ಬಿಹಾರ: ಬಿಜೆಪಿ-ಜೆಡಿಯು ಮೈತ್ರಿ ಸರ್ಕಾರ ಉರುಳಿಸಲು ಮಾಸ್ಟರ್ ಪ್ಲ್ಯಾನ್ ರೂಪಿಸುತ್ತಿರುವ ಲಾಲು.!

ಪಟ್ನಾ: ಆರ್ ಜೆಡಿ ಪಕ್ಷದ ಸಂಸ್ಥಾಪಕ ಲಾಲು ಪ್ರಸಾದ್ ಯಾದವ್ ಜೈಲಿನಲ್ಲಿ ಇದ್ದುಕೊಂಡೇ ಬಿಹಾರದ ಎನ್ ಡಿಎ ಮೈತ್ರಿ ಕೂಟ ಸರ್ಕಾರವನ್ನು ಉರುಳಿಸಲು ಸಂಚು ರೂಪಿಸುತ್ತಿದ್ದಾರ.?. ಈ ರೀತಿಯ ಸುದ್ದಿಯೊಂದು ಈಗ ಬಿಹಾರಾದ್ಯಂತ ಸದ್ದು ಮಾಡುತ್ತಿದೆ. ಅಲ್ಲದೆ, ನಿತೀಶ್ ಕುಮಾರ್ ನೇತೃತ್ವದ ಸರ್ಕಾರವನ್ನು ಕೆಡವಲು ಲಾಲು ಬಿಹಾರದ ಎನ್‌ಡಿಎ ಶಾಸಕರನ್ನು ತಮ್ಮತ್ತ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿಯ ಹಿರಿಯ ಮುಖಂಡ ಸುಶೀಲ್ ಕುಮಾರ್ ಮೋದಿ ಆರೋಪಿಸಿದ್ದಾರೆ. ಮೇವು ಹಗರಣ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯದಿಂದ ಶಿಕ್ಷೆಗೊಳಗಾಗಿರುವ 72 […]

ನಿವಾರ್ ಚಂಡಮಾರುತ ಭೀತಿ: ಹಲವು ರಾಜ್ಯಗಳಲ್ಲಿ ರೆಡ್ ಅಲರ್ಟ್ ಘೋಷಣೆ

ನವದೆಹಲಿ: ಇಂದು ರಾತ್ರಿ 8 ಗಂಟೆಗೆ ನಿವಾರ್ ಚಂಡಮಾರುತ ತಮಿಳುನಾಡಿನ ಕರಾವಳಿ ತೀರಕ್ಕೆ ಅಪ್ಪಳಿಸಲಿದೆ. ಇದು ತೀವ್ರ ಸ್ವರೂಪ ಪಡೆಯುವ ಸಾಧ್ಯತೆ ಇದೆ ಎಂದು ಹವಾಮಾನ ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶದ ಹಲವು ಭಾಗಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಂಗಳವಾರ ರಾತ್ರಿಯೇ ನಿವಾರ್ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದೆ. ಬುಧವಾರ ಅದು ತಮಿಳುನಾಡು ಮತ್ತು ಪುದುಚೇರಿಯನ್ನು ಕಾರೈಕಲ್ ಮತ್ತು ಮಾಮಲ್ಲಪುರಂ ನಡುವೆ ಹಾದು ಹೋಗಲಿದೆ. ಈ ವೇಳೆಗೆ ಗಂಟೆಗೆ 120-130 ಕಿಮೀ […]

ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ಸೇರಿ ನಾಲ್ವರು ದುರ್ಮರಣ

ಗದಗ: ಕಾರು ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಸಹಿತ ನಾಲ್ಕು ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಗದಗ ರಸ್ತೆಯ ದುಂದೂರ ಕ್ರಾಸ ಬಳಿ ಬುಧವಾರ ಬೆಳಿಗ್ಗೆ ಸಂಭವಿಸಿದೆ. ಮೃತರು ಒಂದೇ ಕುಟುಂಬದ ಸಣ್ಣ ಗಂಗಣ್ಣ(52), ನಾಗಮ್ಮ(48), ಈರಣ್ಣ(24) ಹಾಗೂ ಹನಮಂತ (37)ಎಂದು ತಿಳಿದು ಬಂದಿದೆ. ಗಾಯಗೊಂಡ ಸಣ್ಣಈರಣ್ಣ(50) ಮತ್ತು ಲಕ್ಷ್ಮಿ (20)ಎಂಬುವರನ್ನು ಹೆಚ್ಚಿನ ಚಿಕಿತ್ಸೆಗೆ ಗದಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಕಾರವಾರಕ್ಕೆ ಚಿಕಿತ್ಸೆಗಾಗಿ ಹೋಗುತ್ತಿದ್ದ ವೇಳೆ ಹುಬ್ಬಳ್ಳಿಯಿಂದ […]

ಕಾಂಗ್ರೆಸ್ ಹಿರಿಯ ಮುಖಂಡ ಅಹ್ಮದ್ ಪಟೇಲ್‌ ವಿಧಿವಶ

ಗುರುಗ್ರಾಮ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ಅಹ್ಮದ್ ಪಟೇಲ್‌ (71) ಕೋವಿಡ್‌ನಿಂದ ಬುಧವಾರ ಬೆಳಿಗ್ಗೆ ನಿಧನ ಹೊಂದಿದರು. ಕಳೆದ ಎರಡು ವಾರಗಳ ಹಿಂದೆ ಅವರಿಗೆ ಕೋವಿಡ್‌–19 ದೃಢಪಟ್ಟಿತ್ತು. ಎರಡು ವಾರಗಳಿಂದ ಗುರುಗ್ರಾಮದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಐದಾರು ದಿನಗಳಿಂದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಬುಧವಾರ ಮುಂಜಾನೆ 3.30ರ ಸುಮಾರಿಗೆ ನಿಧನರಾದರು ಎಂದು ಅವರ ಪುತ್ರ ಫೈಸಲ್ ಟ್ವೀಟ್ ಮಾಡಿದ್ದಾರೆ. ಸೋನಿಯಾ ಗಾಂಧಿ ಕುಟುಂಬಕ್ಕೆ ಅಹ್ಮದ್ ಪಟೇಲ್ […]