ಹೈದರಾಬಾದ್ ಪಾಲಿಕೆ ಚುನಾವಣೆ: ಬಿಜೆಪಿಗೆ ಭಾರಿ ಮುನ್ನಡೆ

ಹೈದರಾಬಾದ್: ಭಾರಿ ಜಿದ್ದಾಜಿದ್ದಿನಿಂದ ಕೂಡಿರುವ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್’ (ಜಿಎಚ್‌ಎಂಸಿ) ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಭಾರೀ ಮುನ್ನಡೆ ಸಾಧಿಸಿದೆ. ಒಟ್ಟು 150 ವಾರ್ಡ್‌ಗಳ ಜಿಎಚ್‌ಎಂಸಿ ಚುನಾವಣೆಗೆ ಡಿ.1ರಂದು ಮತದಾನ ನಡೆದಿತ್ತು. ಕೋವಿಡ್ ಹಿನ್ನೆಲೆಯಲ್ಲಿ ಮತಪತ್ರ (ಬ್ಯಾಲೆಟ್ ಪೇಪರ್) ಗಳನ್ನು ಬಳಸಿ ಚುನಾವಣೆ ನಡೆಸಲಾಗಿತ್ತು. ಒಟ್ಟು 1,122 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಹೈದರಾಬಾದ್ ಅನ್ನು ಭಾಗ್ಯನಗರವಾಗಿ ಮರುನಾಮಕರಣ ಮಾಡುವ ವಿಚಾರಗಳು, ಹೈದರಾಬಾದ್ ಅನ್ನು ನಿಜಾಮ ಸಂಸ್ಕೃತಿಯಿಂದ ಹೊರತರವು ಬಿಜೆಪಿ ಹೇಳಿಕೆಗಳು ಈ ಬಾರಿಯ ಚುನಾವಣೆಯನ್ನು ಕದನಕುತೂಹಲಗೊಳಿಸಿವೆ. ಆಡಳಿತಾರೂಢ […]
ಮಣಿಪಾಲ: ಈಶ್ವರನಗರ ವಾರ್ಡ್ ನ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ

ಉಡುಪಿ: ಶಾಸಕ ಕೆ. ರಘುಪತಿ ಭಟ್ ಅವರ ವಿಶೇಷ ಮುತುವರ್ಜಿ ಹಾಗೂ ಸ್ಥಳೀಯ ನಗರಸಭಾ ಸದಸ್ಯ ಮಂಜುನಾಥ್ ಮಣಿಪಾಲ ಅವರ ಮನವಿಯ ಮೇರೆಗೆ ಮಂಜೂರಾದ ಮಣಿಪಾಲ ಈಶ್ವರನಗರ ವಾರ್ಡ್ ನ ಎಂಟನೇ ಮತ್ತು ಒಂಬತ್ತನೇ ಅಡ್ಡ ರಸ್ತೆಯ ಸುಮಾರು 475 ಮೀಟರ್ ಉದ್ದದ ರಸ್ತೆ ಮರು ಡಾಂಬರೀಕರಣ ಕಾಮಗಾರಿಗೆ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್ ಗುರುವಾರ ಚಾಲನೆ ನೀಡಿದರು. ಬೂತ್ ಅಧ್ಯಕ್ಷ ಗಿರೀಶ್, ಜಿಲ್ಲಾ ಬಿಜೆಪಿ ಪ್ರಶಿಕ್ಷಣ ಪ್ರಕೋಷ್ಠ ಸಹಸಂಚಾಲಕ ಸುಬ್ರಮಣ್ಯ ಪೈ, ಮಹಿಳಾ ಮೋರ್ಚಾ […]
ಯಕ್ಷ ಆರಾಧನಾ ಕಿದಿಯೂರು ಟ್ರಸ್ಟ್ ನಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಉಡುಪಿ: ಯಕ್ಷ ಆರಾಧನಾ ಕಿದಿಯೂರು ಟ್ರಸ್ಟ್ ವತಿಯಿಂದ ಕುಂಜಿಬೆಟ್ಟು ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಎಂ.ಕೆ.ರಮೇಶ್ ಆಚಾರ್ಯ ಮತ್ತು ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರಸಂಗ ಕರ್ತ ಗಣೇಶ್ ಕೊಲೆಕಾಡಿ ಅವರನ್ನು ಸಮ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ಜಾನಪದ ಸಂಶೋಧಕ ಕೆ.ಎಲ್.ಕುಂಡಂತಾಯ ವಹಿಸಿದ್ದರು. ಯಕ್ಷಗಾನ ಕಲಾವಿದ ತಾರಾನಾಥ ವರ್ಕಾಡಿ ಅಭಿನಂದನಾ ಭಾಷಣ ಮಾಡಿದರು. ಲಯನ್ಸ್ ಮಾಜಿ ಜಿಲ್ಲಾ ಗವರ್ನರ್ ವಿ.ಜಿ.ಶೆಟ್ಟಿ, ಬಾರುಕೂರು ಶ್ರೀ ಕಾಳಿಕಾಂಬಾ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಯೋಗೀಶ್ ಆಚಾರ್ಯ […]