ಕರಾವಳಿಯ ಮೆಕ್ಯಾನಿಕ್ ಗಳು ದೇಶವ್ಯಾಪಿ ಪ್ರಸಿದ್ಧಿ ಪಡೆದಿದ್ದಾರೆ: ಶಶಿಧರ್ ಪೈ ಮಾರೂರು
ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಮತ್ತ್ತು ಉಡುಪಿ ಜಿಲ್ಲೆಗಳ ತಂತ್ರಜ್ಞರ ಅತ್ಯುತ್ತಮ ಗುಣಮಟ್ಟದ ಸೇವೆ ದೇಶವ್ಯಾಪಿ ಪ್ರಚಲಿತವಾಗಿದ್ದು, ಆಟೋಮೊಬೈಲ್ ಕ್ಷೇತ್ರದಲ್ಲಿ ಇಲ್ಲಿನ ಮೆಕ್ಯಾನಿಕ್ ಗಳು ಇಡೀ ದೇಶದಲ್ಲಿಯೇ ಹೆಸರುವಾಸಿಯಾಗಿದ್ದಾರೆ ಎಂದು ಮಂಗಳೂರು ಮಾರೂರು ಗ್ರೂಪ್ ನ ಶಶಿಧರ್ ಪೈ ಅಭಿಮತ ವ್ಯಕ್ತಪಡಿಸಿದರು. ಅವರು ಭಾನುವಾರ ಮಂಗಳೂರು ಕಡೆಮೊಗರು ನಲ್ಲಿ ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸಂಘ, ಮಂಗಳೂರು ಮತ್ತು ಉಡುಪಿ ಜಿಲ್ಲೆ ಇದರ 2019-20 ಸಾಲಿನ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಇಲ್ಲಿನ ಮೆಕ್ಯಾನಿಕ್ ಗಳ ಸಮಯ […]
ಮಣಿಪಾಲ: ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಬೆಂಕಿ ಅವಘಡ
ಮಣಿಪಾಲ: ಇಲ್ಲಿನ ಮಂಚಿ ದುಗ್ಲಿ ಪದವು ಎಂಬಲ್ಲಿ ತಡರಾತ್ರಿ ಸುಮಾರಿಗೆ ಬೆಂಕಿಬಿದ್ದಿದ್ದು, ಯುವಕರಿಬ್ಬರ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಸೋಮವಾರ 10.30 ಗಂಟೆ ಸುಮಾರಿಗೆ ಮಣಿಪಾಲ ಅಲೆವೂರು ರಸ್ತೆಯ ದುಗ್ಲಿ ಪದವು ಎಂಬಲ್ಲಿ ಬೆಂಕಿಬಿದ್ದಿದ್ದು, ಅದೇ ಮಾರ್ಗವಾಗಿ ಬರುತ್ತಿದ್ದ ಬೈಕ್ ಸವಾರರಾದ ಅಲೆವೂರಿನ ಜಲೇಶ್ ಶೆಟ್ಟಿ ಮತ್ತು ಕುಕ್ಕಿಕಟ್ಟೆಯ ನವೀನ್ ಸೇರಿಗಾರ್ ಕೂಡಲೇ ಅಗ್ನಿಶಾಮಕ ದಳಕ್ಕೆ ತಿಳಿಸಿ ಸ್ಥಳೀಯರನ್ನು ಎಬ್ಬಿಸಿ ಬೆಂಕಿಯನ್ನು ನಂದಿಸಿದರು. ಯುವಕರ ಸಮಯಪ್ರಜ್ಞೆಯಿಂದ ಬಹಳ ದೊಡ್ಡ ಅನಾಹುತ ತಪ್ಪಿದೆ. ಯುವಕರ ಸಮಯಪ್ರಜ್ಞೆಯಿಂದ ಬಹಳಷ್ಟು […]
ಕಾಪು ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾಗಿ ಉದ್ಯಮಿ ಸುರೇಶ್ ಪಿ. ಶೆಟ್ಟಿ ಗುರ್ಮೆ ನೇಮಕ
ಉಡುಪಿ: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾಗಿ ಉದ್ಯಮಿ ಸುರೇಶ್ ಪಿ. ಶೆಟ್ಟಿ ಗುರ್ಮೆ ಅವರು ಆಯ್ಕೆಯಾಗಿದ್ದಾರೆ. ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಸಭೆಯಲ್ಲಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಅಭಿವೃದ್ಧಿ ಸಮಿತಿಯ ಖಾಯಂ ಆಹ್ವಾನಿತರಾಗಿ ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ನೇಮಕ ಮಾಡಲಾಗಿದೆ. ಜಯ ಸಿ. ಸುವರ್ಣ ಅವರ ನಿಧನದಿಂದ ತೆರವಾದ ಗೌರವಾಧ್ಯಕ್ಷ ಸ್ಥಾನಕ್ಕೆ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ […]
ನಿಶ್ಚಿತಾರ್ಥವಾದ ಎರಡೇ ದಿನಕ್ಕೆ ಯುವತಿ ಆತ್ಮಹತ್ಯೆಗೆ ಶರಣು.!
ಬೆಂಗಳೂರು: ಬೆಂಗಳೂರಿನ ಕದುರುಗೆರೆ ಎಂಬಲ್ಲಿ ಯುವತಿಯೊಬ್ಬಳು ನಿಶ್ಚಿತಾರ್ಥವಾದ ಎರಡೇ ದಿನಕ್ಕೆ ಆತ್ಮಹತ್ಯೆಗೆ ಶರಣಾದ ಘಟನೆ ಸಂಭವಿಸಿದೆ. ಕದುರುಗೆರೆ ನಿವಾಸಿ ರೇಖಾ(23) ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆಗೆ ನೆಲಮಂಗಲದ ಯುವಕನೊಂದಿಗೆ ವಿವಾಹ ಫಿಕ್ಸ್ ಆಗಿತ್ತು. ಇನ್ನೇನು ಕೆಲ ದಿನಗಳಲ್ಲಿ ವಿವಾಹವಾಗಿ ಹೊಸ ಬದುಕಿಗೆ ಪಾದಾರ್ಪಣೆ ಮಾಡಬೇಕಿದ್ದ ಈಕೆ ಆತ್ಮಹತ್ಯೆ ಮಾಡಿಕೊಂಡಿರುವುದು ಅನುಮಾನಕ್ಕೆ ಎಡಿಮಾಡಿಕೊಟ್ಟಿದೆ. ಮೃತ ರೇಖಾ ಎಂಬಿಎ ವ್ಯಾಸಂಗ ಮಾಡಿದ್ದಳು. ನಿಶ್ಚಿತಾರ್ಥದ ನಂತರವೂ ಭಾವೀ ಪತಿಯೊಂದಿಗೆ ಅನ್ಯೋನ್ಯತೆಯಿಂದ ಇದ್ದಳು ಎನ್ನಲಾಗಿದೆ. ಆದರೆ ಮನೆಯವರು ಆಕೆ ಹೊಟ್ಟೆನೋವು ಸಮಸ್ಯೆಯಿಂದ ಬಳಲುತ್ತಿದ್ದಳು. […]
ಹಳ್ಳಿಹಕ್ಕಿ ಎಚ್. ವಿಶ್ವನಾಥ್ ಗೆ ಬಿಗ್ ಶಾಕ್: ಆರ್. ಶಂಕರ್, ಎಂಟಿಬಿಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್
ಬೆಂಗಳೂರು: 2021ರ ವರೆಗೆ ಎಚ್. ವಿಶ್ವನಾಥ್ ಸಚಿವರಾಗುವಂತಿಲ್ಲ. ಅವರು ಅನರ್ಹಗೊಂಡು ಸೋತು ವಿಧಾನಪರಿಷತ್ ಗೆ ನಾಮನಿರ್ದೇಶನಗೊಂಡಿದ್ದಾರೆ. ಹಾಗಾಗಿ ವಿಶ್ವನಾಥ್ ಸಚಿವರಾಗಲು ಅನರ್ಹರಾಗಿದ್ದಾರೆ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶ ನೀಡಿದೆ. ವಿಶ್ವನಾಥ್ ಅನರ್ಹತೆಯನ್ನು ಸಿಎಂ ಪರಿಗಣಿಸಬೇಕು ಎಂದು ತಿಳಿಸಿದೆ. ಆರ್. ಶಂಕರ್ ಹಾಗೂ ಎಂಟಿಬಿ ನಾಗರಾಜ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಅವರು ಸಂವಿಧಾನದಡಿ ಮರು ಆಯ್ಕೆ ಆಗಿದ್ದಾರೆ. ಹಾಗಾಗಿ ಅವರು ಅನರ್ಹರಲ್ಲ ಎಂದು ಆದೇಶ ನೀಡಿದೆ.