನಿಷೇಧ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ಬಿಜೆಪಿ ಶುಕ್ರವಾರ ತಿಳಿಸಿದೆ. ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಬದ್ಧವಾಗಿದೆ. ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಈಗಾಗಲೇ ಸರ್ಕಾರಕ್ಕೆ ಈ ಕುರಿತು ಸಲಹೆ ನೀಡಿದ್ದಾರೆ. ಇದರ […]

67ನೇ ಅಖಿಲ ಭಾರತ ಸಹಕಾರ ಸಪ್ತಾಹಕ್ಕೆ ಚಾಲನೆ

ಉಡುಪಿ: ಕರ್ನಾಟಕ ರಾಜ್ಯ ಸರಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್, ಉಡುಪಿ ಕೆನರಾ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ, ಪರ್ಕಳ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಹಾಗೂ ಸಹಕಾರ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಗರದ ಬಡಗಬೆಟ್ಟು ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಆಯೋಜಿಸಿದ್ದ 67ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉಡುಪಿ ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ರಘುಪತಿ ಭಟ್, ಭಾರತ ನಿರ್ಮಾಣಕ್ಕೆ ಸಹಕಾರಿ ಸೇರಿದಂತೆ ಎಲ್ಲರೂ ಮಾನಸಿಕವಾಗಿ ಸಿದ್ಧರಾಗಬೇಕು. ಕೊರೊನಾದಿಂದ ಸಹಕಾರಿ ಸೇರಿದಂತೆ […]

ಡಿಸೆಂಬರ್​ 5ರಂದು ಕರ್ನಾಟಕ ಬಂದ್

ಬೆಂಗಳೂರು: ಮರಾಠ ಪ್ರಾಧಿಕಾರ ರಚನೆ ವಿರೋಧಿಸಿ ಡಿಸೆಂಬರ್​ 5ರಂದು ಸಂಪೂರ್ಣ ಕರ್ನಾಟಕ ಬಂದ್ ಮಾಡಲು​ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಹೋರಾಟಗಾರ ವಾಟಾಳ್​ ನಾಗರಾಜ್​​​, ಮರಾಠ ಪ್ರಾಧಿಕಾರ ರಚನೆಯನ್ನು ಹಿಂಪಡೆಯಲು ಸಿಎಂ ಯಡಿಯೂರಪ್ಪ ಅವರಿಗೆ ಈ ತಿಂಗಳ 30ರವರೆಗೆ ಗಡುವು ನೀಡಿದ್ದೇವೆ. ಒಂದು ವೇಳೆ ಹಿಂಪಡೆಯದಿದ್ದರೆ ಡಿಸೆಂಬರ್ 5ರಂದು ರಾಜ್ಯಾದ್ಯಂತ ಬಂದ್​ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಅಂದು ಬೆಳಿಗ್ಗೆ 6ಗಂಟೆಯಿಂದ ಸಂಜೆ 6ಗಂಟೆವರೆಗೆ ಕರ್ನಾಟಕ ಸಂಪೂರ್ಣ […]