ಉಡುಪಿ: ಬೈಕ್ ಕೊಂಡುಕೊಳ್ಳಲು ನಿಗಮದಿಂದ ಸಹಾಯಧನ ಸೌಲಭ್ಯ; ಅರ್ಜಿ ಆಹ್ವಾನ
ಉಡುಪಿ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಪ್ರಸ್ತುತ ಸಾಲಿಗೆ ಇ-ವಾಣಿಜ್ಯ ಸಂಸ್ಥೆಗಳಾದ ಜೊಮೆಟೊ, ಸ್ವಿಗ್ಗಿ, ಉಬೆರ್, ಅಮೆಜಾನ್ ಮೊದಲಾದ ಸಂಸ್ಥೆಗಳಲ್ಲಿ ಉದ್ಯೋಗ ಮಾಡುತ್ತಿರುವ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, ಪ್ರವರ್ಗ 2ಎ, 3ಎ ಮತ್ತು 3ಬಿಗೆ ಸೇರಿದ ಯುವಕರಿಗೆ ಬೈಕ್ ಕೊಂಡುಕೊಳ್ಳಲು ನಿಗಮದಿಂದ ₹ 25 ಸಾವಿರ ಸಹಾಯಧನ ಹಾಗೂ ಉಳಿಕೆ ಮೊತ್ತ ಬ್ಯಾಂಕ್ ಅಥವಾ ಆರ್ಥಿಕ ಸಂಸ್ಥೆಗಳ ಮೂಲಕ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಸಾಲ ಸೌಲಭ್ಯ ಪಡೆಯಲು ಇಚ್ಚಿಸುವ […]
ಅತಿಥಿ ಶಿಕ್ಷಕರ ಹುದ್ದೆ: ಅರ್ಜಿ ಆಹ್ವಾನ
ಉಡುಪಿ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಲ್ಮರ ಮತ್ತು ಕಾಪು ತಾಲೂಕಿನ ಮಲ್ಲಾರುವಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಅತಿಥಿ ಶಿಕ್ಷಕರ ಸೇವೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನವೆಂಬರ್ 30 ರ ಒಳಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಪಶು ಚಿಕಿತ್ಸಾಲಯದ ಹತ್ತಿರ, ಶಿವಳ್ಳಿ, ಅಲೆವೂರು ರಸ್ತೆ, ಮಣಿಪಾಲ, ಉಡುಪಿ ಇಲ್ಲಿ ಅರ್ಜಿ […]
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಗೆ ರಾಜ್ಯದ ಅತ್ಯುತ್ತಮ ಸಹಕಾರಿ ಮೀನು ಮಾರಾಟ ಮಹಾಮಂಡಲ ಪ್ರಶಸ್ತಿ
ಬೆಂಗಳೂರು: ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಮೀನುಗಾರಿಕೆ ಸಹಕಾರಿ ಕ್ಷೇತ್ರದಲ್ಲಿನ ಶ್ರೇಷ್ಠ ಸೇವೆಯನ್ನು ಪರಿಗಣಿಸಿ ಮೀನುಗಾರಿಕೆ ಇಲಾಖೆಯಿಂದ ನೀಡಲ್ಪಡುವ ರಾಜ್ಯದ ಅತ್ಯುತ್ತಮ ಮೀನುಗಾರರ ಸಹಕಾರಿ ಮಹಾಮಂಡಲ ಪ್ರಶಸ್ತಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಗೆ ಲಭಿಸಿದೆ. ಇಂದು ಬೆಂಗಳೂರಿನ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಂದ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಎ. ಸುವರ್ಣ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವ ಕೋಟ ಶ್ರೀನಿವಾಸ […]
ಪ್ರಚೋದನಕಾರಿ ಭಾಷಣ ಆರೋಪ: ಕಾರ್ಕಳ ಶಾಸಕ ಸುನಿಲ್ ಕುಮಾರ್ ಗೆ ಸಮನ್ಸ್ ಜಾರಿ
ಕಾರ್ಕಳ: 2018ರ ವಿಧಾನಸಭೆ ಚುನಾವಣೆಯ ಪ್ರಚಾರದ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಕೋರಿ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಡಿಸೆಂಬರ್ 10ರಂದು ವಿಚಾರಣೆಗೆ ಹಾಜರಾಗುವಂತೆ ಕೋರಿ ಕೋರ್ಟ್ ಆದೇಶ ಜಾರಿ ಮಾಡಿದೆ. 2018ರ ವಿಧಾನಸಭೆ ಚುನಾವಣೆಯ ಪ್ರಚಾರದ ವೇಳೆ ಪ್ರಚೋದನಕಾರಿ ಭಾಷಣ ಆರೋಪ ಮಾಡಿದ್ದಾರೆಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಕಾರ್ಕಳ ನಗರ ಠಾಣೆ ಪೊಲೀಸರು ಎಫ್ ಐಆರ್ ದಾಖಲಿಸಿದ್ದರು. […]
ಪೇಜಾವರ ಶ್ರೀಗಳಿಂದ ತುಂಗಭದ್ರಾ ಪುಷ್ಕರ ಸ್ನಾನ
ಮಂತ್ರಾಲಯ: ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಮಂತ್ರಾಲಯ ಶ್ರೀ ರಾಘವೇಂದ್ರ ಮಠದ ಸುಬುಧೇಂದ್ರ ತೀರ್ಥ ಶ್ರೀಪಾದರು ತಮ್ಮ ಶಿಷ್ಯರೊಂದಿಗೆ ಶನಿವಾರ ಮಂತ್ರಾಲಯದಲ್ಲಿ ಹನ್ನೆರಡು ವರ್ಷಗಳಿಗೊಮ್ಮೆ ಬರುವ ಪವಿತ್ರ ತುಂಗಭದ್ರಾ ಪುಷ್ಕರ ತೀರ್ಥಸ್ನಾನ ಮಾಡಿದರು. ಬಳಿಕ ಪೇಜಾವರ ಶ್ರೀಪಾದರು ಗುರುರಾಯರ ದರ್ಶನ ಪಡೆದು ಕೆಲಹೊತ್ತು ರಾಯರ ಸನ್ನಿಧಿಯ ಮುಂಭಾಗ ವಿದ್ಯಾರ್ಥಿಗಳಿಗೆ ಶ್ರೀ ಮನ್ನ್ಯಾಯ ಸುಧಾ ಪಾಠ ಮಾಡಿದರು. ಅಯೋಧ್ಯೆಯ ಶ್ರೀ ರಾಮಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ನೆರವೇರುವಂತೆ ಗುರುರಾಯರಲ್ಲಿ ಪ್ರಾರ್ಥನೆ ಸಲ್ಲಿಸಿದರು. ಸುಬುಧೇಂದ್ರತೀರ್ಥರು ಪೇಜಾವರ ಶ್ರೀಗಳನ್ನು ಮಠದ […]