ಮೊದಲ ಟಿ ಟ್ವೆಂಟಿ: ಆಸೀಸ್ ಗೆ 162 ರನ್ ಗಳ ಗುರಿ ನೀಡಿದ ಭಾರತ

ಮನುಕಾ ಓವಲ್‌: ಇಲ್ಲಿ ನಡೆದ ಆಸ್ಟ್ರೇಲಿಯಾದ ಎದುರಿನ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ಆರಂಭಿಕ ಆಟಗಾರ ಕೆಎಲ್ ರಾಹುಲ್ (51) ಅರ್ಧಶತಕ ಹಾಗೂ ಕೊನೆಯ ಹಂತದಲ್ಲಿ ರವೀಂದ್ರ ಜಡೇಜ (44*) ಬಿರುಸಿನ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 161 ಮೊತ್ತವನ್ನು ಭಾರತ ಕಲೆ ಹಾಕಿದೆ. ಟಾಸ್ ಸೋತು ಬ್ಯಾಟಿಂಗ್ ಇಳಿದ ಟೀಮ್ ಇಂಡಿಯಾದ ಆರಂಭ ಉತ್ತಮವಾಗಿರಲಿಲ್ಲ. ಏಕದಿನ ಸರಣಿಯಲ್ಲಿ ಉತ್ತಮ ನಿರ್ವಹಣೆ ನೀಡಿದ ಅನುಭವಿ ಶಿಖರ್ ಧವನ್‌ ಕೇವಲ ಒಂದು ರನ್ […]

ಬಿಬಿಎಂಪಿಗೆ ಕೂಡಲೇ ಚುನಾವಣೆ ನಡೆಸಿ: ಹೈಕೋರ್ಟ್ ನಿಂದ ಮಹತ್ವದ ಆದೇಶ

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗೆ ಕೂಡಲೇ ಚುನಾವಣೆ ನಡೆಸುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಒಂದು ತಿಂಗಳೊಳಗೆ ಮೀಸಲಾತಿ ಅಧಿಸೂಚನೆಗೆ ಆದೇಶ ನೀಡಿದೆ. 198 ವಾರ್ಡ್​ಗಳಿಗೆ ಚುನಾವಣೆ ನಡೆಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ ಸೂಚಿಸಿದೆ. ಅಲ್ಲದೆ, ಮೀಸಲಾತಿ ಅಧಿಸೂಚನೆ ಹೊರಡಿಸಿದ 6 ವಾರಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಸುವಂತೆ ಹೈಕೋರ್ಟ್ ಆಯೋಗಕ್ಕೆ ನಿರ್ದೇಶನ ನೀಡಿದೆ. ಜೂನ್ 2020ರ ವಾರ್ಡ್ ಪುನರ್ವಿಂಗಡಣೆಯಂತೆ ಚುನಾವಣೆ ನಡೆಸಲು ಸೂಚನೆ ನೀಡಿದೆ. ಕೆಎಂಸಿ ಕಾಯ್ದೆ ತಿದ್ದುಪಡಿ ಇದಕ್ಕೆ ಅನ್ವಯವಾಗಲ್ಲ. ಹಾಗಾಗಿ, ಬಿಬಿಎಂಪಿ ಚುನಾವಣೆ […]

ಕೋವಿಡ್ ಎರಡನೇ ಅಲೆ: ಸಭೆ, ಸಮಾರಂಭಕ್ಕೆ ನಿಷೇಧ.!

ಬೆಂಗಳೂರು: ಕೋವಿಡ್ ಎರಡನೇ ಅಲೆಯನ್ನು ತಡೆಯುವ ಉದ್ದೇಶದಿಂದ ಡಿಸೆಂಬರ್ 20ರಿಂದ ಜನವರಿ 2ರವರೆಗೆ ರಾಜ್ಯದಾದ್ಯಂತ ಎಲ್ಲ ರೀತಿಯ ಸಭೆ, ಸಮಾರಂಭಗಳಿಗೆ ನಿಷೇಧ ಹೇರುವಂತೆ ರಾಜ್ಯ ಮಟ್ಟದ ಕೋವಿಡ್ ನಿಯಂತ್ರಣ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಶುಕ್ರವಾರ ವಿಧಾನಸೌಧದಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಈ ಬಗ್ಗೆ ಮಾಹಿತಿ ನೀಡಿದರು. ಹೊಸ ವರ್ಷಾಚರಣೆ ಸೇರಿದಂತೆ ಎಲ್ಲ ಬಗೆಯ ಸಭೆ, ಸಮಾರಂಭ ನಿಷೇಧಕ್ಕೆ ಸಲಹಾ ಸಮಿತಿ ಶಿಫಾರಸು ಮಾಡಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿದ ಬಳಿಕ […]

ಹೆಬ್ರಿ: ಕಾರು ಚಾಲಕ ಆತ್ಮಹತ್ಯೆಗೆ ಶರಣು

ಹೆಬ್ರಿ: ಕಾರು ಚಾಲಕನೊಬ್ಬ ಮನೆಯ ಮರದ ಜಂತಿಗೆ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿಯ ನಾಡ್ಪಾಲು ಸೀತಾನದಿ ಎಂಬಲ್ಲಿ ಡಿ. 2ರಂದು ನಡೆದಿದೆ. ಮೂಲತಃ ಕೇರಳದವರಾದ ಪ್ರಸ್ತುತ ನಾಡ್ಪಾಲು ಗ್ರಾಮದ ಸೀತಾನದಿ ಎಂಬಲ್ಲಿ ನೆಲೆಸಿರುವ ಕಾರು ಚಾಲಕ ಜೋಸೆಫ್ (54) ಎಂಬವರು ನೇಣುಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೋಸೆಫ್‌ ಹೆಬ್ರಿಯಲ್ಲಿ ಗಣ್ಯರಿಗೆ ಕಾರು ಚಾಲಕರಾಗಿ ದುಡಿಯುತ್ತಿದ್ದರು. ಈಚೆಗೆ ಜೋಸೆಫ್ ವಿಪರೀತ ಕುಡಿತದ ಚಟಕ್ಕೆ ಬಿದ್ದುದ್ದು, ಇದರಿಂದಲೇ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹೆಬ್ರಿ ಪೊಲೀಸ್ […]

ಹೈದರಾಬಾದ್ ಪಾಲಿಕೆ ಚುನಾವಣೆ: ಟಿಆರ್ ಎಸ್ ಗೆ 59 ವಾರ್ಡ್ ನಲ್ಲಿ ಮುನ್ನಡೆ

ಹೈದರಾಬಾದ್: ಹೈದರಾಬಾದ್‌ ಮುನ್ಸಿಪಲ್‌ ಕಾರ್ಪೊರೇಷನ್‌’ (ಜಿಎಚ್‌ಎಂಸಿ) ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಮಧ್ಯಾಹ್ನ 1 ಗಂಟೆಯ ವೇಳೆ ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್‌) ಮುನ್ನಡೆ ಸಾಧಿಸಿದೆ. ಆರಂಭಿಕ ಹಂತದ ಮತ ಎಣಿಕೆಯಲ್ಲಿ ಭಾರೀ ಮುನ್ನಡೆ ಸಾಧಿಸಿದ್ದ ಬಿಜೆಪಿ ಇದೀಗ ಹಿನ್ನಡೆ ಅನುಭವಿಸಿದೆ. ಹಿನ್ನಡೆಯಲ್ಲಿದ್ದ ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್‌) ಇದೀಗ 59 ವಾರ್ಡ್ ನಲ್ಲಿ ಮುನ್ನಡೆ ಸಾಧಿಸಿದೆ. ಇದೇ ಮುನ್ನಡೆ ಕಾಯ್ದುಕೊಂಡಲ್ಲಿ ಟಿಆರ್ ಎಸ್ ಮತ್ತೆ ಹೈದರಾಬಾದ್ ಪಾಲಿಕೆಯ ಗದ್ದುಗೆ ಹಿಡಿಯಲಿದೆ. 59 ವಾರ್ಡ್ […]