ಕ್ಲಾಸ್ ರೂಮ್ ನಲ್ಲೇ ಮದುವೆಯಾದ ಪಿಯುಸಿ ಜೋಡಿ.!
ಆಂಧ್ರಪ್ರದೇಶ: ಇಲ್ಲಿನ ಪೂರ್ವ ಗೋದಾವರಿ ಜಿಲ್ಲೆ ರಾಜಮಂಡ್ರಿ ಸರ್ಕಾರಿ ಜೂನಿಯರ್ ಕಾಲೇಜಿನ ಕ್ಲಾಸ್ ರೂಮ್ ನಲ್ಲೇ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು ಮದುವೆ ಆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇವರು ನವೆಂಬರ್ 17ರಂದು ಮದುವೆಯಾಗಿದ್ದರು ಎನ್ನಲಾಗಿದೆ. ಅಪ್ರಾಪ್ತ ವಿದ್ಯಾರ್ಥಿಗಳು ವಿವಾಹವಾಗಿರುವ ದೃಶ್ಯ ಸಾಮಾಜಿಕ ತಾಣಾದಲ್ಲಿ ವೈರಲ್ ಆಗಿದೆ. ಕಾಲೇಜು ಪ್ರಾಂಶುಪಾಲರಿಗೆ ಈ ವಿಷಯ ತಿಳಿದಾಗ ಇಬ್ಬರಿಗೂ ಟಿಸಿ ನೀಡಿ ಮನೆಗೆ ಕಳಿಸಿದ್ದಾರೆ. ಇತ್ತ ಈ ವಿವಾಹವಾಗಿರುವ ವಿಷಯ ವೈರಲ್ ಆಗುತ್ತಿದ್ದಂತೆ ವಿದ್ಯಾರ್ಥಿಗಳ ಪೋಷಕರಿಗೆ ಸಹ ಆಘಾತವಾಗಿದೆ. ವಿವಾಹವು […]
ಉಡುಪಿ ಶ್ರೀಕೃಷ್ಣಮಠದಲ್ಲಿ ಕನ್ನಡ ನಾಮಫಲಕ ಅಳವಡಿಕೆ: ವಿವಾದಕ್ಕೆ ತೆರೆ ಎಳೆದ ಪರ್ಯಾಯ ಅದಮಾರು ಮಠ
ಉಡುಪಿ: ಕಳೆದ ಎರಡು ದಿನಗಳಿಂದ ಭಾರಿ ವಿವಾದಕ್ಕೆ ಗುರಿಯಾಗಿದ್ದ ಕೃಷ್ಣಮಠದ ಪ್ರವೇಶ ದ್ವಾರದಲ್ಲಿನ ಕನ್ನಡ ನಾಮಫಲಕ ತೆಗೆದುಹಾಕಿರುವ ವಿಚಾರವೂ ಕೊನೆಗೂ ಬಗೆಹರಿದಿದೆ. ಪರ್ಯಾಯ ಅದಮಾರು ಮಠದ ಆಡಳಿತ ಮಂಡಳಿ ಶ್ರೀಕೃಷ್ಣಮಠದ ಮುಖ್ಯ ಪ್ರವೇಶ ದ್ವಾರದಲ್ಲಿ ಕನ್ನಡ ನಾಮಫಲಕ ಅಳವಡಿಸುವ ಮೂಲಕ ವಿವಾದಕ್ಕೆ ತೆರೆ ಎಳೆದಿದೆ. ಮಠವನ್ನು ಸುಣ್ಣಬಣ್ಣ ಬಳಿದು ನವೀಕರಣಗೊಳಿಸುವ ವೇಳೆ ಕನ್ನಡ ನಾಮಫಲಕವನ್ನು ತೆರವು ಮಾಡಲಾಗಿತ್ತು. ಬಳಿಕ ತುಳು ಹಾಗೂ ಸಂಸ್ಕೃತ ಭಾಷೆಯ ನಾಮಫಲಕವನ್ನು ಮಾತ್ರ ಅಳವಡಿಸಲಾಗಿತ್ತು. ಇದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೆ, ಉಡುಪಿ […]
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಕೇಸರಿ ಯುವರಾಜ್ ನೇಮಕ
ಉಡುಪಿ: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಕೇಸರಿ ಯುವರಾಜ್ ಉದ್ಯಾವರ ಅವರು ನೇಮಕಗೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು: ಕೃಷಿ ಸಚಿವ ಬಿ.ಸಿ. ಪಾಟೀಲ್
ಮಡಿಕೇರಿ: ಸಾಲ ಸಹಿತ ಇತರೆ ಕಾರಣಗಳಿಗೆ ಭಯಪಟ್ಟು ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಪೊನ್ನಂಪೇಟೆಯ ಸಮೀಪದ ಕೃಷಿ ಕಾಲೇಜಿನಲ್ಲಿ ಗುರುವಾರ ಬಿದಿರು ಸಂಸ್ಕರಣೆ ಹಾಗೂ ಬಿದುರು ಮೌಲ್ಯವರ್ಧನಾ ಘಟಕ ಉದ್ಘಾಟಿಸಿ ಮಾತನಾಡಿದರು. ಕೃಷಿ ಮಾಡಿ ಉತ್ತಮ ಬದುಕು ಕಟ್ಟಿಕೊಳ್ಳಬಹುದು. ಆದರೆ ಹೇಡಿಗಳು ಮಾತ್ರ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಹೆಂಡತಿ ಹಾಗೂ ಮಕ್ಕಳನ್ನು ನೋಡಿಕೊಳ್ಳದ ರೈತ ಹೇಡಿ ಎಂದರು.
ಉಡುಪಿ ಮಹಾಲಕ್ಷ್ಮೀ ಬ್ಯಾಂಕಿನ 42ನೇ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.18 ಡಿವಿಡೆಂಡ್ ಘೋಷಣೆ
ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಇದರ 2019-20ರ ಆರ್ಥಿಕ ವರ್ಷದ 42ನೇ ವಾರ್ಷಿಕ ಮಹಾಸಭೆಯು ಇಂದು ಬ್ಯಾಂಕಿನ ಅಧ್ಯಕ್ಷ ಯಶ್ಪಾಲ್ ಎ ಸುವರ್ಣ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಪುರಭವನದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಯಶ್ಪಾಲ್ ಎ ಸುವರ್ಣ, ಬ್ಯಾಂಕ್ ಎಲ್ಲಾ ಕ್ಷೇತ್ರಗಳಲ್ಲೂ ಗಣನೀಯ ಪ್ರಗತಿ ಸಾಧಿಸಿದ್ದು, ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಗ್ರಾಹಕ ಸ್ನೇಹಿಯಾಗಿ ವ್ಯವಹಾರ ನಡೆಸುತ್ತಿದೆ ಎಂದರು. ಮೀನುಗಾರರಿಗೆ, ಕೃಷಿಕರಿಗೆ ಸರಕಾರದ ವಿವಿಧ ಯೋಜನೆಗಳಾದ ಶೂನ್ಯ ಬಡ್ಡಿದರದ ಸಾಲ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ […]