ಕಡಿಮೆ ಬಜೆಟ್ ನಲ್ಲಿ ನಿರ್ಮಾಣಗೊಂಡ ‘ಎದ್ದೇಳು ಮಂಜುನಾಥ’ ಚಿತ್ರದ ಒಟ್ಟು ಗಳಿಕೆ ಎಷ್ಟು.?

ಬೆಂಗಳೂರು: ಕಳೆದ 13 ವರ್ಷಗಳ ಹಿಂದೆ ಅಂದರೆ 2007ರಲ್ಲಿ ತೆರೆಕಂಡ ‘ಎದ್ದೇಳು ಮಂಜುನಾಥ’ ಚಿತ್ರವು ನವರಸ ನಾಯಕ ಜಗ್ಗೇಶ್ ವೃತ್ತಿ ಬದುಕಿನಲ್ಲಿ ದೊಡ್ಡಮಟ್ಟದ ಸಕ್ಸಸ್ ಕಂಡು ಚಿತ್ರ. ಗುರುಪ್ರಸಾದ್ ನಿರ್ದೇಶಿಸಿದ್ದ ಈ ಚಿತ್ರವನ್ನು ಸನತ್ ಕುಮಾರ್ ನಿರ್ಮಾಣ ಮಾಡಿದ್ದರು. ಚಿತ್ರದ ಚಿತ್ರಕಥೆಗಾಗಿ ಗುರುಪ್ರಸಾದ್ ಅವರಿಗೆ ರಾಜ್ಯ ಪ್ರಶಸ್ತಿ ಕೂಡ ಲಭಿಸಿತ್ತು. ಚಿತ್ರದ ಗಳಿಕೆ ಎಷ್ಟು.? ಈ ಚಿತ್ರವನ್ನು ಕೇವಲ 25 ದಿನಗಳಲ್ಲಿ ಪೂರ್ಣಗೊಳಿಸಲಾಗಿತ್ತು. ಹಾಗೆ 90 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಈ ಚಿತ್ರವು ಆಗಿನ ಸಮಯದಲ್ಲಿ ಬರೋಬ್ಬರಿ […]
ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಮಂಜಪ್ಪ ಗೌಡ ವಿಧಿವಶ

ಉಡುಪಿ: ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಮಂಜಪ್ಪ ಗೌಡ (58) ಅವರು ಹೃದಯಾಘಾತದಿಂದ ಶುಕ್ರವಾರ ಸಂಜೆ ನಿಧನ ಹೊಂದಿದರು. ಮಂಜಪ್ಪ ಗೌಡ ಅವರು ಕಳೆದ ಹಲವು ದಶಕಗಳಿಂದ ಜನಪರ ಹೋರಾಟ ಹಾಗೂ ಸಮುದಾಯ ಸಂಘಟನೆಯಲ್ಲಿ ಸಕ್ರಿಯರಾಗಿದ್ದುಕೊಂಡು ಜಿಲ್ಲಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ನೆಲ್ಲಿಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿ, ತಾಲೂಕು ಜೇನು ಉತ್ಪಾದಕರ ಸಂಘದ ಅಧ್ಯಕ್ಷರಾಗಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಅಧ್ಯಕ್ಷರಾಗಿ ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡು ಸೇವೆಯನ್ನು ಸಲ್ಲಿಸಿದ್ದಾರೆ. ಅವರು ತಾಯಿ, […]
ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ಬೋಟ್ ಮುಳುಗಡೆ: ಏಳು ಮೀನುಗಾರರ ರಕ್ಷಣೆ

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಮಲ್ಪೆಯ ಬೋಟ್ ವೊಂದು ಮುಳುಗಡೆಯಾದ ಘಟನೆ ಮಹಾರಾಷ್ಟ್ರ- ಗೋವಾ ಮಧ್ಯೆ ಸಮುದ್ರ ತೀರದಿಂದ ಸುಮಾರು 22 ನಾಟಿಕಲ್ ಮೈಲು ದೂರದಲ್ಲಿ ಸಂಭವಿಸಿದೆ. ಬೋಟ್ ನಲ್ಲಿದ್ದ ಏಳು ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ಮಲ್ಪೆಯ ತಾರಾನಾಥ್ ಕುಂದರ್ ಎಂಬುವವರಿಗೆ ಸೇರಿದ ಮಥುರಾ ಎಂಬ ಹೆಸರಿನ ಬೋಟ್ ಇದಾಗಿದೆ. ಏಳು ಮೀನುಗಾರರನ್ನು ಹೊತ್ತ ಈ ಬೋಟ್ ನ. 17ರಂದು ಮಲ್ಪೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿತ್ತು. ನ. 26ರಂದು ಬೋಟ್ ನ ತಳಭಾಗಕ್ಕೆ ಘನ ವಸ್ತುವೊಂದು ಢಿಕ್ಕಿ […]
ಬಿಲ್ಲವ-ಈಡಿಗ ಸಮುದಾಯಕ್ಕೆ ಪ್ರತ್ಯೇಕ ನಿಗಮ ಸ್ಥಾಪನೆಗೆ ಸರ್ಕಾರ ಆದ್ಯತೆ ನೀಡಲಿದೆ: ಡಿಸಿಎಂ ಅಶ್ವಥ್ ನಾರಾಯಣ

ಕಾಪು: ಬಿಲ್ಲವ- ಈಡಿಗ ಸಮುದಾಯಕ್ಕೆ ನಿಗಮ ಮಂಡಳಿ ಸ್ಥಾಪನೆ ಕುರಿತ ಪ್ರಸ್ತಾಪ ಸ್ವಾಗತಾರ್ಹವಾದುದು. ಸಮುದಾಯದ ಬೇಡಿಕೆಗಳಿಗೆ ಅನುಗುಣವಾಗಿ ಸ್ಪಂದಿಸುವುದು ಸರ್ಕಾರ ಜವಾಬ್ದಾರಿಯಾಗಿದೆ ಎಂದು ಡಿಸಿಎಂ ಡಾ. ಅಶ್ವಥ್ ನಾರಾಯಣ ಹೇಳಿದರು. ಬೆಳಪು ಗ್ರಾಮದ ನಿರ್ಮಾಣ ಹಂತದಲ್ಲಿರುವ ಮಂಗಳೂರು ವಿವಿ ಸಂಯೋಜಿತ ಅತ್ಯಾಧುನಿಕ ವಿಜ್ಞಾನ ಸಂಶೋಧನಾ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕಾಪುವಿನ ಬೆಳಪುವಿನಲ್ಲಿ ರಾಜ್ಯಕ್ಕೆ ಮಾದರಿಯಾಗಬಲ್ಲ, ವಿಜ್ಞಾನ ಸಂಶೋಧನಾ ಕೇಂದ್ರ, ಸರಕಾರಿ ಪಾಲೆಟ್ನಿಕ್ ಕಾಲೇಜು ಮತ್ತು ಸಣ್ಣ ಕೈಗಾರಿಕಾ ಪಾರ್ಕ್ ನಿರ್ಮಾಣವಾಗುತ್ತಿದೆ. […]
ಕಡಬ: ಹಾಲು ತರಲೆಂದು ಪೇಟೆಗೆ ಹೋದ ಯುವತಿ ನಾಪತ್ತೆ

ಮಂಗಳೂರು: ಪೇಟೆ ಹೋದ ಯುವತಿಯೊಬ್ಬಳು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಕಡಬ ತಾಲೂಕಿನ ಬಿಳಿನೆಲೆ ಎಂಬಲ್ಲಿ ಶುಕ್ರವಾರ ನಡೆದಿದೆ. ಬಿಳಿನೆಲೆ ಗ್ರಾಮದ ಮದಪರ್ಲದ ಭೋಜಪ್ಪ ಗೌಡ ಅವರ ಪುತ್ರಿ ಶುಭಲತಾ (16) ನಾಪತ್ತೆಯಾಗಿರುವ ಯುವತಿ. ಪೇಟೆಗೆ ಹಾಲು ತರಲು ಹೋದವಳು ಮರಳಿ ಮನೆಗೆ ಬಂದಿಲ್ಲ ಎಂದು ಮನೆಯವರು ದೂರು ನೀಡಿದ್ದಾರೆ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.