ಗೆಳೆಯನ ಮನೆಯಲ್ಲಿ ಯುವತಿ ಆತ್ಮಹತ್ಯೆಗೆ ಶರಣು

ತಿರುವನಂತಪುರಂ: ಗೆಳೆಯನ ಮನೆಗೆ ತೆರಳಿ ಯುವತಿಯೊಬ್ಬಳು ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದೆ. ಮೃತಳನ್ನು ಅಂಬಾಲ್ಲೂರು ನಿವಾಸಿ ಸೂರ್ಯ(26) ಎಂದು ಗುರುತಿಸಲಾಗಿದೆ. ಗೆಳೆಯ ಅಶೋಕ್ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಮ್ಮ ಮನೆಗೆ ಬಂದ ಸೂರ್ಯ ಕೋಣೆಯ ಬಾಗಿಲನ್ನು ಏಕಾಏಕಿ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಗೆಳೆಯ ಅಶೋಕ್ ಹಾಗೂ ಆತನ ಪೋಷಕರು ತಿಳಿಸಿದ್ದಾರೆ. ಸೂರ್ಯ ಧರಿಸಿದ್ದ ಶಾಲನ್ನು ಫ್ಯಾನಿಗೆ ಕಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮುಲಾಂತುರುತಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ […]

ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‍ ನ ವಾರ್ಷಿಕ ಮಹಾಸಭೆ

ಉಡುಪಿ: ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶ್ ನ 2019-20 ನೇ ಸಾಲಿನ ವಾರ್ಷಿಕ ಮಹಾಸಭೆಯು ಎಮ್ಮೆಕೆರೆ, ಪಾಂಡೇಶ್ವರದ ರಮಾ ಲಕ್ಷ್ಮೀನಾರಾಯಣ ಸಭಾಭವನದಲ್ಲಿ ಯಶ್‍ಪಾಲ್ ಸುವರ್ಣರವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು . ಫೆಡರೇಶನ್ ಮಹಾಸಭೆಗೆ 44 “ಬಿ” ವರ್ಗದ ಸದಸ್ಯರು ಮತ್ತು 624 “ಸಿ” ವರ್ಗದ ಸದಸ್ಯರು ಮತ್ತು ಸರಕಾರದ ಪ್ರತಿನಿಧಿಗಳು ಹಾಜರಿದ್ದರು. ಫೆಡರೇಶನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ಮಾತನಾಡಿ, ಫೆಡರೇಶನ್ ವತಿಯಿಂದ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಮೀನುಗಾರಿಕಾ […]

ಏಡ್ಸ್ ತಡೆಗೆ ಜಾಗೃತಿ ಮೂಡಿಸುವುದು ಅಗತ್ಯ- ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ: ಏಡ್ಸ್ ಸೋಂಕು ತಡೆಗಟ್ಟಲು, ಸೋಂಕು ಹರಡುವಿಕೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಹಾಗೂ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಅವರು ಇಂದು ನಗರದ ಪುರಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ರೆಡ್‌ಕ್ರಾಸ್ ಮತ್ತು ಎನ್.ಎಸ್.ಎಸ್ ಘಟಕ ಉದ್ಯಾವರ, ನಾಗರಿಕ ಸಹಾಯವಾಣಿ ಕೇಂದ್ರ ಜಿಲ್ಲಾ […]

ನೀತಿ ಸಂಹಿತೆ ಉಲ್ಲಂಘನೆಗೆ ಅವಕಾಶ ನೀಡಬೇಡಿ- ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ: ಜಿಲ್ಲೆಯಲ್ಲಿ ಎರಡು ಹಂತಗಳಲ್ಲಿ ನಡೆಯುವ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳಿಗೆ ಎಚ್ಚರದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಗ್ರಾಮ ಪಂಚಾಯತ್ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಮುಕ್ತ, ಪಾರದರ್ಶಕ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸಲು, […]

ಅಂಧ ಕಲಾವಿದನ ಹಣ ಕಳವು: ಮಾನವೀಯತೆ ಮರೆದ ನಗರಸಭೆಯ ಆಸ್ತಿತೆರಿಗೆ ಸಲಹೆಗಾರರು.!

ಉಡುಪಿ: ಅಂಧ ಸಂಗೀತ ಕಲಾವಿದನ ಹಣವನ್ನು ಜೇಬುಗಳ್ಳರು ದೋಚಿದ್ದು, ಕಲಾವಿದ ತನ್ನ ಊರಾದ ಬಾಗಲಕೋಟೆಗೆ ತೆರಳಲು ಟಿಕೇಟಿಗೆ ಹಣವಿಲ್ಲದೆ ಉಡುಪಿಯ ಬಸ್ ನಿಲ್ದಾಣದಲ್ಲಿ ಅಸಹಾಯಕ ಪರಿಸ್ಥಿತಿಯಲ್ಲಿ ಕುಳಿತಿದ್ದನು. ವಿಷಯ ತಿಳಿದ ಉಡುಪಿ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಕಲಾವಿದನ ನೆರವಿಗೆ ಧಾವಿಸಿದ್ದಾರೆ. ನಗರಸಭೆ ಆಸ್ತಿತೆರಿಗೆ ಸಲಹಾ ಕೇಂದ್ರದ ಸಿಬ್ಬಂದಿಗಳಾದ ವಿದ್ಯಾ, ಚಂದ್ರಾವತಿ, ಪೂರ್ಣಿಮಾ, ತ್ರಿವೇಣಿ ಅವರು ಹಸಿದ ಕಲಾವಿದನಿಗೆ ಆಹಾರದ ವ್ಯವಸ್ಥೆ, ಪ್ರಯಾಣಿಸಲು ಟೀಕೆಟಿಗೆ ಬೇಕಾದ ಹಣ ಒದಗಿಸಿ ಮಾನವಿಯತೆ ಮೆರೆದಿದ್ದಾರೆ.