ಉಡುಪಿ: ನಗರಸಭೆಯ ಸಾಮಾನ್ಯ ಸಭೆಯ ಸಿಂಧುತ್ವ ಪ್ರಶ್ನಿಸಿ ಕಾಂಗ್ರೆಸ್ ನಿಂದ ಡಿಸಿಗೆ ಮನವಿ

ಉಡುಪಿ: ಕರ್ನಾಟಕ ಹೈಕೋರ್ಟ್ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್‍ ಗೆ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹುದ್ದೆಯನ್ನು ರದ್ದುಗೊಳಿಸಿ ಆದೇಶ ನೀಡಿದ ಹಿನ್ನೆಲೆಯಲ್ಲಿ ಉಡುಪಿ ನಗರಸಭೆಯ ಸಾಮಾನ್ಯ ಸಭೆಯ ಸಿಂಧುತ್ವ ಪ್ರಶ್ನಿಸಿ ಉಡುಪಿ ಕಾಂಗ್ರೆಸ್ ವತಿಯಿಂದ ಇಂದು ನಗರಸಭೆ ಪೌರಾಯುಕ್ತರಿಗೆ ಹಾಗೂ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಹೈಕೋರ್ಟ್ ಏಕ ಸದಸ್ಯ ಪೀಠ ಇತ್ತೀಚೆಗೆ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್‍ನ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹುದ್ದೆಯನ್ನು ರದ್ದುಗೊಳಿಸಿ ಆದೇಶ ನೀಡಿದೆ. ರೋಸ್ಟರ್ ಪದ್ದತಿಯನ್ನು […]

ಕರಾವಳಿಯಲ್ಲಿ ₹ 3986 ಕೋಟಿ ವೆಚ್ಚದಲ್ಲಿ 1348 ಕಿಂಡಿ ಅಣೆಕಟ್ಟು: ಸಚಿವ ಮಾಧುಸ್ವಾಮಿ

ಉಡುಪಿ: ರಾಜ್ಯಾದ್ಯಂತ ಅಂರ್ತಜಲವನ್ನು ಹೆಚ್ಚಿಸುವ ಉದ್ದೇಶದಿಂದ ಸಣ್ಣ ನೀರಾವರಿ ಇಲಾಖೆ ವತಿಯಿಂದ ಅನೇಕ ಯೋಜನೆಗಳನ್ನು ರೂಪಿಸಿ ಕೃಷಿ ಮತ್ತು ಕುಡಿಯುವ ನೀರಿನ ಬಳಕೆಗೆ ಆದ್ಯತೆ ನೀಡಿ, ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯದ ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ಹೇಳಿದರು. ಅವರು ಮಂಗಳವಾರ ಬೈಂದೂರಿನ ಪಡುವರಿಯಲ್ಲಿ ₹ 35 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ಕಿಂಡಿ ಅಣೆಕಟ್ಟು ಕಾಮಗಾರಿಯ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಕರಾವಳಿ ಜಿಲ್ಲೆಗಳಲ್ಲಿ ಕೃಷಿ ಮತ್ತು ಕುಡಿಯುವ ನೀರು ಉದ್ದೇಶಕ್ಕಾಗಿ ₹3986 ಕೋಟಿ ವೆಚ್ಚದಲ್ಲಿ 1348 ಕಿಂಡಿ […]

ಮೂಡುಬಿದಿರೆ: ಶಾಂಭವಿ ನದಿಗೆ ಈಜಲು ಇಳಿದ ಯುವತಿ ಸಹಿತ ನಾಲ್ವರು ನೀರುಪಾಲು

ಮೂಡುಬಿದಿರೆ: ಮದುವೆಗೆ ಬಂದಿದ್ದ ನಾಲ್ವರು ನದಿಯಲ್ಲಿ ಮುಳುಗಿ‌ ಮೃತಪಟ್ಟ ಘಟನೆ ಮೂಡುಬಿದಿರೆ ಪಾಲಡ್ಕ ಗ್ರಾಮದ ಕಡಂದಲೆಯ ಶಾಂಭವಿ ನದಿಯಲ್ಲಿ ಮಂಗಳವಾರ ಸಂಜೆ ನಡೆದಿದೆ. ಮೃತರನ್ನು ವಾಮಂಜೂರು ಮೂಡುಶೆಡ್ಡೆಯ ನಿಖಿಲ್ (18) ಹಾಗೂ ಅರ್ಶಿತಾ( 20), ವೇಣೂರಿನ ಸುಭಾಷ್ (19), ಬಜ್ಪೆ ಪೆರಾರದ ರವಿ (30)‌ ಎಂದು ಗುರುತಿಸಲಾಗಿದೆ. ಈ ನಾಲ್ವರು ಕಡಂದಲೆ ಶ್ರೀಧರ ಆಚಾರ್ಯ ಅವರ ಮನೆಗೆ ಮದುವೆ ಸಮಾರಂಭಕ್ಕೆ ಬಂದಿದ್ದರು. ಮದುವೆ ಸಮಾರಂಭದ ಬಳಿಕ ಶಾಂಭವಿ ನದಿಯಲ್ಲಿ ಈಜಲು ಹೋದಾಗ ಈ ದುರ್ಘಟನೆ ಸಂಭವಿಸಿದೆ ಎಂದು […]

ನ. 26ರಂದು‌ ಉಡುಪಿ ಶ್ರೀಕೃಷ್ಣಮಠದಲ್ಲಿ ತಪ್ತಮುದ್ರಾಧಾರಣ ಕಾರ್ಯಕ್ರಮ

ಉಡುಪಿ: ಇದೇ ನವೆಂಬರ್ 26ರಂದು ಕಾರ್ತಿಕ ಶುದ್ಧ ಏಕಾದಶಿಯಂದು ಶ್ರೀಕೃಷ್ಣ ಮಠದಲ್ಲಿ ಭಕ್ತರಿಗೆ ತಪ್ತಮುದ್ರಾಧಾರಣ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ 11 ಗಂಟೆಯಿಂದ 12.30ರ ವರೆಗೆ ರಾಜಾಂಗಣದಲ್ಲಿ ಈ ಮುದ್ರಾಧಾರಣ ಕಾರ್ಯಕ್ರಮ ಜರಗಲಿದೆ. ಪರ್ಯಾಯ ಪೀಠಾಧೀಶ ಅದಮಾರು ಮಠದ ಈಶಪ್ರಿಯತೀರ್ಥ ಸ್ವಾಮೀಜಿ ಅವರಿಂದ ಮುದ್ರಾಧಾರಣ ಕಾರ್ಯಕ್ರಮ ನಡೆಯಲಿದೆ. ಭಕ್ತರು ಅಂತರವನ್ನು ಕಾಯ್ದುಕೊಂಡು, ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಉಪಯೋಗಿಸಿ ಕೋವಿಡ್ ಮಾರ್ಗಸೂಚಿ ಪಾಲಿಸಿಕೊಂಡು ಈ ಮುದ್ರಾಧಾರಣ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ಮಠದ ಪ್ರಕಟಣೆ ತಿಳಿಸಿದೆ.

ರಾಜ್ಯ ಬಿಜೆಪಿ ಮೀನುಗಾರರ ಪ್ರಕೋಷ್ಠದ ರಾಜ್ಯ ಸಂಚಾಲಕ ಯಶ್ ಪಾಲ್ ಸುವರ್ಣರಿಗೆ ಸನ್ಮಾನ

ದಾವಣಗೆರೆ: ರಾಜ್ಯ ಬಿಜೆಪಿ ಆಶ್ರಯದಲ್ಲಿ ಇಂದು ದಾವಣಗೆರೆಯಲ್ಲಿ‌ಆಯೋಜಿಸಿದ್ದ ರಾಜ್ಯದ ವಿವಿಧ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರ ಸಭೆಯಲ್ಲಿ ಮೀನುಗಾರರ ಸಹಕಾರಿ ಕ್ಷೇತ್ರದ ವಿಶಿಷ್ಟ ಸೇವೆಗಾಗಿ ಅತ್ಯುತ್ತಮ ಮೀನು ಮಾರಾಟ ಮಹಾಮಂಡಲ ಪ್ರಶಸ್ತಿ ಪಡೆದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರು ಆಗಿರುವ ರಾಜ್ಯ ಬಿಜೆಪಿ ಮೀನುಗಾರರ ಪ್ರಕೋಷ್ಠದ ರಾಜ್ಯ ಸಂಚಾಲಕ ಯಶ್ ಪಾಲ್ ಸುವರ್ಣ ಅವರನ್ನು ರಾಜ್ಯ ಬಿಜೆಪಿ ವತಿಯಿಂದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸನ್ಮಾನಿಸಿ ಅಭಿನಂದಿಸಿದರು. […]