ಉತ್ತರ ಪ್ರದೇಶ: ಕಾನೂನು ಬಾಹಿರ ಧಾರ್ಮಿಕ ಮತಾಂತರ ತಡೆ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಲಖನೌ: ಲವ್ ಜಿಹಾದ್ ತಡೆಗೆ ಉತ್ತರ ಪ್ರದೇಶ ಸರ್ಕಾರ ರೂಪಿಸಿದ ‘ಕಾನೂನು ಬಾಹಿರ ಧಾರ್ಮಿಕ ಮತಾಂತರದ ನಿಷೇಧ 2020’ ಸುಗ್ರೀವಾಜ್ಞೆಗೆ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅಂಕಿತ ಹಾಕಿದ್ದಾರೆ. ವಿವಾಹಕ್ಕಾಗಿ ಬಲವಂತದ ಧಾರ್ಮಿಕ ಮತಾಂತರವನ್ನು ತಡೆಯುವ ನಿಟ್ಟಿನಲ್ಲಿ ಕಠಿಣ ಕಾನೂನು ರೂಪಿಸಿ, ಉತ್ತರ ಪ್ರದೇಶ ಸರ್ಕಾರ ಸುಗ್ರೀವಾಜ್ಞೆ ಜಾರಿಗೊಳಿಸಲು ಮಂಗಳವಾರ ಒಪ್ಪಿಗೆ ಸೂಚಿಸಿತ್ತು. ಸರ್ಕಾರದ ಕಾನೂನಿಗೆ ರಾಜ್ಯಪಾಲರ ಅಂಕಿತ ದೊರೆತಿದೆ. ಇನ್ಮುಂದೆ ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್ ಸೇರಿದಂತೆ ಬಲವಂತದ ಮತಾಂತರವು ಕಾನೂನುಬಾಹಿರ, ಶಿಕ್ಷಾರ್ಹ ಅಪರಾಧ ಆಗಲಿದೆ. ಈ […]

ಸಂತೋಷ್ ಆತ್ಮಹತ್ಯೆ ಯತ್ನದ ಹಿಂದೆ ವಿಡಿಯೊ ರಹಸ್ಯ ಅಡಗಿದೆ: ಡಿಕೆಶಿ ಬಾಂಬ್ 

ಕಾರವಾರ: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ವಿಡಿಯೊವೊಂದು ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಾಂಬ್ ಸಿಡಿಸಿದ್ದಾರೆ. ಕಾರವಾರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಯಾರದ್ದೋ ವೈಯಕ್ತಿಕ ವಿಡಿಯೊವೊಂದನ್ನು ವಿಧಾನಪರಿಷತ್ ಸದಸ್ಯ ಹಾಗೂ ಸಚಿವರೊಬ್ಬರಿಗೆ ಕೊಟ್ಟ ಮಾಹಿತಿ ಎರಡು ಮೂರು ತಿಂಗಳ ಹಿಂದೆ ನನಗೆ ಗೊತ್ತಾಗಿದೆ. ಇದೀಗ ಅದನ್ನು ಮುಂದೆ ಇಟ್ಟುಕೊಂಡು ವಿಧಾನಪರಿಷತ್ ಸದಸ್ಯ, ಸಚಿವರು ಇಬ್ಬರೂ ಸೇರಿ ಮುಖ್ಯಮಂತ್ರಿ ಹಾಗೂ ಸಂತೋಷ್‌ಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಈ ಒತ್ತಡದಿಂದಲೇ ಸಂತೋಷ್ […]

ಭೀಕರ ರಸ್ತೆ ಅಪಘಾತ: ಯುವಕ‌ ಮೃತ್ಯು

ಪುತ್ತೂರು: ಬೈಕ್ ಹಾಗೂ ಬೊಲೆರೋ ಜೀಪ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ತೆಂಕಿಲ ಪರ್ಲಡ್ಕ ಬೈಪಾಸ್ ರಸ್ತೆಯ ಶಿವನಗರ ಎಂಬಲ್ಲಿ ನಡೆದಿದೆ. ಮೃತನನ್ನು ಪರ್ಲಡ್ಕದ ಹಾಸೀಮ್ ಎಂದು ತಿಳಿದುಬಂದಿದೆ. ಮೆಡಿಕಲ್  ಶಾಪ್‍ಗೆ ಹೋಗುತ್ತಿದ್ದ ವೇಳೆ ಹಾಸೀಮ್ ಅವರ ಬೈಕ್ ಬೊಲೆರೋ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಹಾಸೀಮ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕಟೀಲ್ ಗೆ ಏನೋ ಹೆಚ್ಚು ಕಮ್ಮಿ‌ ಆಗಿದೆ: ಡಿಕೆಶಿ ತಿರುಗೇಟು

ಕಾರವಾರ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್ ಗೆ ಏನೋ ಹೆಚ್ಚು ಕಮ್ಮಿ ಆಗಿದೆ. ಅವರನ್ನು ಆಸ್ಪತ್ರೆಗೆ ಸೇರಿಸಬೇಕು. ಆಗ ಸರಿಯಾಗಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಲೇವಡಿ ಮಾಡಿದ್ದಾರೆ. ‘ಸಿದ್ದರಾಮಯ್ಯ ಸರ್ಕಾರ ಉಳಿದಿದ್ದೆ ಡ್ರಗ್ಸ್ ಮಾಫಿಯಾದಿಂದ’ ಎಂಬ ಕಟೀಲ್ ಅವರ ಹೇಳಿಕೆಗೆ ಶಿರಸಿಯಲ್ಲಿ ಶನಿವಾರ ಅವರು ತಿರುಗೇಟು ನೀಡಿದ್ದಾರೆ. ಕಟೀಲ್ ತಮ್ಮ ಸ್ಥಾನದ ಗೌರವಕ್ಕೆ ಸರಿಯಾಗಿ ನಡೆದುಕೊಳ್ಳುವುದನ್ನು ಕಲಿಯಲಿ. ಅವರಿಗೆ ರಾಜಕೀಯದ ಅಲ್ಪಸ್ವಲ್ಪ ಪರಿಜ್ಞಾನ ಇದೆ ಎಂದು ತಿಳ್ಕೊಂಡಿದ್ದೆ. ಈ ರೀತಿಯ ಮಾತುಗಳಿಂದ ಅವರ […]

ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಡಾಲರ್ಸ್ ಕಾಲೊನಿಯ ನಿವಾಸದಲ್ಲಿ ಶುಕ್ರವಾರ ರಾತ್ರಿ ಅಸ್ವಸ್ಥಗೊಂಡಿದ್ದ ಸಂತೋಷ್ ಅವರನ್ನು ಕುಟುಂಬದವರು ಕೂಡಲೇ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದರು. ಸಂತೋಷ್ ನಿದ್ರೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶುಕ್ರವಾರ ತಡರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ಸಂತೋಷ್ ಅವರ ಆರೋಗ್ಯ ವಿಚಾರಿಸಿದರು. ರಾಜಕೀಯ ಒತ್ತಡ ಸಂತೋಷ್ ಆತ್ಮಹತ್ಯೆಗೆ ರಾಜಕೀಯ ಒತ್ತಡ ಇತ್ತು. ಕಳೆದ ಒಂದು ವಾರದಿಂದ ಸರ್ಕಾರದಲ್ಲಿ […]