ಚಲಿಸುತ್ತಿದ್ದ ಆಟೊದಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

ಸುಳ್ಯ: ಚಲಿಸುತ್ತಿದ್ದ ಆಟೊ ರಿಕ್ಷಾದಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಳ್ಯ ದುಗ್ಗಲಡ್ಕ ನೀರಬಿದಿರೆಯ ಕೊಯಿಕುಳಿ ಶಾಲಾ ಬಳಿ ನಡೆದಿದೆ. ಮೃತರನ್ನು ಲಲಿತಾ (40) ಎಂದು ಗುರುತಿಸಲಾಗಿದೆ. ಇವರು ಸುಳ್ಯದ ತಮ್ಮ ಸಂಬಂಧಿಕರ ಮನೆಗೆ ಬರುತ್ತಿದ್ದ ವೇಳೆ ಏಕಾಏಕಿಯಾಗಿ ರಿಕ್ಷಾದಿಂದ ರಸ್ತೆಗೆ ಬಿದ್ದಿದ್ದರು. ಇದರಿಂದ ಲಲಿತಾ ಗಂಭೀರ ಗಾಯಗೊಂಡಿದ್ದು, ಅವರನ್ನು ಕೂಡಲೇ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ.
ಸುಸಜ್ಜಿತ ಉಡುಪಿ ಜಿಲ್ಲಾಸ್ಪತ್ರೆ ಕಾಮಗಾರಿ ಶೀಘ್ರದಲ್ಲೇ ಆರಂಭ: ಶಾಸಕ ರಘುಪತಿ ಭಟ್

ಉಡುಪಿ: ಮುಂದೆ ಮೆಡಿಕಲ್ ಕಾಲೇಜ್ ಆಗಿ ಪರಿವರ್ತಿಸಲು ಪೂರಕವಾಗುವಂತೆ ಅತ್ಯಾಧುನಿಕ ಮೂಲಸೌಕರ್ಯಗಳೊಂದಿಗೆ ಜಿಲ್ಲಾಸ್ಪತ್ರೆಯನ್ನು ನಿರ್ಮಿಸಲಾಗುವುದು. ಇದರ ನಿರ್ಮಾಣ ಕಾಮಗಾರಿ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಸ್ಪತ್ರೆ ನಿರ್ಮಾಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಜನಸಾಮಾನ್ಯರು ಸರಳವಾಗಿ ಆರೋಗ್ಯ ಸೇವೆಯನ್ನು ಪಡೆಯುವ ರೀತಿಯಲ್ಲಿ ಕಟ್ಟಡದ ನೀಲನಕ್ಷೆಯನ್ನು ತಯಾರಿಸಬೇಕು. ತುರ್ತು ಚಕಿತ್ಸಾ ಘಟಕ, ಹೊರರೋಗಿ ವಿಭಾಗ, ಶಸ್ತ್ರಚಿಕಿತ್ಸಾ ಕೊಠಡಿ, ಪ್ರಯೋಗಶಾಲೆ, ಡಯಾಲಿಸಿಸ್ ಕೇಂದ್ರ, ಐ.ಸಿ.ಯು ಕೇಂದ್ರಗಳು ನೆಲ […]
ಬೈಕ್ ನಲ್ಲಿ ತಾಯಿಯ ಕೈಯಿಂದ ಜಾರಿಬಿದ್ದು ಒಂದು ವರ್ಷದ ಮಗು ಮೃತ್ಯು

ಮಂಡ್ಯ: ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ತಾಯಿಯ ಕೈಯಿಂದ ಜಾರಿ ಬಿದ್ದು ಒಂದು ವರ್ಷದ ಮಗುವೊಂದು ಮೃತಪಟ್ಟ ದಾರುಣ ಘಟನೆ ಮಂಡ್ಯ ತಾಲೂಕಿನ ಕಿರಂಗಂದೂರು ಗ್ರಾಮದ ಬಳಿ ನಡೆದಿದೆ. ಚಂದಗಾಲು ಗ್ರಾಮದ ಶಿವಕುಮಾರ್- ರಂಜಿತಾ ದಂಪತಿ ಮದುವೆ ಕಾರ್ಯಕ್ರಮಕ್ಕೆ ಬೈಕ್ನಲ್ಲಿ ಹೋಗಿದ್ದರು. ಅಲ್ಲಿಂದ ವಾಪಸ್ಸಾಗುವ ವೇಳೆ ರಸ್ತೆ ಮಧ್ಯೆ ಬಂದ ಹಂಪ್ನಲ್ಲಿ ಮಗು ತಾಯಿಯ ಕೈತಪ್ಪಿ ಕೆಳಗೆ ಬಿದ್ದಿದೆ. ಈ ವೇಳೆ ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ. ಮಗುವನ್ನ ಕಳೆದುಕೊಂಡ […]