ಕೇಂದ್ರ ಸರಕಾರದಿಂದ ಗ್ರಾಪಂಗಳಿಗೆ ನೇರ ಅನುದಾನ ಮಂಜೂರು: ಮಹೇಶ್ ಠಾಕೂರ್

ಉಡುಪಿ: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಇಡೀ ದೇಶದ ಸರ್ವತೋಮುಖ ಅಭಿವೃದ್ಧಿಯತ್ತ ಗಮನ ಹರಿಸಿ ಅನೇಕ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಪಂಚಾಯತ್ ಗಳ ಅಭಿವೃದ್ದಿಯಿಂದ ದೇಶದ ಅಭಿವೃದ್ಧಿ ಎನ್ನುವ ಪರಿಕಲ್ಪನೆಯಡಿಯಲ್ಲಿ ಕಾರ್ಯಾಚರಿಸುತ್ತಿದೆ. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ಗಳಿಗೆ ಅವುಗಳ ಜನಸಂಖ್ಯೆಯ ಆಧಾರದಲ್ಲಿ ನೇರ ವಾರ್ಷಿಕ ಅನುದಾನಗಳನ್ನು ಮಂಜೂರು ಮಾಡುತ್ತಿದ್ದು ಇದರ ಅನುಷ್ಠಾನ ಆಗಿದ್ದು ಗ್ರಾಮಪಂಚಾಯತ್ ಗಳು ಇದರ ಸದುಪಯೋಗವನ್ನು ಈಗಾಗಲೇ ಪಡೆದಿವೆ ಎಂದು ನಗರ  ಬಿಜೆಪಿ ಅಧ್ಯಕ್ಷ ಮಹೇಶ್ […]

ಮಣಿಪಾಲ ಬಬ್ಬುಸ್ವಾಮಿ ದೈವಸ್ಥಾನದ ಸಮಿತಿಯ ಹಿರಿಯ ಪರಿಚಾರಕ ತೋಮ ಪೂಜಾರಿ ನಿಧನ

ಮಣಿಪಾಲ: ಇಲ್ಲಿನ ಸರಳೇಬೆಟ್ಟು ನೆಹರು ನಗರ ನಿವಾಸಿ ಕೆಎಂಸಿ ಆಸ್ಪತ್ರೆಯ ಜನರೇಟರ್ ಸೆಕ್ಷನ್ ನಲ್ಲಿ ಮೆಕ್ಯಾನಿಕ್ ಆಗಿ ಸೇವೆ ಸಲ್ಲಿಸಿ ನಿವೃತ್ತರಾದ ತೋಮ ಪೂಜಾರಿ (85) ಇಂದು ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಅವರು ಮಣಿಪಾಲದ ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಸಮಿತಿಯ ಹಿರಿಯ ಪರಿಚಾರಕರಾಗಿ ಕಾರ್ಯನಿರ್ವಹಿಸಿಸುತ್ತಿದ್ದರು. ಪತ್ನಿ, ಓರ್ವ ಪುತ್ರ, ನಾಲ್ಕು ಪುತ್ರಿಯರನ್ನು ಅಗಲಿದ್ದಾರೆ.

ಉಡುಪಿ: ಅಕ್ರಮ ಮದ್ಯ ದಾಸ್ತಾನು ಅಡ್ಡೆಯ ಮೇಲೆ ದಾಳಿ : 64.800 ಲೀ ಮದ್ಯ ವಶ, ಓರ್ವ ಆರೋಪಿಯ ಬಂಧನ

ಉಡುಪಿ: ಉಡುಪಿ ತಾಲೂಕು ಬೈರಂಪಳ್ಳಿ ಗ್ರಾಮದ ಕುಂತಾಲಕಟ್ಟೆ ಎಂಬಲ್ಲಿ ದಾಳಿ ನಡೆಸಿದ ಅಬಕಾರಿ ಪೊಲೀಸರು ಅಕ್ರಮವಾಗಿ ದಾಸ್ತಾನು ಇಟ್ಟಿದ್ದ 64.800 ಲೀ ಮದ್ಯವನ್ನು ವಶಪಡಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಉಡುಪಿ ತಾಲೂಕು ಪೆರ್ಡೂರು ಗ್ರಾಮದ ಶಿಲಾವನ ಜೋಗಿ ಬೆಟ್ಟುವಿನ ಮಂಜುನಾಥ ಕುಂದರ್ ಬಂಧಿತ ಆರೋಪಿ.‌ ಉಡುಪಿ ಡೆಪ್ಯೂಟಿ ಕಮಿಷನರ್ ಆಫ್ ಎಕ್ಸೆಸ್ ಅವರ ನಿರ್ದೇಶನದ ಮೇರೆಗೆ ಉಡುಪಿ ಅಬಕಾರಿ ಉಪ ಆಯುಕ್ತರ ಕಚೇರಿಯ ಅಬಕಾರಿ ಉಪ ನಿರೀಕ್ಷಕರು ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉಡುಪಿ […]

ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ-ಚೆನ್ನಯ್ಯರ ಹೆಸರು ನಾಮಕರಣಕ್ಕೆ ಒತ್ತಾಯ: ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಮುಖ್ಯಮಂತ್ರಿಗೆ ಮನವಿ

ಬೆಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರ ಪುರುಷರಾದ ಕೋಟಿ-ಚೆನ್ನಯ್ಯರ ಹೆಸರು ನಾಮಕರಣ ಮಾಡಬೇಕೆಂದು ಒತ್ತಾಯಿಸಿ ವಿಧಾನಪರಿಷತ್ತಿನ ಸಭಾ ನಾಯಕರು, ಮೀನುಗಾರಿಕಾ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಅವಿಭಜಿತ ದಕ್ಷಿಣ ಕನ್ನಡ – ಉಡುಪಿ ಜಿಲ್ಲೆಯ ಶಾಸಕರ ನಿಯೋಗ ಭೇಟಿ ಮಾಡಿ ಮನವಿ ಮಾಡಿತು. ನಿಯೋಗದಲ್ಲಿ ವಿಧಾನ ಸಭೆಯ ಮುಖ್ಯ ಸಚೇತಕರು ಆಗಿರುವ ಕಾರ್ಕಳ ಶಾಸಕ ಸುನೀಲ್ ಕುಮಾರ್, ಶಾಸಕರಾದ […]

ಉಡುಪಿ: ಜಿಲ್ಲೆಯಲ್ಲಿ‌ ಗ್ರಾಪಂ ಸದಸ್ಯ ಸ್ಥಾನಗಳ ಬಹಿರಂಗ ಹರಾಜು ಮಾಡಿದಲ್ಲಿ ಕ್ರಿಮಿನಲ್ ಪ್ರಕರಣ ದಾಖಲು- ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಕೆ

ಉಡುಪಿ: ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ 2020 ಕ್ಕೆ ಸಂಬಂಧಿಸಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಗ್ರಾಮ ಪಂಚಾಯತ್ ಸ್ಥಾನಗಳನ್ನು ಬಹಿರಂಗ ಹರಾಜಿನ ಮೂಲಕ ಮತದಾರರಿಗೆ ಹಣದ ಆಮಿಷವೊಡ್ಡಿ ಖರೀದಿಸುತ್ತಿರುವುದು ಕಂಡುಬಂದಿದ್ದು, ಈ ಬಗ್ಗೆ ರಾಜ್ಯ ಚುನಾವಣಾ ಆಯೋಗದ ಆಯುಕ್ತರು ಡಿಸೆಂಬರ್ 9 ರಂದು ವೀಡಿಯೋ ಸಂವಾದ ಕಾರ್ಯಕ್ರಮದಲ್ಲಿ ಇಂತಹ ಪ್ರಕರಣಗಳು ಕಂಡುಬಂದಲ್ಲಿ ಸೂಕ್ತ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿರುತ್ತಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಬಹಿರಂಗ ಹರಾಜು ಹಾಗೂ ಹಣದ ಆಮೀಷಕ್ಕಾಗಿ […]