ಕಾರ್ಕಳ: ಪೂರ್ಣಿಮಾ ಸಿಲ್ಕ್ಸ್ ಮುದ್ದುಕಂದ ಸ್ಪರ್ಧೆಯ ಬಹುಮಾನ ವಿತರಣೆ

ಕಾರ್ಕಳ: ರೋಟರಿ ಅನ್ಸ್ ಮತ್ತು ನಮ್ಮ ಕಾರ್ಲ ವಾಹಿನಿಯ ಆಶ್ರಯದಲ್ಲಿ ಜೋಡುರಸ್ತೆಯ ಪೂರ್ಣಿಮಾ ಸಿಲ್ಕ್ಸ್ ಪ್ರಾಯೋಜಕತ್ವದಲ್ಲಿ ಆಯೋಜಿಸಿದ್ದ ಮುದ್ದುಕಂದ ಸ್ಫರ್ಧೆಯ ಬಹುಮಾನ ವಿತರಣಾ ಸಮಾರಂಭವು ಜೋಡುರಸ್ತೆಯ ಪೂರ್ಣಿಮಾ ಸಿಲ್ಕ್ಸ್ ನಲ್ಲಿ ನ. 24ರಂದು ಜರಗಿತು. ರಾಜಪುರ ಸಾರಸ್ವತ ಕ್ರೆಡಿಟ್ ಕೋ- ಅಪ್ ಸೊಸೈಟಿಯ ಅಧ್ಯಕ್ಷ ಕಡಾರಿ ರವಿಂದ್ರ ಪ್ರಭು ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಬಿಜೆಪಿ ಯುವಮೊರ್ಚಾದ ಉಪಾಧ್ಯಕ್ಷ ಮುಟ್ಲುಪಾಡಿಯ ಸುಹಾಸ್ ಶೆಟ್ಟಿ ಮಾತನಾಡಿ, ಪೂರ್ಣಿಮಾ ಸಿಲ್ಕ್ಸ್ ಪಾಲುದಾರ ರವಿಪ್ರಕಾಶ್ ಪ್ರಭು ಲಾಭಾಂಶದ ಒಂದು ಭಾಗವನ್ನು ಸಾಮಾಜಿಕ […]

ಉಡುಪಿ: ಸಮೃದ್ಧಿ ಯೋಜನೆಯಡಿ ₹ 10 ಸಾವಿರ ಪ್ರೋತ್ಸಾಹಧನ– ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಬೀದಿ ಬದಿ ವ್ಯಾಪಾರ ನಡೆಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಸಮೃದ್ಧಿ ಯೋಜನೆಯಡಿ ₹ 10 ಸಾವಿರ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 24 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಮಣಿಪಾಲ, ದೂರವಾಣಿ […]

ಉಡುಪಿ: ವಿವಿಧ ಯೋಜನೆಗಳಿಗೆ ಧನಸಹಾಯ- ಅರ್ಜಿ ಆಹ್ವಾನ

udupixpress

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ನೊಂದಾಯಿತ ಸಾಂಸ್ಕೃತಿಕ ಸಂಘ ಸಂಸ್ಥೆಗಳು ಏರ್ಪಡಿಸುವ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ, ಅಸಂಘಟಿತ ತಂಡಗಳು / ಏಕವ್ಯಕ್ತಿ ಕಲಾವಿದರಿಗೆ ವಾದ್ಯ ಪರಿಕರ / ವೇಷಭೂಷಣ ಖರೀದಿಗೆ ಹಾಗೂ ಚಿತ್ರಕಲೆ ಮತ್ತು ಶಿಲ್ಪಕಲೆಗಳ ಏಕವ್ಯಕ್ತಿ / ತಂಡದ ಕಲಾವಿದರಿಗೆ ಕಲಾಕೃತಿಗಳ ಪ್ರದರ್ಶನ ಏರ್ಪಡಿಸಲು ಧನಸಹಾಯ ನೀಡಲು Sevasindhu.karnataka.gov.in ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 27 ಕೊನೆಯ […]

ಕುಂದಾಪುರ: ವಂಡ್ಸೆ ಯುವತಿ ನಾಪತ್ತೆ

ಉಡುಪಿ: ಕುಂದಾಪುರ ತಾಲೂಕು ವಂಡ್ಸೆ ಗ್ರಾಮದ ಶಾರ್ಕೆ ಮೂಕಾಂಬಿಕಾ ಜನತಾ ಕಾಲೋನಿಯ ನಿವಾಸಿ ರೆಹನಾ ಬಾನು (18) ಎಂಬುವವರು ನವೆಂಬರ್ 5 ರಿಂದ ಕಾಣೆಯಾಗಿದ್ದಾರೆ. ಚಹರೆ: 5 ಅಡಿ ಎತ್ತರವಿದ್ದು, ಗೋದಿ ಮೈ ಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಹಿಂದಿ, ಉರ್ದು ಭಾಷೆ ಬಲ್ಲವರಾಗಿದ್ದು, ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 08254-258233, 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂರವಾಣಿ ಸಂಖ್ಯೆ: 08254-251031, 9480805434, ಕಂಟ್ರೋಲ್ ರೂಂ : […]

ನವೆಂಬರ್ 29ಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉಡುಪಿಗೆ ಭೇಟಿ

ಉಡುಪಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನವೆಂಬರ್ 29ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಂದು ಬೆಳಿಗ್ಗೆ 8 ಗಂಟೆಗೆ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಮುಗಿಸಿ ಬೆಳಿಗ್ಗೆ 10.45ಕ್ಕೆ ಉಡುಪಿಗೆ ಆಗಮಿಸುವರು. ಬಳಿಕ ಬೆಳಿಗ್ಗೆ 11ಗಂಟೆಗೆ ಉಡುಪಿ ಮಿಷನ್ ಆಸ್ಪತ್ರೆ ಬಳಿಯ ಬಾಸೆಲ್ ಮಿಷನರೀಸ್ ಮೆಮೋರಿಯಲ್ ಆಡಿಟೋರಿಯಂನಲ್ಲಿ ನಡೆಯುವ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಅವರು ಭಾಗವಹಿಸಲಿದ್ದಾರೆ. ಆ ಬಳಿಕ ಮಧ್ಯಾಹ್ನ 2 ಗಂಟೆಗೆ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ […]