ಉಡುಪಿ ಕೃಷ್ಣಾಪುರ ಮಠದ ಪರ್ಯಾಯ ಪೂರ್ವಭಾವಿ ಬಾಳೆ ಮುಹೂರ್ತ ಕಾರ್ಯಕ್ರಮ ನಾಳೆ
ಉಡುಪಿ: ಉಡುಪಿ ಅಷ್ಟಮಠಗಳ ಪೈಕಿ ಅತ್ಯಂತ ಪ್ರಸಿದ್ಧಿ ಪಡೆದಿರುವ ಶ್ರೀ ಕೃಷ್ಣಾಪುರ ಮಠದ ವಿದ್ಯಾಸಾಗರತೀರ್ಥ ಶ್ರೀಪಾದರ ಪರ್ಯಾಯ ಪೂರ್ವಭಾವಿ ಬಾಳೆ ಮುಹೂರ್ತ ಕಾರ್ಯಕ್ರಮವು ನಾಳೆ (ನ. 30) ನಡೆಯಲಿದೆ. ಕೃಷ್ಣಾಪುರ ಶ್ರೀಗಳಿಗೆ 4ನೇ ಪರ್ಯಾಯ: ಕೃಷ್ಣಾಪುರದ ವಿದ್ಯಾಸಾಗರತೀರ್ಥರು 4ನೇ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಲಿದ್ದಾರೆ. 1974-75, 1990-91, 2006-07ರಲ್ಲಿ 3 ಬಾರಿ ಪರ್ಯಾಯ ಪೂಜೆ ನಿರ್ವಹಿಸಿದ್ದರು. 2022-23ರ ಅವಧಿಗೆ ಅವರು ನಾಲ್ಕನೇ ಬಾರಿಗೆ ಪೂಜಾ ಕೈಂಕರ್ಯ ನೆರವೇರಿಸಲಿದ್ದಾರೆ. ಆಶ್ರಮ ಜ್ಯೇಷ್ಠರಾಗಿದ್ದ ಪೇಜಾವರ ಶ್ರೀ ವಿಶ್ವೇಶತೀರ್ಥರು ಕೃಷ್ಣನ ಪಾದ […]
ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ
ಬೆಂಗಳೂರು: ಮಾರಕಾಸ್ತ್ರಗಳಿಂದ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಚಂದ್ರಾ ಲೇಔಟ್ ನ ಗಂಗೋಡನಹಳ್ಳಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಗಂಗೋಡನಹಳ್ಳಿಯ ಸಾಹಿಲ್ ಕೊಲೆಯಾದ ವ್ಯಕ್ತ. ಸಾಹೀಲ್ ಮನೆಯ ಸಮೀಪದ ಮಾರಮ್ಮನ ದೇವಸ್ಥಾನ ಬಳಿ ರಾತ್ರಿ 12 ಗಂಟೆಯ ವೇಳೆ ಮೂವರು ಯುವಕರ ನಡುವೆ ಕ್ಲುಲಕ ಕಾರಣಕ್ಕೆ ಜಗಳ ಉಂಟಾಗಿದೆ. ಗಲಾಟೆಯು ವಿಕೋಪಕ್ಕೆ ತಿರುಗಿದಾಗ, ಎದುರಾಳಿಗಳು ಸಾಹಿಲ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಸಾಹಿಲ್ ನನ್ನು ಕಿಮ್ಸ್ ಅಸ್ಪತ್ರೆಗೆ ದಾಖಲು ಮಾಡಲಾಯಿತಾದರೂ […]
ಪಕ್ಷ ಬಿಟ್ಟು ಹೋಗುವವರಿದ್ದರೆ ಗೌರವದಿಂದ ಕಳಿಸಿಕೊಡೋಣ: ಪ್ರಮೋದ್ ಮಧ್ವರಾಜ್ ವಿರುದ್ಧ ಗುಡುಗಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ
ಉಡುಪಿ: ನನ್ನಿಂದಲೇ ಪಕ್ಷವೆಂದು ಬ್ಲ್ಯಾಕ್ ಮೇಲ್ ಮಾಡಬಹುದೆಂದು ಭಾವಿಸಿದ್ದರೆ ಅದು ಅವರ ಭ್ರಮೆ. ಕಾಂಗ್ರೆಸ್ ನಲ್ಲಿ ವ್ಯಕ್ತಿ ಪೂಜೆಗೆ ಅವಕಾಶವಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಯಾರೂ ಶಾಶ್ವತವಲ್ಲ, ಕಾಂಗ್ರೆಸ್ ನಲ್ಲಿ ಇರುವುದೇ ಒಂದು ಸೌಭಾಗ್ಯ. ಪಕ್ಷ ಬಿಟ್ಟು ಹೋಗುವವರಿದ್ದರೆ ಅವರನ್ನು ಗೌರವದಿಂದ ಕಳಿಸಿಕೊಡೋಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪರೋಕ್ಷವಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಗುಡುಗಿದರು. ಭಾನುವಾರ ನಡೆದ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಸಮಾವೇಶಕ್ಕೆ ಗೈರಾಗಿದ್ದ ಮಾಜಿ ಸಚಿವ […]
ಉಡುಪಿ: ಕುಂಜಿಬೆಟ್ಟುವಿನಲ್ಲಿ ‘ಬಿಸಿನೆಸ್ ಬೇ ಸೆಂಟರ್’ ನೂತನ ವಾಣಿಜ್ಯ ಸಂಕೀರ್ಣ ಶುಭಾರಂಭ
ಉಡುಪಿ: ಉಡುಪಿ-ಮಣಿಪಾಲ ರಸ್ತೆಯ ಶಾರದಾ ಕಲ್ಯಾಣ ಮಂಟಪ ಜಂಕ್ಷನ್ ಬಳಿ ನಿರ್ಮಾಣಗೊಂಡಿರುವ ‘ಬಿಸಿನೆಸ್ ಬೇ ಸೆಂಟರ್’ ನೂತನ ವಾಣಿಜ್ಯ ಸಂಕೀರ್ಣ ಇಂದು ಶುಭಾರಂಭಗೊಂಡಿತು. ವಾಣಿಜ್ಯ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಕ್ರೆಡೈ ಅಧ್ಯಕ್ಷ ಡಾ. ಜೆರಿ ವಿನ್ಸೆಂಟ್ ಡಯಾಸ್, ಒಂದು ಕಟ್ಟಡ ನಿರ್ಮಾಣ ಮಾಡುವುದು ಸುಲಭದ ಮಾತಲ್ಲ. ಅದಕ್ಕೆ ಸಾಕಷ್ಟು ಧೈರ್ಯ, ಪರಿಶ್ರಮಬೇಕು. ಅದರಲ್ಲೂ ಈ ಕೋವಿಡ್ ಸಂಕಷ್ಟ ಕಾಲದಲ್ಲಿ ಎಂ.ಎಸ್. ಅಫ್ಜಲ್ ಹುಸೇನ್ ವಾಣಿಜ್ಯ ಸಂಕೀರ್ಣ ನಿರ್ಮಿಸಿರುವುದು ದೊಡ್ಡ ಸಾಹಸದ ಕೆಲಸ. ಇದು ನಿಹಕ್ಕೂ ಮಾದರಿಯಾದ […]
ಎರಡನೇ ಏಕದಿನ ಪಂದ್ಯ: ಭಾರತಕ್ಕೆ 390 ರನ್ ಗಳ ಟಾರ್ಗೆಟ್
ಸಿಡ್ನಿ: ಸ್ಮಿತ್ ಅವರ ಶತಕದ ನೆರವಿನಿಂದ ಎರಡನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಭಾರತಕ್ಕೆ 390 ರನ್‌ಗಳ ಬೃಹತ್ ಮೊತ್ತದ ಗುರಿ ನೀಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾ ನಿಗದಿತ 50 ಓವರ್‌ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 389 ರನ್ ಗಳನ್ನು ಕಲೆ ಹಾಕಿದೆ. ಸ್ಮಿತ್ ಅವರ ಶತಕ, ಫಿಂಚ್,ವಾರ್ನರ್ ಮಾರ್ನಸ್ ಲಾಬುಶೇನ್ ಮತ್ತು ಮ್ಯಾಕ್ಸ್‌ವೆಲ್ ಅವರ ಅರ್ಧ ಶತಕದ ನೆರವಿನಿಂದ ಆಸ್ಟ್ರೇಲಿಯಾ ಬೃಹತ್ ಮೊತ್ತ ದಾಖಲಿಸಿದೆ. ಆಸ್ಟ್ರೇಲಿಯಾ 4 ವಿಕೆಟ್ ನಷ್ಟಕ್ಕೆ 389 ವಾರ್ನರ್ […]