ಉಡುಪಿ: ಬಸ್ ಡಿಕ್ಕಿ ಹೊಡೆದು ಉದ್ಯಾವರದ ನಿವಾಸಿ ಮೃತ್ಯು
ಉಡುಪಿ: ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉದ್ಯಾವರ ಪೆಟ್ರೋಲ್ ಪಂಪ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ರಾತ್ರಿ ಸಂಭವಿಸಿದೆ. ಮೃತರನ್ನು ಉದ್ಯಾವರ ಅಂಕುದ್ರು ನಿವಾಸಿ ರಾಜು ಪೂಜಾರಿ ಅವರ ಮಗ ಸುನಿಲ್ (38) ಎಂದು ಗುರುತಿಸಲಾಗಿದೆ. ಸುನಿಲ್ ಪೆಟ್ರೋಲ್ ಪಂಪ್ ಬಳಿ ನಿಂತಿದ್ದ ವೇಳೆ ಮಂಗಳೂರಿನಿಂದ ಉಡುಪಿ ಕಡೆ ಬರುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಇದರಿಂದ ಸ್ಥಳದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಸುನಿಲ್ ಅವಿವಾಹಿತನಾಗಿದ್ದು, ಸೀಟ್ ಕುಶನ್ ಕೆಲಸ […]
ಮೂರನೇ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಗೆಲುವು: ಸರಣಿ ಗೆದ್ದ ಆಸೀಸ್
ಕ್ಯಾನಬೆರ‍್ರಾ: ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಭಾರತ ತಂಡ 13 ರನ್‌ಗಳ ರೋಚಕ ಗೆಲುವು ಸಾಧಿಸಿತು. ಪಂದ್ಯದ ಕೊನೆಯ ಓವರ್‌ನಲ್ಲಿ ಜಸ್‌ಪ್ರೀತ್ ಬೂಮ್ರಾ ಆ್ಯಡಮ್ ಜಂಪಾ ವಿಕೆಟ್ ಕಬಳಿಸುವ ಮೂಲಕ ತಂಡದ ಗೆಲುವಿಗೆ ನೆರವಾದರು. ಅಬ್ಬರಿಸುತ್ತಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ ವಿಕೆಟ್ ತೆಗೆದ ಬೂಮ್ರಾ ಪಂದ್ಯವನ್ನು ಟೀಂ ಇಂಡಿಯಾ ಕಡೆಗೆ ತಿರುಗಿಸಿದರು. ಅವರು 43 ರನ್ ನೀಡಿ ಎರಡು ಪ್ರಮುಖ ವಿಕೆಟ್ ಪಡೆದರು. ಆಸ್ಟ್ರೇಲಿಯಾ 49.3 ಓವರ್‌ಗಳಲ್ಲಿ 289 ರನ್ ಗಳಿಸಿತು. ನಾಯಕ […]
ಉಡುಪಿ ಜಿಲ್ಲೆಯಲ್ಲಿ 130ಕ್ಕೂ ಅಧಿಕ ಗ್ರಾಪಂಗಳನ್ನು ಗೆಲ್ಲುವ ಗುರಿ ಹೊಂದಲಾಗಿದೆ : ಕುಯಿಲಾಡಿ
ಉಡುಪಿ: ಎಲ್ಲ ಸ್ತರಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿ ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಜಿಲ್ಲೆಯಾದ್ಯಂತ 130ಕ್ಕೂ ಹೆಚ್ಚು ಗ್ರಾಮ ಪಂಚಾಯತ್‍ಗಳಲ್ಲಿ ಗೆಲುವು ದಾಖಲಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವ ಸಿದ್ಧತೆಗಾಗಿ ಡಿ.1ರಂದು ಜಿಲ್ಲಾ ಕಚೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಿಜೆಪಿ ಗ್ರಾಮ ಪಂಚಾಯತ್ ಚುನಾವಣೆಯನ್ನು ಎದುರಿಸಲು ಸರ್ವ ಸನ್ನದ್ದವಾಗಿದೆ. ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ […]
ಉಡುಪಿ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಗಿರೀಶ್ ಅಂಚನ್ ಆಯ್ಕೆ
ಉಡುಪಿ: ನಗರಸಭೆಯ ಸ್ಥಾಯಿ ಸಮಿತಿಗೆ ಅಧ್ಯಕ್ಷರಾಗಿ ಕುಂಜಿಬೆಟ್ಟು ವಾರ್ಡ್ ನಗರಸಭಾ ಸದಸ್ಯ ಗಿರೀಶ್ ಎಂ. ಅಂಚನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬುಧವಾರ ನಗರಸಭೆಯಲ್ಲಿ ನಡೆದ ಸ್ಥಾಯಿ ಸಮಿತಿ ಸದಸ್ಯರ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ, ಸ್ಥಾಯಿ ಸಮಿತಿ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಟಿ ಜಿ ಹೆಗ್ಡೆ, ವಿಜಯಲಕ್ಷ್ಮಿ, ಚಂದ್ರಶೇಖರ್, ಯೋಗೀಶ್ ಸಾಲಿಯಾನ್, ಗೀತಾ ಶೇಟ್, ಅಶೋಕ್ ನಾಯ್ಕ, ಮಂಜುಳಾ ನಾಯ್ಕ, ವಿಜಯ ಪೂಜಾರಿ, ಶ್ರೀಶ […]
ಟೆಸ್ಟ್ ಡ್ರೈವ್ ನೆಪದಲ್ಲಿ ಬೈಕ್ ನೊಂದಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ
ತುಮಕೂರು: ಗುಬ್ಬಿ ತಾಲ್ಲೂಕಿನ ಜಯನಗರದ ಮೇಲುಕೋಟೆ ಕಿಬ್ಬನಹಳ್ಳಿ ಕ್ರಾಸ್ ಎಂಬಲ್ಲಿ ಟೆಸ್ಟ್ ಡ್ರೈವ್ ನೆಪದಲ್ಲಿ ಬೈಕ್ ನೊಂದಿಗೆ ಪರಾರಿಯಾಗಿದ್ದ ಆರೋಪಿಯನ್ನು ಜಯನಗರದ ಪೊಲೀಸರು ಬಂಧಿಸಿದ್ದು, ಆತನಿಂದ ಕಳವು ಮಾಡಿದ್ದ ಬೈಕ್ ಅನ್ನು ವಶಪಡಿಸಿಕೊಂಡಿದ್ದಾರೆ. ತುಮಕೂರಿನ ರಾಜೀವ್ ಗಾಂಧೀ ನಗರದ ನಿವಾಸಿ ಎಲೆಕ್ರ್ಟೀಷಿಯನ್ ನೌಷಾಧ್ ಪಾಷ (30) ಬಂಧಿತ ಆರೋಪಿ. ಈತ ಟೆಸ್ಟ್ ಡ್ರೈವ್ ನೆಪದಲ್ಲಿ ಬೈಕ್ ಕಳವು ಮಾಡಿದ್ದನು. ಅದರೊಂದಿಗೆ ಈತನಿಂದ ₹ 2.98 ಲಕ್ಷ ಮೌಲ್ಯದ ಐದು ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈತ ಬೇರೆ […]