ಫುಟ್ಬಾಲ್ ದಂತಕಥೆ ಡಿಯಾಗೋ ಮರಡೋನಾ ಇನ್ನಿಲ್ಲ
ನವದೆಹಲಿ: ಫುಟ್ಬಾಲ್ ದಂತಕಥೆ ಡಿಯಾಗೋ ಮರಡೋನಾ ( 60 ) ಹೃದಯಾಘಾತದಿಂದ ಇಂದು ನಿಧನರಾದರು. ಮರಡೋನಾ ಅವರು ಎರಡು ವಾರಗಳ ಹಿಂದೆ ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಬಳಿಕ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದರು. ಇಂದು ಏಕಾಏಕಿಯಾಗಿ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ. ಮರಡೋನಾ ಸಾರ್ವಕಾಲಿಕ ಶ್ರೇಷ್ಠ ಫುಟ್ಬಾಲ್ ಆಟಗಾರ. 1986 ರಲ್ಲಿ ಅರ್ಜೆಂಟೀನಾ ವಿಶ್ವಕಪ್ ಗೆಲ್ಲುವಲ್ಲಿ ಮರಡೋನಾ ಪ್ರಮುಖ ಪಾತ್ರ ವಹಿಸಿದ್ದರು.
ನ. 29ಕ್ಕೆ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಸಮಾರಂಭ
ಎಂ.ಕೆ. ರಮೇಶ್ ಆಚಾರ್ಯ ಉಡುಪಿ: ಯಕ್ಷ ಆರಾಧನಾ ಕಿದಿಯೂರು ಟ್ರಸ್ಟ್ ಇದರ ವತಿಯಿಂದ ಇದೇ ನವೆಂಬರ್ 29ರಂದು ಮಧ್ಯಾಹ್ನ 2.30ಕ್ಕೆ ಕುಂಜಿಬೆಟ್ಟು ಗಾಯತ್ರಿ ಕಲ್ಯಾಣ ಮಂಟಪದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಸಮಾರಂಭ ನಡೆಯಲಿದೆ. ಗಣೇಶ್ ಕೊಲೆಕಾಡಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಯಕ್ಷಗಾನ ಸ್ತ್ರೀ ವೇಷಧಾರಿ ಎಂ.ಕೆ. ರಮೇಶ್ ಆಚಾರ್ಯ, ಮಂಗಳೂರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಕವಿ ಗಣೇಶ್ ಕೊಲೆಕಾಡಿ ಹಾಗೂ ಉಡುಪಿ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಾದ ಶಶಿಕಲಾ ಪ್ರಭು ಅವರನ್ನು ಸಂಸ್ಥೆಯ ವತಿಯಿಂದ […]
ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯ ಕಾರ್ಯದರ್ಶಿಯಾಗಿ ಯತೀಶ್ ಕರ್ಕೆರ ನೇಮಕ
ಉಡುಪಿ: ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾಗಿದ್ದ ಯತೀಶ್ ಕರ್ಕೆರ ಅವರನ್ನು ರಾಜ್ಯ ಕಾಂಗ್ರೆಸ್ ವರಿಷ್ಠರ ನಿರ್ದೇಶನದ ಮೇರೆಗೆ ಪಕ್ಷದ ಹೆಚ್ಚಿನ ಸಂಘಟನಾ ದೃಷ್ಠಿಯಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷರಾಗಿ ಸಂಕಪ್ಪ ಎ. ನೇಮಕ
ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ನೂತನ ಅಧ್ಯಕ್ಷರಾಗಿ ವಕೀಲ ಸಂಕಪ್ಪ ಎ. ಅವರು ನೇಮಕಗೊಂಡಿದ್ದಾರೆ. ರಾಜ್ಯ ಕಾಂಗ್ರೆಸ್ ವರಿಷ್ಠರ ನಿರ್ದೇಶನದ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಕೊಡವೂರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಉಡುಪಿ: ಗಾಯಾಳು ಗರುಡ ಪಕ್ಷಿಯ ರಕ್ಷಣೆ
ಉಡುಪಿ: ರೆಕ್ಕೆಗೆ ಬಲವಾದ ಗಾಯವಾಗಿ ಹಾರಲಾಗದೆ ಅಸಹಾಯಕ ಸ್ಥಿತಿಯಲ್ಲಿ ಉದ್ಯಾವರ ಸಮೀಪ ಕಂಡುಬಂದ ಗರುಡ ಪಕ್ಷಿಯನ್ನು ರಕ್ಷಿಸಿ ಚಿಕಿತ್ಸೆ ನೀಡಲಾಗಿದೆ. ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ರಾಮದಾಸ್ ಪಾಲನ್ ಉದ್ಯಾವರ, ತಾರಾನಾಥ್ ಮೇಸ್ತ ಶಿರೂರು ಅವರು ಗಾಯಾಳು ಗರುಡ ಪಕ್ಷಿಯನ್ನು ರಕ್ಷಿಸಿದ್ದು, ನಂತರ ಉಪವಲಯ ಅರಣ್ಯಾಧಿಕಾರಿ ಗುರುರಾಜ್ ಕಾವ್ರಾಡಿ ಅವರ ವಶಕ್ಕೆ ನೀಡಿದ್ದಾರೆ. ಈ ಸಂದರ್ಭ ಅರಣ್ಯ ರಕ್ಷಕ ಕೇಶವ ಪೂಜಾರಿ, ಸಿಬ್ಬಂದಿ ಜೋಯ್ ಉಪಸ್ಥಿತರಿದ್ದರು.