ರಾಜ್ಯಮಟ್ಟದ ವಿಪತ್ತು ನಿರ್ವಹಣಾ ಆನ್ ಲೈನ್ ತರಬೇತಿ ಕಾರ್ಯಾಗಾರ

ಉಡುಪಿ: ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಆಂತರಿಕ ಗುಣಮಟ್ಟ ಕಾತರಿ ಘಟಕ, ರೋವರ್ಸ್ ಮತ್ತು ರೇಂಜರ್ಸ್ ಘಟಕ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್, ರಾಜ್ಯ ಸಂಸ್ಥೆ ಕರ್ನಾಟಕ ಇದರ ಸಹಯೋಗದೊಂದಿಗೆ ಮೂರು ದಿನಗಳ ರಾಜ್ಯ ಮಟ್ಟದ ವಿಪತ್ತು ನಿರ್ವಹಣಾ ಆನ್ಲೈನ್ ತರಬೇತಿ ಕಾರ್ಯಾಗಾರವನ್ನು ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು. ಅದಮಾರು ಮಠ ವಿಶ್ವಪ್ರಿಯತೀರ್ಥ ಸ್ವಾಮೀಜಿ ಕಾರ್ಯಾಗಾರವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಕಾಲೇಜಿನ ಪ್ರಾಂಶುಪಾಲ ಡಾ. ರಾಘವೇಂದ್ರ ಎ . ಅಧ್ಯಕ್ಷತೆ ವಹಿಸಿದ್ದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ […]

ಖ್ಯಾತ ನೃತ್ಯ ನಿರ್ದೇಶಕ ರೆಮೋ ಡಿಸೋಜಾಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ನವದೆಹಲಿ: ಬಾಲಿವುಡ್ ನ ಖ್ಯಾತ ನೃತ್ಯ ನಿರ್ದೇಶಕ ಹಾಗೂ ನಿರ್ದೇಶಕ ರೆಮೋ ಡಿಸೋಜಾ (46) ಅವರಿಗೆ ಇಂದು ಮಧ್ಯಾಹ್ನ ಹೃದಯಾಘಾತವಾಗಿದ್ದು, ಅವರು ಚಿಕಿತ್ಸೆಗಾಗಿ ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಸದ್ಯ ರೆಮೋ ಡಿಸೋಜಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಆಂಜಿಯೋಗ್ರಫಿ ಮಾಡಿದ್ದಾರೆ. ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ. ರಿಮೋ ಬಾಲಿವುಡ್ ನ ಕಿಕ್, ಝೀರೋ, ಬಾಜಿರಾವ್ ಮಸ್ತಾನಿ, ಭಜರಂಗಿ ಭಾಯಿಜಾನ್, ಯೇ ಜವಾನಿ ಹೈ ದಿವಾನಿ […]

ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರ: ಬಿಜೆಪಿ ಮಹಿಳಾ ಮೋರ್ಚಾದಿಂದ ಗೋ ಪೂಜೆ ಕಾರ್ಯಕ್ರಮ

ಉಡುಪಿ: ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರಗೊಂಡ ಹಿನ್ನೆಲೆಯಲ್ಲಿ ನೀಲಾವರ ಗೋಶಾಲೆಯಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಗೋ ಪೂಜೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜಿಪಂ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ನಳಿನಿ ಪ್ರದೀಪ್, ಉಡುಪಿ ಗ್ರಾಮಾಂತರದ ಅಧ್ಯಕ್ಷೆ ವೀಣಾ ನಾಯಕ್, ಗ್ರಾಮಾಂತರ ಮಹಿಳಾ ಮೋರ್ಚಾದ ಅಧ್ಯಕ್ಷೆ ವಸಂತಿ ಸತೀಶ್. ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷರಾದ […]

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಸಾಮಾಜಿಕ ಸಾಮರಸ್ಯ ದಿನ ಆಚರಣೆ

ಉಡುಪಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ಇದರ ವತಿಯಿಂದ ಸಂವಿದಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ 64ನೇ ಪುಣ್ಯತಿಥಿಯ ಪ್ರಯುಕ್ತ ಸಾಮಾಜಿಕ ಸಾಮರಸ್ಯ ದಿನವನ್ನು ಇಂದು ಕುಕ್ಕಿಕಟ್ಟೆಯ ಸರ್ಕಾರಿ ಬಾಲಕರ ವಸತಿಗೃಹದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಂಗಳೂರು ವಿಭಾಗ ಸಂಘಟನಾ ಕಾರ್ಯದರ್ಶಿ ಬಸವೇಶ್ ಕೋರಿ ಪ್ರಾಸ್ತಾವಿಕ ಭಾಷಣ ಮಾಡಿದರು. ಹಿರಿಯ ಕಾರ್ಯಕರ್ತ ಡಾ. ಶಿವಾನಂದ ನಾಯಕ್ ಉಪನ್ಯಾಸ ಭಾಷಣ ಮಾತನಾಡಿದರು. ಜಿಲ್ಲಾ ಪ್ರಮುಖರಾದ ರಾಜಶೇಖರ್ ವಂದಿಸಿದರು. ಜಿಲ್ಲಾ ಸಹಸಂಚಾಲಕ ಆಶೀಶ್ ಶೆಟ್ಟಿ ಬೋಳ […]

ಈ ಚಳಿಗಾಲದಲ್ಲಿ ನಿಮ್ಮ ದೇಹ ಸೌಂದರ್ಯ ಕಾಪಾಡಲು ಭಾರೀ ಸಿಂಪಲ್ ಟಿಪ್ಸ್ ಇಲ್ಲುಂಟು!

ಚಳಿಗಾಲದಲ್ಲಿ ಕಂಡುಬರುವ ಆರೋಗ್ಯ ಸಮಸ್ಯೆಗಳು ಹಲವಾರು.ಅದರಲ್ಲೂ ಚರ್ಮದ ಆರೋಗ್ಯದ ಕುರಿತು ಈ ಕಾಲದಲ್ಲಿ ಎಷ್ಟು ಕಾಳಜಿ ಮಾಡಿದರೂ ಸಾಲದು. ತ್ವಚೆ ಒಡೆಯುವುದು, ತುಟಿ ಒಣಗಿ ಬಿರುಕು, ಪಾದಗಳಲ್ಲಿ ಬಿರುಕು ಕಂಡು ಬರುವುದು, ಕೂದಲು ಒಣಗುವುದು ಮೊದಲಾದ ಸಮಸ್ಯೆಗಳು ಶುರುವಾದಾಗ ತಲೆಬಿಸಿ ಮಾಡಿಕೊಳ್ಳುವವರಿದ್ದಾರೆ.ಡೋಂಟ್ ವರಿ.ಇಲ್ಲಿ ನಾವು ಕೆಲವೊಂದು ಸುಲಭ ಪರಿಹಾರಗಳನ್ನು ನೀಡಿದ್ದೇವೆ. ಇಷ್ಟು ಮಾಡಿ ಸಾಕು.  ಕೆಫಿನ್ ಅಂಶವಿರುವ ತಿನಿಸುಗಳನ್ನು ಮತ್ತು ಮದ್ಯವನ್ನು ಆದಷ್ಟು ಕಡಿಮೆ ಮಾಡಿ  ಮುಖದ ಕಾಂತಿಗೆ ದೇಹದಲ್ಲಿ ನೀರಿನಂಶ ಹೆಚ್ಚಾಗಿ ಇರಬೇಕಾಗುತ್ತದೆ. ಅದಕ್ಕಾಗಿ ಪ್ರತಿನಿತ್ಯ […]