ಪಕ್ಷದ ವಿಚಾರಧಾರೆ ಅರಿಯಲು, ವ್ಯಕ್ತಿತ್ವ ವಿಕಸನಕ್ಕೆ ಪ್ರಶಿಕ್ಷಣ ಪೂರಕ: ಕುಯಿಲಾಡಿ
ಉಡುಪಿ: ಪ್ರಶಿಕ್ಷಣ ವರ್ಗದಂತಹ ಶಿಬಿರಗಳು ಪಕ್ಷದ ವಿಚಾರಧಾರೆಗಳನ್ನು ತಿಳಿದುಕೊಳ್ಳುವುದರ ಜತೆಗೆ ಪಕ್ಷದ ಕಾರ್ಯಕರ್ತರ ವ್ಯಕ್ತಿತ್ವ ವಿಕಸನಕ್ಕೂ ಪೂರಕವಾಗಿವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಬಿಜೆಪಿ ಉಡುಪಿ ನಗರ ಘಟಕದ ಆಶ್ರಯದಲ್ಲಿ ಮಣಿಪಾಲ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ಆಯೋಜಿಸಿದ್ದ ಎರಡು ದಿನಗಳ ಪ್ರಶಿಕ್ಷಣ ವರ್ಗ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ನಮ್ಮ ರಾಷ್ಟ್ರದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೂಡ ಪಕ್ಷದ ಪ್ರಶಿಕ್ಷಣ ವರ್ಗಗಳಲ್ಲಿ ಸಂಪೂರ್ಣವಾಗಿ ತೊಡಗಿಸಿ ಕೊಳ್ಳುತ್ತಿದ್ದಾರೆ. ಇದರಿಂದ ಪಕ್ಷದ […]
ಮಕ್ಕಳ ಎದುರಿನಲ್ಲೇ ದಂತ ವೈದ್ಯೆಯ ಬರ್ಬರ ಹತ್ಯೆ
ಆಗ್ರಾ: ದಂತ ವೈದ್ಯೆಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಇಲ್ಲಿನ ಡಾ. ನಿಶಾ ಸಿಂಘಾಲ್ ಕೊಲೆಯಾದ ದುರ್ದೈವಿ. ಸೆಟ್ ಟಾಪ್ ಬಾಕ್ಸ್ ರೀಚಾರ್ಜ್ ಮಾಡುವ ನೆಪದಲ್ಲಿ ಬಂದ ಹಂತಕನೊಬ್ಬ ಈಕೆಯನ್ನು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ನಿಶಾ ಅವರಿಗೆ 8 ಮತ್ತು 4 ವರ್ಷದ ಇಬ್ಬರು ಮಕ್ಕಳಿದ್ದು, ಇಬ್ಬರು ಪಕ್ಕದ ಕೋಣೆಯಲ್ಲಿ ಮಲಗಿದ್ದರು. ಈ ವೇಳೆಯೇ ವೈದ್ಯೆಯ ಹತ್ಯೆಯಾಗಿದೆ ಎಂದು ತಿಳಿದುಬಂದಿದೆ. ಹಂತಕ ಹರಿತವಾದ ಚಾಕುವಿನಿಂದ ನಿಶಾ ಅವರ ಕತ್ತು ಸೀಳಿ ಕೊಲೆ […]
ಭೀಕರ ರಸ್ತೆ ಅಪಘಾತ: ಏಳು ಮಂದಿಯ ದುರ್ಮರಣ
ಸೂರತ್: ಕಾರೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಜನರು ಮೃತಪಟ್ಟ ಘಟನೆ ಗುಜರಾತ್‌ನ ಸುರೇಂದ್ರನಗರ ಜಿಲ್ಲೆಯಲ್ಲಿ ಸಂಭವಿಸಿದೆ. ಸುರೇಂದ್ರನಗರ ಜಿಲ್ಲೆಯ ಪಟದಿ ಪ್ರದೇಶದಲ್ಲಿ ಈ ಭೀಕರ ದುರ್ಘಟನೆ ಸಂಭವಿಸಿದೆ ಎಂದು ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಮತ್ತೆ ಸಿಬಿಐ ಶಾಕ್
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಸಿಬಿಐ ಅಧಿಕಾರಿಗಳು ಮತ್ತೆ ಸಮನ್ಸ್ ನೀಡಿದ್ದಾರೆ. ನವೆಂಬರ್ 23 ರಂದು ವಿಚಾರಣೆಗೆ ಹಾಜರಾಗುವಂತೆ ಡಿಕೆಶಿಗೆ ನೋಟಿಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ. ಅಕ್ಟೋಬರ್ 5 ರಂದು ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಸಿಕ್ಕ ದಾಖಲೆಗಳ ಆಧಾರದ ಮೇಲೆ ಸಿಬಿಐ ಅಧಿಕಾರಿಗಳು ತನಿಖೆ ನಡೆಸ್ತಿದ್ದಾರೆ. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕೋರಿ ಸಿಬಿಐ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ ಎನ್ನಲಾಗುತ್ತಿದೆ.
ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿಗೆ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಮಂಜೂರು
ಬೆಂಗಳೂರು: ಕನ್ನಡ ಸುದ್ದಿವಾಹಿನಿ ‘ಪವರ್ ಟಿವಿ’ಯ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿಯವರಿಗೆ ಹೈ ಕೋರ್ಟ್ ವೈಯಕ್ತಿಕ ಬಾಂಡ್ ₹ 2 ಲಕ್ಷ, ಶ್ಯೂರಿಟಿಯೊಂದಿಗೆ ಷರತ್ತು ಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಪುತ್ರ ಬಿ ವೈ ವಿಜಯೇಂದ್ರ ಅವರ ವಿರುದ್ಧ ಭ್ರಷ್ಟಾಚಾರ ಆರೋಪದ ಕಾರ್ಯಕ್ರಮ ಪವರ್ ಟಿವಿಯಲ್ಲಿ ಪ್ರಸಾರವಾಗಿತ್ತು. ಇದಾದ ಬಳಿಕ ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪೆನಿ ಪ್ರೈವೆಟ್ ಲಿಮಿಟೆಡ್ ನಿರ್ದೇಶಕ ಚಂದ್ರಕಾಂತ್ ರಾಮಲಿಂಗಂ ರಾಕೇಶ್ ಶೆಟ್ಟಿ ವಿರುದ್ಧ ಬಿಡಿಎಯಿಂದ ಹಣ ಮಂಜೂರು […]