ಗ್ರಾಪಂ ಚುನಾವಣೆಗೆ ಮುಹೂರ್ತ ಫಿಕ್ಸ್: ಎರಡು ಹಂತದಲ್ಲಿ ಮತದಾನ

ಬೆಂಗಳೂರು: ಗ್ರಾಮ ಪಂಚಾಯತ್ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದ್ದು, ಡಿಸೆಂಬರ್ 22 ಹಾಗೂ 27ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಡಿಸೆಂಬರ್ 30 ಗ್ರಾಪಂ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಇಂದು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಚುನಾವಣೆ ಕೋವಿಡ್ ನಿಯಾಮವಳಿಯಂತೆ ನಡೆಯಲಿದೆ. ಒಟ್ಟು 5,762 ಗ್ರಾಪಂಗಳಿಗೆ ಚುನಾವಣೆ ನಡೆಯಲಿದ್ದು, ಬೆಳಿಗ್ಗೆ 7ರಿಂದ ಸಂಜೆ 5ಗಂಟೆಯವರೆಗೆ ಚುನಾವಣೆ ನಡೆಯಲಿದೆ. ಕೆಲವು ಕಡೆ ಮತದಾನಕ್ಕೆ ಇವಿಎಂ ಬಳಸಲಾಗುತ್ತದೆ. ಉಳಿದ ಕಡೆಗಳಲ್ಲಿ ಬ್ಯಾಲೆಟ್ ಪೇಪರ್ […]
ಕಾಂಗ್ರೆಸ್ ತೊರೆದ ನಟಿ ಊರ್ಮಿಳಾ ಶಿವಸೇನೆಗೆ ಸೇರ್ಪಡೆ

ಮುಂಬಯಿ: ಕಾಂಗ್ರೆಸ್ ನಿಂದ ಹೊರಬಂದಿದ್ದ ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಡಿಸೆಂಬರ್ 1 ರಂದು ಶಿವಸೇನೆಗೆ ಸೇರಲಿದ್ದಾರೆ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಆಪ್ತ ಹರ್ಷಲ್ ಪ್ರಧಾನ್ ತಿಳಿಸಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನಿಂದ ಮುಂಬಯಿ ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಊರ್ಮಿಳಾ ಸೋತಿದ್ದರು. ನಂತರ ಕಾಂಗ್ರೆಸ್ ಪಕ್ಷದ ಆಂತರಿಕ ಭಿನ್ನಾಭಿಪ್ರಾಯದಿಂದ ಬೇಸತ್ತಿದ್ದ ಊರ್ಮಿಳಾ ಪಕ್ಷ ತೊರೆದಿದ್ದರು. ಊರ್ಮಿಳಾ ಹೆಸರನ್ನು ರಾಜ್ಯಪಾಲರ ಕೋಟಾದಿಂದ ವಿಧಾನ ಪರಿಷತ್ ಗೆ ನಾಮನಿರ್ದೇಶನ ಮಾಡಲು ಶಿವಸೇನೆಯು […]