ಶಿಕ್ಷಕ, ಅಂಕಣಕಾರ ಟಿ. ದೇವಿದಾಸ್ ಅವರಿಗೆ ಗುರುಭೂಷಣ ಪ್ರಶಸ್ತಿ
ಮೈಸೂರು: ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ತು ನೀಡುವ ಗುರು ಭೂಷಣ ಪ್ರಶಸ್ತಿಗೆ ಶಿಕ್ಷಕ, ಅಂಕಣಕಾರ ಟಿ. ದೇವಿದಾಸ್ ಅವರು ಆಯ್ಕೆಯಾಗಿದ್ದು, ಇಂದು (ನ. 27)ರಂದು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ದೇವಿದಾಸ್ ಚಿಕ್ಕಮಗಳೂರು ಜಿಲ್ಲೆಯ ಸಂಗಮೇಶ್ವರ ಪೇಟೆಯಲ್ಲಿರುವ ಉಡುಪಿ ಅದಮಾರು ಮಠ ಎಜ್ಯುಕೇಶನ್ ಕೌನ್ಸಿಲ್ ನಡೆಸುತ್ತಿರುವ ಪೂರ್ಣಪ್ರಜ್ಞಾ ಆಂಗ್ಲಮಾಧ್ಯಮ ವಸತಿ ವಿದ್ಯಾಕೇಂದ್ರದಲ್ಲಿ ಕಳೆದ 21 ವರ್ಷದಿಂದ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲದೇ ಉತ್ತಮ ಬರಹಗಾರರಾಗಿದ್ದು, ವಿಶ್ವವಾಣಿ ಪತ್ರಿಕೆಯ ಅಂಕಣಕಾರರಾಗಿದ್ದಾರೆ. 5 ಕೃತಿಗಳನ್ನು […]
ಸಿದ್ದರಾಮಯ್ಯ ಸರ್ಕಾರ ನಡೆಸಿದ್ದೆ ಡ್ರಗ್ಸ್ ದಂಧೆಯಿಂದ: ನಳಿನ್ ಕುಮಾರ್ ಆರೋಪ
ಉಡುಪಿ: ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಮಿತಿಮೀರಿತ್ತು. ಅವರು ಐದು ವರ್ಷ ವರ್ಷಗಳ ಕಾಲ ಸರಕಾರ ನಡೆಸಿದ್ದೆ ಡ್ರಗ್ಸ್ ಮಾಫಿಯಾದಿಂದ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಶುಕ್ರವಾರ ಅಂಬಾಗಿಲು ಅಮೃತ್ ಗಾರ್ಡನ್‌ನಲ್ಲಿ ಆಯೋಜಿಸಲಾದ ಗ್ರಾಮ ಸ್ವರಾಜ್ಯ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿ ಯಡಿಯೂರಪ್ಪ ಡ್ರಗ್ಸ್ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವ ಮೂಲಕ ಡ್ರಗ್ಸ್ ಮುಕ್ತ ಕರ್ನಾಟಕ ಮಾಡಲು ಹೊರಟಿದ್ದಾರೆ. ಲವ್ ಜಿಹಾದ್ ವಿರುದ್ಧ […]
ಉಡುಪಿ: ಚಿತ್ರ ಪ್ರದರ್ಶನ ಆರಂಭಿಸಿದ ಡಯಾನ ಚಿತ್ರಮಂದಿರ
ಉಡುಪಿ: ಕೋವಿಡ್ ಕಾರಣದಿಂದ ಕಳೆದ ಎಂಟು ತಿಂಗಳಿನಿಂದ ಬಾಗಿಲು ಮುಚ್ಚಿದ್ದ ಜಿಲ್ಲೆಯ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು ಮುಂದಿನ ವಾರದಿಂದ ಪ್ರದರ್ಶನ ಆರಂಭಿಸುವ ಸಾಧ್ಯತೆ ಇದೆ. ಡಯಾನ ಚಿತ್ರಮಂದಿರ ಈ ವಾರದಿಂದಲೇ ಪ್ರದರ್ಶನ ಆರಂಭಿಸಿದೆ. ಲಾಕ್ ಡೌನ್ ತೆರವುಗೊಂಡ ಬಳಿಕ ಚಿತ್ರಮಂದಿರಗಳನ್ನು ತೆರೆಯಲು ಸರ್ಕಾರ ಅವಕಾಶ ಕಲ್ಪಿಸಿತ್ತು. ಆದರೆ ಹೊಸ ಸಿನಿಮಾಗಳು, ಸ್ಟಾರ್ ನಾಯಕರ ಚಿತ್ರಗಳು ಬಿಡುಗಡೆ ಆಗದ ಕಾರಣ ಹಾಗೂ ಪ್ರೇಕ್ಷಕರ ಕೊರತೆಯಿಂದ ಉಡುಪಿ ನಗರ ಸಹಿತ ಜಿಲ್ಲೆಯ ಚಿತ್ರಮಂದಿರಗಳು ಇದುವರೆಗೂ ಪ್ರದರ್ಶನ ಆರಂಭಿಸಿಲ್ಲ. ಇದೀಗ ಉಡುಪಿ […]
ಸಿಡ್ನಿ: ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾಗೆ ಭರ್ಜರಿ ಗೆಲುವು
ಸಿಡ್ನಿ: ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಸಿಡ್ನಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ 66 ರನ್ ಗಳ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾ 6 ವಿಕೆಟ್ ನಷ್ಟಕ್ಕೆ 374 ರನ್ ದಾಖಲಿಸಿತ್ತು. ಈ ಸವಾಲನ್ನು ಸ್ವೀಕರಿಸಿ ಬ್ಯಾಟಿಂಗ್‌ಗಿಳಿದ ಭಾರತ ತಂಡದ ಆರಂಭಿಕ ಪ್ರದರ್ಶನ ನಿರಾಸೆ ಮೂಡಿಸಿತ್ತು. ಆರಂಭಿಕ ದಾಂಡಿಗರಾಗಿ ಮಯಂಕ್ ಅಗರವಾಲ್ ಮತ್ತು ಶಿಖರ್ ಧವನ್ ಕ್ರೀಸ್‌ಗಿಳಿದಿದ್ದು 6ನೇ ಓವರ್‌ನಲ್ಲಿ ಮಯಂಕ್ ವಿಕೆಟ್ ಕಳೆದುಕೊಂಡರು. ಮಯಂಕ್ […]
ಉಡುಪಿ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಗೆ ಸಾಧನಾಶ್ರೀ ಪ್ರಶಸ್ತಿ
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ 106ನೇ ವಾರ್ಷಿಕ ಮಹಾಸಭೆಯಲ್ಲಿ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಇದರ ಸರ್ವತೋಮುಖ ಅಭಿವೃದ್ಧಿಯನ್ನು ಗುರುತಿಸಿ ನೀಡಲ್ಪಟ್ಟ 2019-20ನೇ ಸಾಲಿನ ಸಾಧನಾ ಶ್ರೀ ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷ ಯಶ್ ಪಾಲ್ ಸುವರ್ಣ ಸ್ವೀಕರಿಸಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ ಎನ್ ರಾಜೇಂದ್ರ ಕುಮಾರ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ […]