ಭಾರತದ ಐಟಿ ಉದ್ಯಮದ ಪಿತಾಮಹ ಇನ್ನಿಲ್ಲ

ಬೆಂಗಳೂರು: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌(ಟಿಸಿಎಸ್)ನ ಸ್ಥಾಪಕ ಮತ್ತು ಭಾರತದ ಐಟಿ ಉದ್ಯಮದ ಪಿತಾಮಹ ಎಂದೇ ಕರೆಯಲ್ಪಡುವ ಫಕೀರ್ ಚಂದ್ ಕೊಹ್ಲಿ (96) ಅವರು ಗುರುವಾರ ನಿಧನ ಹೊಂದಿದರು. ಕೊಹ್ಲಿ ಅವರು 1924ರ ಮಾರ್ಚ್ 19 ರಂದು ಪಾಕಿಸ್ತಾನದ ಪೇಶಾವರ್ ನಲ್ಲಿ ಜನಿಸಿದರು. ಪೇಶಾವರದಲ್ಲಿಯೇ ಶಾಲಾ ಶಿಕ್ಷಣವನ್ನು ಮಾಡಿದ ಅವರು, ಲಾಹೋರ್‌ನ ಪಂಜಾಬ್ ವಿಶ್ವವಿದ್ಯಾಲಯದಿಂದ ಬಿಎ ಮತ್ತು ಬಿಎಸ್ಸಿ ಪದವಿ ಪಡೆದರು. ನಂತರ 1948 ರಲ್ಲಿ ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಮುಗಿಸಿದರು. ಕೆನಡಿಯನ್ ಜನರಲ್ ಎಲೆಕ್ಟ್ರಿಕ್ ಕಂಪನಿಯಲ್ಲಿ ಒಂದು ವರ್ಷ […]

ಬಿಜೆಪಿ ಗ್ರಾಮ ಸ್ವರಾಜ್ಯ ಸಮಾವೇಶ ನಾಳೆ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನಾಳೆ (ನ. 27) ಬೆಳಿಗ್ಗೆ 11ಗಂಟೆಗೆ ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಹಾಗೂ ಮಧ್ಯಾಹ್ನ 2.30ಕ್ಕೆ ಉಡುಪಿ ಅಂಬಾಗಿಲಿನ ಅಮೃತ್‌ ಗಾರ್ಡನ್ ನಲ್ಲಿ ‘ಗ್ರಾಮ ಸ್ವರಾಜ್ಯ ಸಮಾವೇಶ’ ಆಯೋಜಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಉಡುಪಿ ಬಿಜೆಪಿ ಕಚೇರಿಯಲ್ಲಿ ಗುರುವಾರ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ಉಡುಪಿ ಗ್ರಾಮಾಂತರ, ಕುಂದಾಪುರ, ಬೈಂದೂರು ಮಂಡಲಗಳಿಗೆ ಸಂಬಂಧಿಸಿದಂತೆ ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಸಮಾವೇಶ ನಡೆಯಲಿದೆ. ಉಡುಪಿ […]

ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಶ್ರೀ ಮಧ್ವಶಂಕರ’ ಹೆಸರಿಡುವುದು ಸೂಕ್ತ: ಪುತ್ತಿಗೆ ಶ್ರೀ

ಉಡುಪಿ: ಮಂಗಳೂರು ವಿಮಾನ ನಿಲ್ದಾಣಕ್ಕೆ ಶ್ರೀ ಮಧ್ವಶಂಕರ ಹೆಸರಿಟ್ಟರೆ ಉತ್ತಮ. ಇದರಿಂದ ದಾರ್ಶನಿಕ ಪರಂಪರೆಗೆ ಗೌರವ ಸಿಗುತ್ತದೆ ಎಂದು ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಬೇರೆ ಹೆಸರಿಡಲು ಒತ್ತಾಯ ಕೇಳಿಬಂದ ಹಿನ್ನೆಲೆಯಲ್ಲಿ ಶ್ರೀಗಳು ಈ ಸಲಹೆ ನೀಡಿದ್ದಾರೆ. ಉತ್ತರ ಭಾರತದಲ್ಲಿ ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಶ್ರೀರಾಮನ ಹೆಸರಿಡಲಾಗಿದೆ. ದಕ್ಷಿಣ ಭಾರತದಲ್ಲಿ ಮಾಧ್ವಚಾರ್ಯರು, ಶಂಕರಾಚಾರ್ಯರು ಮಠಗಳನ್ನು ಸ್ಥಾಪಿಸಿ ಆಧ್ಯಾತ್ಮಿಕತೆಯ ಪ್ರಚಾರ ಮಾಡಿದ್ದಾರೆ. ಶಂಕರಾಚಾರ್ಯರು ಶೃಂಗೇರಿ ಮಠ ಸ್ಥಾಪಿಸಿದ್ದಾರೆ. ಮಾಧ್ವಚಾರ್ಯರು ಉಡುಪಿ ಕೃಷ್ಣಮಠ […]

ಮಾರ್ಕೆಟಿಂಗ್ ಕಮ್ಯುನಿಕೇಶನ್ ಅಡ್ವಟೈಸಿಂಗ್ ಲಿಮಿಟೆಡ್ ಅಧ್ಯಕ್ಷರಾಗಿ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ನೇಮಕ

ಬೆಂಗಳೂರು: ಕರ್ನಾಟಕ ಸರಕಾರದ ಮಾರ್ಕೆಟಿಂಗ್ ಕಮ್ಯುನಿಕೇಶನ್ ಅಡ್ವಟೈಸಿಂಗ್ ಲಿಮಿಟೆಡ್ ಬೆಂಗಳೂರು ಇದರ ಅಧ್ಯಕ್ಷರಾಗಿ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅವರನ್ನು ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಪರಿಷತ್ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ ಸಿದ್ಧತೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ ಅವರ ವಿರುದ್ಧ ಬಿಜೆಪಿ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾಗಿದ್ದು, ವಿಧಾನ ಪರಿಷತ್ ಕಾರ್ಯದರ್ಶಿಗೆ ಅವಿಶ್ವಾಸ ನೋಟಿಸ್ ನೀಡಿದೆ. ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಸದನದಲ್ಲಿ ನಿಷ್ಪಕ್ಷವಾಗಿ ವರ್ತಿಸದೇ ಕಾಂಗ್ರೆಸ್‌ ಸದಸ್ಯರಂತೆ ನಡೆದುಕೊಳ್ಳುತ್ತಿದ್ದಾರೆ. ಆ ಮೂಲಕ ಸಂವಿಧಾನದ ಆಶಯಕ್ಕೆ ಧಕ್ಕೆ ತಂದಿದ್ದಾರೆ ಎಂದು ನೋಟಿಸ್‌ನಲ್ಲಿ ಬಿಜೆಪಿ ಉಲ್ಲೇಖಿಸಿದೆ. ಬಹುಮತದ ಕೊರತೆ: ಇತ್ತೀಚೆಗೆ ನಡೆದ ವಿಧಾನಪರಿಷತ್ತಿನ ನಾಲ್ಕು ಸ್ಥಾನಗಳ ಚುನಾವಣೆಯಲ್ಲಿ ಎಲ್ಲ ಸ್ಥಾನಗಳನ್ನೂ ಬಿಜೆಪಿ ಗೆದ್ದುಕೊಂಡಿದೆ. ಆದರೂ ಬಹುಮತಕ್ಕೆ 6 ಸ್ಥಾನಗಳ […]