ಪೇಜಾವರ ಶ್ರೀಗಳಿಂದ ತಮಿಳುನಾಡು ಪ್ರವಾಸ: ವಿವಿಧ ತೀರ್ಥಕ್ಷೇತ್ರಗಳಿಗೆ ಭೇಟಿ
ಚೆನ್ನೈ: ತಮಿಳುನಾಡು ಪ್ರವಾಸದಲ್ಲಿರುವ ಅಯೋಧ್ಯೆ ಶ್ರೀ ರಾಮ ಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರೂ ಆಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಸೋಮವಾರ ತಮಿಳುನಾಡು ರಾಜ್ಯಪಾಲ ಶ್ರೀ ಬನ್ವಾರಿಲಾಲ್ ಪುರೋಹಿತ್ ಅವರನ್ನು ಭೇಟಿ ಮಾಡಿದರು. ಶ್ರೀಗಳನ್ನು ಗೌರವದಿಂದ ಬರಮಾಡಿಕೊಂಡ ರಾಜ್ಯಪಾಲರು, ಮಹತ್ವದ ಜವಾಬ್ದಾರಿಯನ್ನು ನಿರ್ವಹಿಸುತ್ತಿರುವುದಕ್ಕೆ ಅತೀವ ಸಂತಸ ವ್ಯಕ್ತಪಡಿಸಿ ಶ್ರೀಗಳ ಆಗಮನದಿಂದ ರಾಜಭವನ ಪಾವಿತ್ರ್ಯ ವೃದ್ಧಿಸಿತು ಎಂದರು. ಉಭಯ ಕುಶಲೋಪರಿ ನಡೆಸಿದ ಬಳಿಕ ಅಯೋಧ್ಯೆ ರಾಮಮಂದಿರ ಕಾರ್ಯಗಳ ಕುರಿತಾಗಿ ಸಮಾಲೋಚನೆ ನಡೆಸಿದರು. ಶ್ರೀಗಳು ಮಂದಿರ ನಿರ್ಮಾಣದ […]
ಗ್ರಾಮ ಪಂಚಾಯತ್ ಚುನಾವಣೆ: ನಾಮಪತ್ರ ಸಲ್ಲಿಕೆ ಆರಂಭ
ಉಡುಪಿ: ಜಿಲ್ಲೆಯ ಉಡುಪಿ ತಾಲೂಕಿನ 16 ಗ್ರಾಮ ಪಂಚಾಯತಿಗಳ 329 ಸದಸ್ಯ ಸ್ಥಾನಗಳಿಗೆ, ಬ್ರಹ್ಮಾವರ ತಾಲೂಕಿನ 27 ಗ್ರಾಮ ಪಂಚಾಯತಿಗಳ 412 ಸದಸ್ಯ ಸ್ಥಾನಗಳಿಗೆ, ಬೈಂದೂರು ತಾಲೂಕಿನ 15 ಗ್ರಾಮ ಪಂಚಾಯತ್‌ಗಳ 259 ಸದಸ್ಯ ಸ್ಥಾನಗಳಿಗೆ ಹಾಗೂ ಹೆಬ್ರಿ ತಾಲ್ಲೂಕಿನ 9 ಗ್ರಾಮಗಳ 122 ಸದಸ್ಯ ಸ್ಥಾನಗಳಿಗೆ ಸಹಿತ ಒಟ್ಟು ನಾಲ್ಕು ತಾಲೂಕುಗಳ 67 ಗ್ರಾಮ ಪಂಚಾಯತಿಗಳ 415 ಕ್ಷೇತ್ರಗಳ 1122 ಸದಸ್ಯ ಸ್ಥಾನಗಳಿಗೆ ಮೊದಲನೆ ಹಂತದಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭಗೊಂಡಿದೆ. ಡಿಸೆಂಬರ್ 22 […]
ಯುವ ಶಕ್ತಿಯ ಸದ್ಬಳಕೆ ಮಾಡಿಕೊಳ್ಳಿ : ಜಿಲ್ಲಾಧಿಕಾರಿ ಜಿ. ಜಗದೀಶ್
ಉಡುಪಿ: ಜಿಲ್ಲೆಯ ಯುವಕ ಸಂಘಗಳಲ್ಲಿನ ಯುವಕರಿಗೆ ವೈವಿಧ್ಯಮಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮತ್ತು ಅವರಿಗೆ ಅಗತ್ಯ ತರಬೇತಿಗಳನ್ನು ನೀಡುವ ಮೂಲಕ ಅವರಲ್ಲಿರುವ ಯುವಶಕ್ತಿಯನ್ನು ಜಿಲ್ಲೆಯ ಅಭಿವೃಧ್ದಿ ಕಾರ್ಯಗಳಿಗೆ ಬಳಸಿಕೊಳ್ಳುವಂತಹ ಕಾರ್ಯಕ್ರಮಗಳನ್ನು ರೂಪಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. ಅವರು ಸೋಮವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ನೆಹರು ಯುವಕೇಂದ್ರದ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನೆಹರು ಯುವಕೇಂದ್ರದ ಮೂಲಕ ಜಿಲ್ಲೆಯಲ್ಲಿ ನೊಂದಣಿಯಾಗಿರುವ ಯುವಕ ಸಂಘಗಳ ಸದಸ್ಯರಿಗೆ ಅವರಲ್ಲಿನ ಸಮಾಜಸೇವೆಯ ಗುಣ, ಕೌಶಲ್ಯ ಮತ್ತು ಸಾಹಸ ಪ್ರವೃತ್ತಿಯನ್ನು ಅಭಿವೃದ್ಧಿಗೊಳಿಸುವಂತೆ […]
ಗ್ರಾಪಂ ಚುನಾವಣೆ ನಾಯಕರನ್ನು ರೂಪಿಸುವ ವೇದಿಕೆ: ಪ್ರಮೋದ್ ಮಧ್ವರಾಜ್
ಉಡುಪಿ: ಭವಿಷ್ಯದ ನಾಯಕರನ್ನು ರೂಪಿಸಲು ಗ್ರಾಮ ಪಂಚಾಯತ್ ಚುನಾವಣೆ ಉತ್ತಮ ವೇದಿಕೆಯಾಗಿದೆ. ಚುನಾವಣೆಯಲ್ಲಿ ಉತ್ಸಾಹದಿಂದ ಭಾಗವಹಿಸಿ ನಾಯಕರಾಗಲು ಸಿಕ್ಕಿದ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾರ್ಯಕರ್ತರಿಗೆ ಕರೆನೀಡಿದರು. ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ಗ್ರಾಮ ಪಂಚಾಯತ್ ಚುನಾವಣೆ ಕುರಿತ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಕೆಪಿಸಿಸಿ ಸಂಯೋಜಕ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ ವಿನಯ ರಾಜ್ ಮಾತನಾಡಿ, ಸಿದ್ಧರಾಮಯ್ಯನವರ ನೇತೃತ್ವ ದ ಕಾಂಗ್ರೆಸ್ ಸರಕಾರ […]
ಉಡುಪಿ: ನಾಳೆ ಸಿಟಿ ಬಸ್ ಸಂಚಾರ ಇರಲಿದೆ- ಕುಯಿಲಾಡಿ
ಉಡುಪಿ: ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ನಾಳೆ (ಡಿ 08 ) ರೈತ ಪರ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಗೆ ಉಡುಪಿ ಜಿಲ್ಲಾ ಸಿಟಿ ಬಸ್ ಮಾಲೀಕರ ಸಂಘ ಬೆಂಬಲ ಸೂಚಿಸಿಲ್ಲ. ಆದ್ದರಿಂದ ಎಂದಿನಂತೆ ಬಸ್ ಸಂಚಾರ ಇರಲಿದೆ ಎಂದು ಉಡುಪಿ ಸಿಟಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್ ತಿಳಿಸಿದ್ದಾರೆ.