ಏನಾದ್ರೂ ಬಾಕಿ‌ಯಿದ್ರೆ ಅದನ್ನು ಹೇಳಲಿ ಸಂತೋಷ: ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಉಡುಪಿ: ನಮ್ಮ ಸರ್ಕಾರ ಬೀಳಲು ಡಿಕೆಶಿ ಕಾರಣ ಎಂಬ ಕುಮಾರಸ್ವಾಮಿ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉಡುಪಿಯಲ್ಲಿ ಇಂದು ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿ ಏನು ಬೇಕಾದ್ರೂ ಮಾತಾನಾಡಲಿ. ಅವರು ಹಿರಿಯರು. ಇಷ್ಟು ಬೇಗ ಹೇಳ್ತಾ ಇದ್ದಾರಲ್ವಾ?. ಇನ್ನೂ ಏನಾದ್ರೂ ಬಾಕಿ‌ಯಿದ್ರೆ ಹೇಳಲಿ. ಅದೇ ಸಂತೋಷ ಎಂದು ವ್ಯಂಗ್ಯವಾಡಿದರು. ರಾಜ್ಯ ಸಂಪುಟ ವಿಸ್ತರಣೆ ಅವರ ಆಂತರಿಕ ವಿಚಾರ. ಕಾಂಗ್ರೆಸ್ ಪಕ್ಷಕ್ಕೂ ಬಿಜೆಪಿ ಆಂತರಿಕ ವಿಷಯಕ್ಕೂ ಸಂಬಂಧ ಇಲ್ಲ ಎಂದು ಹೇಳಿದರು. ಲವ್ ಜಿಹಾದ್ ಕಾನೂನು ತರುವ ಮೊದಲು […]

ಸಂತೋಷ್ ಆತ್ಮಹತ್ಯೆ ಯತ್ನ ವಿಚಾರ: ವಿಡಿಯೋ ಬಿಡುಗಡೆ ಮಾಡ್ತೇನೆಂದು ಹೇಳಿಲ್ಲ- ಡಿಕೆಶಿ

ಉಡುಪಿ: ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ ವಿಚಾರಕ್ಕೆ ಸಂಬಂಧಿಸಿದಂತೆ ವಿಡಿಯೋ ಬಿಡುಗಡೆ ಮಾಡ್ತೀನಿ ಅಂತ ನಾನು ಹೇಳಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.‌ ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಗೃಹ ಸಚಿವರು ತನಿಖೆ ಮಾಡ್ತೇನೆ ಅಂದಿದ್ದಾರೆ. ಕೂಡಲೇ ತನಿಖೆ ನಡೆಸಿ ರಾಜ್ಯದ ಜನತೆಗೆ ಸತ್ಯ ತಿಳಿಸಿ. ಸಿಡಿ ಇತ್ತೋ ಇಲ್ವೋ, ರೆಕಾರ್ಡ್ ಇತ್ತೋ ಇಲ್ವೋ ಎನ್ನುವುದು ಎಲ್ಲಾ ಹೊರಬರಲಿ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ವಿರೋಧ […]

ಕೊಲ್ಲೂರು ಶ್ರೀಮೂಕಾಂಬಿಕಾ ದೇವರ ದರ್ಶನ ಪಡೆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಕೊಲ್ಲೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭಾನುವಾರ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಆಗಮಿಸಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ದೇವಿಗೆ ಪ್ರಾರ್ಥನೆ ಸಲ್ಲಿಸಿದರು. ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಗಾಣಿಗ ಕೊಲ್ಲೂರು ಹಾಗೂ ಯುವ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನೇತೃತ್ವದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು. ಇವರೊಂದಿಗೆ ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಕೆ ಗೋಪಾಲ್ ಪೂಜಾರಿ , ಕಾಪು […]