ಪಾಳುಬಿದ್ದ ಕಟ್ಟಡವೊಂದರಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ

ಮೂಡುಬಿದಿರೆ: ಪಾಳುಬಿದ್ದ ಕಟ್ಟಡವೊಂದರಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆ ಅಳಿಯೂರಿನಲ್ಲಿ ಸೋಮವಾರ ರಾತ್ರಿ ನಡೆದಿದೆ. ಅಳಿಯೂರಿನ ನಿವಾಸಿ ತಿಮ್ಮಪ್ಪ ದೇವಾಡಿಗ ಎಂಬವರ ಪುತ್ರ ಸಂದೀಪ್( 22) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಶಿರ್ತಾಡಿ ಪೇಟೆಯ ಮೆಡಿಕಲ್ ನಲ್ಲಿ ಕೆಲಸ ಮಾಡುತ್ತಿದ್ದ. ಕೆಲಸ ಮುಗಿಸಿಕೊಂಡು ಸಂಜೆ ನಾಲ್ಕು ಗಂಟೆ ಸುಮಾರಿಗೆ ಮನೆಗೆ ಬಂದಿದ್ದ. ಬಳಿಕ ಹೊರಗೆ ಹೋಗಿ ಬರುವುದಾಗಿ ತಿಳಿಸಿ ಹೋದವನು ಕತ್ತಲಾದರೂ ಮನೆಗೆ ಬಂದಿರಲಿಲ್ಲ. ಪೋನ್ ಮಾಡಿದರೂ ಸ್ವೀಕರಿಸಲಿಲ್ಲ. ಆಗ ಮನೆಯವರು ಸುತ್ತಮುತ್ತ ಹುಡುಕಾಟ ನಡೆಸಿದ್ದು, […]

ಉಡುಪಿ: ಡಿ.13ರಂದು ಕೊರೊನಾ ವಾರಿಯರ್ಸ್ ಗೆ ಸನ್ಮಾನ ಕಾರ್ಯಕ್ರಮ

udupixpress

ಉಡುಪಿ: ಮಾನವ ಹಕ್ಕುಗಳ ಭಾರತೀಯ ಮಹಾಮೈತ್ರಿ, ಪತ್ರಕರ್ತ ಸಂಘ ಉಡುಪಿ, ಅರ್ಚನಾ ಟ್ರಸ್ಟ್ ಮಣಿಪಾಲ ಹಾಗೂ ಭಾರ್ಗವಿ ಆರ್ಟ್ಸ್ ಅಂಡ್ ಡ್ಯಾನ್ಸ್ ಅಕಾಡೆಮಿ ಉಡುಪಿ ಇವರ ಸಹಭಾಗಿತ್ವದಲ್ಲಿ ಕೊರೊನಾ ವಾರಿಯರ್ಸ್ ರಿಗೆ ಸನ್ಮಾನ ಕಾರ್ಯಕ್ರಮವನ್ನು ಡಿಸೆಂಬರ್ 13ರಂದು ಸಂಜೆ 4 ಗಂಟೆಗೆ ಅಂಬಲಪಾಡಿ ಕನ್ನರ್ಪಾಡಿಯ ಶ್ರೀದೇವಿ ಸಭಾಭವನದಲ್ಲಿ ಆಯೋಜಿಸಲಾಗಿದೆ. ಕೊರೊನಾ ಸಂಕಷ್ಟದ ಸಮಯದಲ್ಲಿ ಜೀವದ ಹಂಗು ತೊರೆದು ಜನರೊಂದಿಗೆ ಸ್ಪಂದಿಸಿದ ಕಾರ್ಯಕರ್ತರು, ಸಮಾಜ ಸೇವಕರು ಇದ್ದಲ್ಲಿ ಡಿಸೆಂಬರ್ 8ರೊಳಗೆ ಈ ಕೆಳಗಿನ ಮೊಬೈಲ್ ಸಂಖ್ಯೆ ಸಂರ್ಪಕಿಸುವಂತೆ ವಿನಂತಿಸಲಾಗಿದೆ. […]

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ರಾಮನಗರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಡಿ. 12 ರವರೆಗೂ ಮಳೆಯಾಗಲಿದೆ ಎಂದೂ ಹವಾಮಾನ ಇಲಾಖೆ ತಿಳಿಸಿದೆ.

ಶಾರದಾ ಮಹಿಳಾ ಮಂಡಲದಿಂದ ಬಡ ಕುಟುಂಬಕ್ಕೆ ಸೋಲಾರ ದೀಪ ಅಳವಡಿಸಲು ಆರ್ಥಿಕ ನೆರವು

ಕಾರ್ಕಳ: ಶಾರದಾ ಮಹಿಳಾ ಮಂಡಲ ವತಿಯಿಂದ ರೋಟರಿ ಆ್ಯನ್ಸ್ ಕ್ಲಬ್ ಹಾಗೂ ಯುವವಾಹಿನಿ ‘ಕರುಣಾಳು ಬಾ ಬೆಳಕು’ ಯೋಜನೆಯಡಿ ಎರಡು ಬಡ ಕುಟುಂಬಗಳಿಗೆ ಸೋಲಾರ ದೀಪ ಅಳವಡಿಸಲು ₹ 8 ಸಾವಿರ ಮೊತ್ತದ ಚೆಕ್ ಅನ್ನು ಹಸ್ತಾಂತರಿಸಲಾಯಿತು. ಶಾರದಾ ಮಹಿಳಾ ಮಂಡಳಿಯ ಅಧ್ಯಕ್ಷೆ ವಾರಿಜಾ ವಿ. ಕಾಮತ್ ರೋಟರಿ ಆ್ಯನ್ಸ್ ಅಧ್ಯಕ್ಷೆ ರಮಿತಾ ಶೈಲೇಂದ್ರ ಅವರಿಗೆ ಚೆಕ್ ಅನ್ನು ಹಸ್ತಾಂತರಿಸಿದರು. ಕಾರ್ಯದರ್ಶಿ ಡಾ. ಹರ್ಷಾ ಕಾಮತ್ ಹಾಜರಿದ್ದರು. ಭಾರತಿ ಅಮೀನ್ ಅವರ 19ನೇ ವಾರ್ಡ್ ಹಾಗೂ ಪ್ರದೀಪ […]

ಉಡುಪಿ: ನಾಟಕ ಪ್ರದರ್ಶನಕ್ಕೆ ಜಿಲ್ಲಾಧಿಕಾರಿಯಿಂದ ಗ್ರೀನ್ ಸಿಗ್ನಲ್

ಉಡುಪಿ: ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಜಿಲ್ಲೆಯಾದ್ಯಂತ ನಾಟಕ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಜಿ.‌ ಜಗದೀಶ್ ಅನುಮತಿ ನೀಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ನಾಟಕ ಪ್ರದರ್ಶನಕ್ಕೆ ಅನುಮತಿ ನೀಡುವಂತೆ ಕೋರಿ ಜಿಲ್ಲೆಯ ವೃತ್ತಿಪರ ನಾಟಕ ತಂಡಗಳ ಪರವಾಗಿ ಸಮಾಜರತ್ನ ಲೀಲಾಧರ ಶೆಟ್ಟಿ ಕರಂದಾಡಿ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಇಂದು ಮನವಿ ಸಲ್ಲಿಸಲಾಯಿತು. ಮನವಿಗೆ ಸ್ಪಂದಿಸಿದ ಡಿಸಿ ಅವರು‌ ನಾಟಕ ಪ್ರದರ್ಶನಕ್ಕೆ ಅನುಮತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಸುಮಾರು 15ರಿಂದ 20 ವೃತ್ತಿಪರ ನಾಟಕ ತಂಡಗಳು ಕಾರ್ಯನಿರ್ವಹಿಸುತ್ತಿದ್ದು, ನೂರಾರು ಕಲಾವಿದರು ಹಾಗೂ ತಂತ್ರಜ್ಞರು ಆರ್ಥಿಕವಾಗಿ […]