ಹೈದರಾಬಾದ್ ಪಾಲಿಕೆ ಚುನಾವಣೆ ಫಲಿತಾಂಶ ಅತಂತ್ರ: ಯಾವ ಪಕ್ಷಕ್ಕೆ ಎಷ್ಟು ಸ್ಥಾನ?.

ಹೈದರಾಬಾದ್‌: ಹೈದರಾಬಾದ್‌ ಮಹಾನಗರ ಪಾಲಿಕೆ (ಜಿಎಚ್‌ಎಂಸಿ) ಚುನಾವಣೆಯ ಮತ ಎಣಿಕೆಯ ಫಲಿತಾಂಶ ಹೊರಬಿದ್ದಿದ್ದು, ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದೆ ಅತಂತ್ರ ಪರಿಸ್ಥಿತಿ ನಿರ್ಮಾಣ ಆಗಿದೆ. 150 ಸದಸ್ಯ ಬಲದ ಪಾಲಿಕೆಯಲ್ಲಿ ಕಳೆದ ಬಾರಿ 99 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಅಧಿಕಾರಿ ಹಿಡಿದಿದ್ದ ಆಡಳಿತಾರೂಢ ಟಿಆರ್‌ಎಸ್‌ ಪಕ್ಷವು 55 ಸ್ಥಾನಕ್ಕೆ ಕುಸಿದಿದೆ. ಅಚ್ಚರಿ ಎಂಬಂತೆ ಕಳೆದ ಬಾರಿ‌ ಕೇವಲ ನಾಲ್ಕು ಸ್ಥಾನಗಳಲ್ಲಿ ಗೆದ್ದಿದ್ದ ಬಿಜೆಪಿ ಈ ಬಾರಿ ಉತ್ತಮ ಸಾಧನೆ ಮಾಡಿದ್ದು, 50 ಸ್ಥಾನಗಳಲ್ಲಿ ಗೆಲುವು ಸಾಧಿಸುವ […]

ಗ್ರಾಪಂ ಚುನಾವಣೆಯಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ: ಕೊಡವೂರು

ಉಡುಪಿ: ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದ್ದಾರೆ. ಆ ಮೂಲಕ ಪಕ್ಷದ ಈ ಹಿಂದಿನ ಇತಿಹಾಸವನ್ನು ಮರುಕಳಿಸಲು ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ತೊಡಗಿಸಿಕೊಳ್ಳಬೇಕು ಎಂದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಕಾರ್ಯಕರ್ತರಿಗೆ ಕರೆ ನೀಡಿದರು. ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವ ತಯಾರಿಗಾಗಿ ಜಿಲ್ಲಾ ಕಾಂಗ್ರಸ್ ಭವನದಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾರ್ವಜನಿಕರೊಂದಿಗೆ ಸ್ಪಂದಿಸುವ ಕಾರ್ಯಕರ್ತರನ್ನು ನಾಯಕರನ್ನಾಗಿಸುವ ಗ್ರಾಮ ಪಂಚಾಯತ್ […]

ಡಿ. 6ಕ್ಕೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಾಲೋಚನೆ ಸಭೆ

ಉಡುಪಿ: ಗ್ರಾಮ ಪಂಚಾಯತ್ ಚುನಾವಣೆಯ ಬಗ್ಗೆ ಸಮಾಲೋಚಿಸಲು ಉಡುಪಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಪಕ್ಷದ ಸರ್ವ ಕಾರ್ಯಕರ್ತರ ಮತ್ತು ಪಕ್ಷದ ಪ್ರಮುಖರ ಸಭೆಯನ್ನು ಡಿಸೆಂಬರ್ 6ರಂದು ಸಂಜೆ 4 ಗಂಟೆಗೆ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ಕರೆಯಲಾಗಿದೆ. ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಭಾಗವಹಿಸುವರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ ಅಧ್ಯಕ್ಷತೆ ವಹಿಸುವರು ಎಂದು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಣಿಪಾಲ: ‘ನಮ್ಮ ಮನೆ ನಮ್ಮ ದೇಶ’ ತ್ಯಾಜ್ಯ ವಿಲೇವಾರಿ ಅಭಿಯಾನಕ್ಕೆ ಚಾಲನೆ

ಮಣಿಪಾಲ: ಈಶ್ವರನಗರ ವಾರ್ಡ್ ನಲ್ಲಿ ನಮ್ಮ ಮನೆ ನಮ್ಮ ದೇಶ ಎನ್ನುವ ವಿನೂತನ ಪರಿಕಲ್ಪನೆಯಡಿಯಲ್ಲಿ ಒಣ ಮತ್ತು ಹಸಿ ತ್ಯಾಜ್ಯ ವಿಲೇವಾರಿ ಪ್ರಕ್ರಿಯೆಗೆ ಹೊಸ ವೇಗ ಮತ್ತು ಜೀವ ತುಂಬುವ ನಿಟ್ಟಿನಲ್ಲಿ ಹಮ್ಮಿಕೊಂಡ ಅಭಿಯಾನಕ್ಕೆ ನಗರಸಭಾ ಸದಸ್ಯ ಮಂಜುನಾಥ್ ಮಣಿಪಾಲ ಚಾಲನೆ ನೀಡಿದರು. ಅಭಿಯಾನದ ಸಂಚಾಲಕ ಹಾಗು ಪೆರಂಪಳ್ಳಿ ಇಂದಿರಾ ಶಿವರಾವ್ ಪೊಲಿಟೆಕ್ನಿಕ್ ನ ಪ್ರಾಂಶುಪಾಲ ಪ್ರಕಾಶ್ ಶೆಣೈ ಅವರು ಮಾತನಾಡಿ, ಇಡೀ ದೇಶವನ್ನು ನಮ್ಮ ಮನೆ ಎಂಬ ಭಾವನೆಯಲ್ಲಿ ಪೂಜಿಸಿ ಗೌರವಿಸಬೇಕು. ಸ್ವಚ್ಛತೆಯನ್ನು ಕೂಡಾ ಇದೇ […]

ಟಿ ಟ್ವೆಂಟಿ: ಆಸೀಸ್ ವಿರುದ್ಧ ಭಾರತಕ್ಕೆ ರೋಚಕ ಜಯ

ಕ್ಯಾನ್‌ಬೆರಾ: ಇಲ್ಲಿನ ಮನುಕಾ ಓವಲ್‌ ಮೈದಾನದಲ್ಲಿ ಇಂದು ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 11 ರನ್ ಅಂತರದ ರೋಚಕ ಗೆಲುವು ದಾಖಲಿಸಿದೆ. ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಅಂತರದ ಮಹತ್ವದ ಮುನ್ನಡೆ ದಾಖಲಿಸಿದೆ. ಬದಲಿ ಆಟಗಾರ ಯಜುವೇಂದ್ರ ಚಹಲ್ ಹಾಗೂ ಡೆಬ್ಯು ವೇಗಿ ಟಿ ನಟರಾಜನ್ ಪರಿಣಾಮಕಾರಿ ಪ್ರದರ್ಶನ ತೋರುವ ಮೂಲಕ ಟೀಮ್ ಇಂಡಿಯಾ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದರು. ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತ, […]