ಸಾಣೂರು ಯುವಕ ಮಂಡಲದಿಂದ ಮಾಹಿತಿ ಕಾರ್ಯಕ್ರಮ
ಕಾರ್ಕಳ: ಸಾಣೂರು ಯುವಕ ಮಂಡಲದ ಆಶ್ರಯದಲ್ಲಿ ರಾಷ್ಟ್ರಿಯ ಆರೋಗ್ಯ ಕಾರ್ಯಕ್ರಮಗಳ ಅರಿವು ಮೂಡಿಸುವ ಮಾಹಿತಿ ಕಾರ್ಯಕ್ರಮ ಭಾನುವಾರ ಯುವಕ ಮಂಡಲದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಂಡಲದ ಹಿರಿಯ ಸದಸ್ಯ ಶ್ಯಾಮ್ ಶೆಟ್ಟಿ ಸಾಣೂರು ಮಾತನಾಡಿ, ಆರೋಗ್ಯವಂತ ವ್ಯಕ್ತಿಯೇ ಅತ್ಯಂತ ನೆಮ್ಮದಿಯಿಂದ ಇರಲು ಸಾಧ್ಯ ಎಂದರು. ಆರೋಗ್ಯ ಇಲಾಖೆಯ ಶಶಿಧರ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಆರೋಗ್ಯಾಧಿಕಾರಿ ಕೃಷ್ಣಾನಂದ ಶೆಟ್ಟಿ ರಾಷ್ಟ್ರೀಯ ಆರೋಗ್ಯ ಇಲಾಖೆಯ ಸಂಪೂರ್ಣ ಮಾಹಿತಿ ನೀಡಿದರು. ಮಂಡಲದ ಅಧ್ಯಕ್ಷ ಪ್ರಸಾದ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. […]
ಉಚ್ಚಿಲ: ಕಾರು ಡಿಕ್ಕಿ; ಪಾದಚಾರಿ ಸಾವು
ಪಡುಬಿದ್ರಿ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಮೃತರನ್ನು ನಿಟ್ಟೆ ನಿವಾಸಿ ಸುಧಾಕರ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರು ಉಚ್ಚಿಲದ ನರ್ಸರಿಯಲ್ಲಿ ಸಸಿ ಖರೀದಿಸಿ ಹೆದ್ದಾರಿಯಲ್ಲಿ ನಡೆದುಕೊಂಡು ಉಚ್ಚಿಲ ಪೇಟೆಯ ಕಡೆಗೆ ಹೋಗುತ್ತಿದ್ದರು. ಈ ವೇಳೆ ಕುಂದಾಪುರದಿಂದ ಮಂಗಳೂರು ಕಡೆಗೆ ಹೋಗುವ ಕಾರು ಡಿಕ್ಕಿ ಹೊಡೆದಿದೆ. ಇದರಿಂದ ಸುಧಾರಕ ಶೆಟ್ಟಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗ […]
ತಮಿಳಿನ ಖ್ಯಾತ ನಟ ಥವಾಸಿ ಇನ್ನಿಲ್ಲ
ಚೆನ್ನೈ: ತಮಿಳಿನ ಖ್ಯಾತ ನಟ ಥವಾಸಿ ಸೋಮವಾರ ಸಂಜೆ ಮಧುರೈನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ‘ವರುಥಪದಥ ವಾಲಿಬಾರ್ ಸಂಗಂ’ ಚಿತ್ರದ ಮೂಲಕ ಖ್ಯಾತಿ ಗಳಿಸಿದ್ದ ಈ ನಟ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ನವೆಂಬರ್ 11ರಂದು ಮಧುರೈನ ಶರವಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ಟ್ವಿಟ್ಟರ್ ಮೂಲಕ ಈ ವಿಷಯ ತಿಳಿಸಿರುವ ಡಿಎಂಕೆ ಶಾಸಕ ಹಾಗೂ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಶರವಣನ್ ಈ ನಟನ ಸಾವಿಗೆ ಸಂತಾಪ ಸೂಚಿಸಿದ್ದಾರೆ.
ಖ್ಯಾತ ಛಾಯಾಗ್ರಾಹಕ ಫೋಕಸ್ ರಾಘು ಕ್ಯಾಮರಾದಲ್ಲಿ ಸೆರೆಯಾದ ಪಡುಕರೆಯ ನೀರ ಮಿಂಚುಳ್ಳಿಯ ಅದ್ಭುತ ದೃಶ್ಯಾವಳಿ
ಉಡುಪಿ: ಕಳೆದ ಕೆಲವು ದಿನಗಳಿಂದ ಮಲ್ಪೆ ಪಡುಕರೆ ಕಡಲ ತೀರ ರಾತ್ರಿ ವೇಳೆ ನೀಲಿ ಬಣ್ಣದಿಂದ ರೇಡಿಯಂನಂತೆ ಹೊಳೆಯುತ್ತಿರುವುದು ಕಂಡುಬರುತ್ತಿದ್ದು, ಈ ನೀರ ಮಿಂಚುಳ್ಳಿ (bioluminescence)ಯ ಅದ್ಭುತ ದೃಶ್ಯಾವಳಿಗಳನ್ನು ಉಡುಪಿಯ ಖ್ಯಾತ ಛಾಯಾಗ್ರಾಹಕ ಫೋಕಸ್ ರಾಘು ಅವರು ತಮ್ಮ ಕ್ಯಾಮರಾದ ಮೂಲಕ ಸೆರೆ ಹಿಡಿದು ವಿನೂತನ ಸಾಧನೆ ಮಾಡಿದ್ದಾರೆ. ಪೋಕಾಸ್ ರಾಘು ಅವರು ಅಂತರರಾಷ್ಟ್ರೀಯ ಛಾಯಾಚಿತ್ರಗ್ರಾಹಕರಾಗಿದ್ದು, ಅನೇಕ ಅಂತರರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳನ್ನು ಪಡೆದಿದ್ದಾರೆ. ನಿಕೋನ್ ಸಂಸ್ಥೆ ಕರ್ನಾಟಕ ರಾಜ್ಯಕ್ಕೆ Nikon Influencer ಆಗಿ ನೇಮಕ ಮಾಡಿ ಹಳ್ಳಿ […]
ಹತ್ತೇ ದಿನಕ್ಕೆ ಬಳ್ಳಾರಿ ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್ ವರ್ಗಾವಣೆ
ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತೆಯಾಗಿ ನ. 13ರಂದು ಅಧಿಕಾರ ವಹಿಸಿಕೊಂಡಿದ್ದ ಐಎಎಸ್ ಅಧಿಕಾರಿ ಪ್ರೀತಿ ಗೆಹ್ಲೋಟ್ ಅವರು ಹತ್ತೇ ದಿನಕ್ಕೆ ವರ್ಗಾವಣೆಗೊಂಡಿದ್ದು, ಅವರ ಸ್ಥಾನಕ್ಕೆ ಕೆಎಎಸ್ ಅಧಿಕಾರಿ ಎನ್. ಮಹೇಶಬಾಬು ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ರಾಜಸ್ಥಾನ ಮೂಲದ ಪ್ರೀತಿ ಗೆಹ್ಲೋಟ್ ಅವರು 2016ನೇ ಬ್ಯಾಚ್ ನ ಐಎಎಸ್ ಅಧಿಕಾರಿ. ತುಮಕೂರಿನಲ್ಲಿ ಪ್ರಭೇಷನರಿ ಪೂರ್ಣಗೊಳಿಸಿದ್ದ ಇವರು, ನಂತರ ಕುಮಟಾದಲ್ಲಿ ಸಹಾಯಕ ಆಯುಕ್ತರಾಗಿ ಹಾಗೂ ಉಡುಪಿಯಲ್ಲಿ ಜಿಪಂ ಸಿಇಒ ಆಗಿ ತಲಾ ಒಂದೊಂದು ವರ್ಷ […]