ಹೊಸ್ಮಾರು: ಬಿಜೆಪಿ ಗ್ರಾಮ ಸ್ವರಾಜ್ಯ ಸಮಾವೇಶ
ಹೊಸ್ಮಾರು: ಬಿಜೆಪಿ ಈದು-ನೂರಾಳ್ ಬೆಟ್ಟು ವತಿಯಿಂದ ಗ್ರಾಮ ಸ್ವರಾಜ್ಯ ಸಮಾವೇಶ -2020 ಇಂದು ಹೊಸ್ಮಾರಿನಲ್ಲಿ ಯಶಸ್ವಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮಣಿರಾಜ್ ಶೆಟ್ಟಿ, ಈದು ಶಕ್ತಿಕೇಂದ್ರ ಅಧ್ಯಕ್ಷ ಮಾಪಾಲು ಜಯವರ್ಮ ಜೈನ್, ಮಿಯ್ಯಾರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕರುಣಾಕರ ಕೋಟ್ಯಾನ್, ಜಿ.ಪಂ ಸದಸ್ಯೆ ದಿವ್ಯಶ್ರೀ ಗಿರೀಶ್ ಅಮೀನ್, ತಾ.ಪಂ. ಸದಸ್ಯೆ ಮಂಜುಳಾ, ಮಿಯ್ಯಾರು ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಶ್ರೀಧರ ಗೌಡ, ಮಿಯ್ಯಾರು ಮಹಾಶಕ್ತಿ ಕೇಂದ್ರದ ಯುವಮೋರ್ಚಾ ಅಧ್ಯಕ್ಷ ರಾಕೇಶ್ ಅಮೀನ್, ಬಿಜೆಪಿ […]
ನೀಲಾವರ ಗೋಶಾಲೆಯ ಕೃಷ್ಣನ ಸನ್ನಿಧಿಯಲ್ಲಿ ವೈಭವದ ದೀಪೋತ್ಸವ
ಬ್ರಹ್ಮಾವರ: ನೀಲಾವರ ಗೋಶಾಲೆಯ ಕಾಲೀಯ ಕೃಷ್ಣನ ಸನ್ನಿಧಿಯಲ್ಲಿ ವಾರ್ಷಿಕ ಕಾರ್ತಿಕ ದೀಪೋತ್ಸವವು ಶನಿವಾರ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ನೇತೃತ್ವದಲ್ಲಿ ವೈಭವದಿಂದ ನೆರವೇರಿತು.
ಆಸೀಸ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಟಿ-20 ಸರಣಿ ಗೆದ್ದ ಭಾರತ
ಸಿಡ್ನಿ: ಇಲ್ಲಿನ ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ನಡೆದ ದ್ವಿತೀಯ ಟ್ವೆಂಟಿ-20 ಪಂದ್ಯದಲ್ಲಿ ಭಾರತ ಆರು ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯನ್ನು ಮುಡಿಗೇರಿಸಿಕೊಂಡಿದೆ. ಮೊದಲ ಬ್ಯಾಟಿಂಗ್ ನಡೆಸಿದ 195 ರನ್‌ಗಳ ಬೃಹತ್ ಮೊತ್ತ ಬೆನ್ನಟ್ಟಿದ ಭಾರತ ಇನ್ನೆರಡು ಎಸೆತಗಳು ಬಾಕಿ ಉಳಿದಿರುವಂತೆಯೇ ನಾಲ್ಕು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ಮೊದಲು ಬ್ಯಾಟಿಂಗ್ ಇಳಿದ ಆಸ್ಟ್ರೇಲಿಯಾ ಮ್ಯಾಥ್ಯು ವೇಡ್ 58, ಸ್ಮಿತ್ 46 ರನ್ ಗಳ […]
ಮತದಾರರ ಪಟ್ಟಿ ಪಾರದರ್ಶಕವಾಗಿರಲಿ: ಎಂ.ಟಿ. ರೇಜು
ಉಡುಪಿ: ಜಿಲ್ಲೆಯ ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಯಾವುದೇ ಲೋಪದೋಷಗಳು ಕಂಡು ಬರದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ , ಅಂತಿಮ ಮತದಾರರ ಪಟ್ಟಿಯನ್ನು ಅತ್ಯಂತ ಪಾರದರ್ಶಕವಾಗಿ ಸಿದ್ದಪಡಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಮತದಾರರ ಪಟ್ಟಿಯ ವೀಕ್ಷಕ ಡಾ. ಎಂ.ಟಿ. ರೇಜು ಅಧಿಕಾರಿಗಳಿಗೆ ಸೂಚಿಸಿದರು. ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ಜಿಲ್ಲಾ ಚುನಾವಣಾಧಿಕಾರಿಗಳು, ಮತದಾರರ ಪಟ್ಟಿ ಪರಿಷ್ಕರಣೆ ಅಧಿಕಾರಿಗಳು ಮತ್ತು ಸಹಾಯಕ ಮತದಾರರ ಪಟ್ಟಿ ಪರಿಷ್ಕರಣೆ ಅಧಿಕಾರಿಗಳ ಸಭೆಯ […]
ಉಡುಪಿ: ತೋಟಗಾರಿಕಾ ಸಸಿಗಳು ಇಲಾಖಾ ದರದಲ್ಲಿ ಮಾರಾಟ
ಉಡುಪಿ: ಜಿಲ್ಲೆಯ ತೋಟಗಾರಿಕೆ ಕ್ಷೇತ್ರಗಳಲ್ಲಿ ರೈತರ ಹಾಗೂ ಸಾರ್ವಜನಿಕರ ಬೇಡಿಕೆ ಆಧಾರದ ಮೇಲೆ ತೋಟಗಾರಿಕೆ ಕಸಿ/ ಸಸಿ ಗಿಡಗಳನ್ನು ಉತ್ಪಾದಿಸಿ ಇಲಾಖಾ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ತೋಟಗಾರಿಕೆ ನಿರ್ದೇಶನಾಲಯದ ಸುತ್ತೋಲೆ ಪ್ರಕಾರ ಕಸಿ/ ಸಸಿ ಗಿಡಗಳ ಮಾರಾಟ ದರವನ್ನು ಪರಿಷ್ಕರಿಸಲಾಗಿದ್ದು, ಪರಿಷ್ಕರಿಸಿದ ಮಾರಾಟ ದರಗಳ ವಿವರಗಳು ಈ ಕೆಳಕಂಡಂತಿವೆ. ಅಡಿಕೆ ಸಸಿಗೆ ₹ 20, ಕಸಿ ಗೇರು ಗಿಡ ₹ 32, ಕಾಳು ಮೆಣಸು ₹ 11, ಕಸಿ ಕಾಳು ಮೆಣಸು ₹ 32, ಕೋಕೊ ₹ […]