ಪುತ್ತೂರು: ಪತ್ರಕರ್ತರ ಜೀವನ ಭದ್ರತೆಗಾಗಿ ₹ 34 ಲಕ್ಷ ಮೊತ್ತದ ಯೋಜನೆ ಘೋಷಣೆ

ಪುತ್ತೂರು: ರಾಜ್ಯದಲ್ಲೇ ಮೊದಲ ಬಾರಿಗೆ ಗ್ರಾಮೀಣ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿರುವ ಪತ್ರಕರ್ತರ ಜೀವನ ಭದ್ರತೆಗಾಗಿ ಪುತ್ತೂರು ತಾಲೂಕು ಪತ್ರಕರ್ತರ ಸಂಘವು ತನ್ನ ಸದಸ್ಯರಿಗೆ ₹ 34 ಲಕ್ಷ ಮೊತ್ತದ ಆರ್ಥಿಕ ಯೋಜನೆ ಘೋಷಿಸಿದೆ. ಈ ಯೋಜನೆ ಇಂದಿನಿಂದಲೇ ಅಧಿಕೃತವಾಗಿ ಜಾರಿಗೊಳ್ಳಲಿದೆ. ಇಂದು ಪುತ್ತೂರು ಪತ್ರಿಕಾಭವನದಲ್ಲಿ ನಡೆದ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ವಿಶೇಷ ಮಹಾಸಭೆಯಲ್ಲಿ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶ್ರವಣ್ ಕುಮಾರ್ ನಾಳ ಈ ಬಗ್ಗೆ ಮಾಹಿತಿ ನೀಡಿದರು. ಪತ್ರಕರ್ತರ ಸಾಮಾಜಿಕ ಮತ್ತು ಕುಟುಂಬ ಭದ್ರತಾ […]

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆ: ಕಾಂಗ್ರೆಸ್ ಗೆ ಭರ್ಜರಿ ಜಯ, ಬಿಜೆಪಿಗೆ ಹಿನ್ನಡೆ

ಜೈಪುರ: ರಾಜಸ್ಥಾನದ 50 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟವಾಗಿದ್ದು, ಒಟ್ಟು 1,775 ವಾರ್ಡ್‌ಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ 620 ಸ್ಥಾನಗಳಲ್ಲಿ ಜಯ ಸಾಧಿಸಿದೆ. ಬಿಜೆಪಿ 548 ಹಾಗೂ ಸ್ವತಂತ್ರ ಅಭ್ಯರ್ಥಿಗಳು 595 ಸ್ಥಾನಗಳನ್ನು ಬಾಚಿಕೊಂಡಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ. ಬಹುಜನ ಸಮಾಜ ಪಕ್ಷದ ಏಳು ಅಭ್ಯರ್ಥಿಗಳು, ಸಿಪಿಐ ಹಾಗೂ ಸಿಪಿಎಂನ ತಲಾ ಇಬ್ಬರು ಹಾಗೂ ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷ(ಆರ್‌ಎಲ್‌ಪಿ)ಪಕ್ಷ ಒಂದು ಸ್ಥಾನದಲ್ಲಿ ಜಯ ಸಾಧಿಸಿದೆ. ರಾಜಸ್ಥಾನದ 12 ಜಿಲ್ಲೆಗಳಲ್ಲಿ ನಗರ […]

ಉಡುಪಿ ಡಿಸಿ ಶಾಸಕ ಸುನೀಲ್ ಕುಮಾರ್ ಕೈಗೊಂಬೆ: ಮಂಜುನಾಥ ಪೂಜಾರಿ ಆರೋಪ

ಹೆಬ್ರಿ: ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರ ಕೈಗೊಂಬೆ. ಅವರು ಹಾಕಿದ ತಾಳಕ್ಕೆ ತಕ್ಕಂತೆ ಡಿಸಿ ಕುಣಿಯುತ್ತಾರೆ. ಇದರಿಂದ ಜಿಲ್ಲೆಯ ಜನತೆ ಸಂಕಷ್ಟ ಎದುರಿಸುವಂತಾಗಿದೆ ಎಂದು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಪೂಜಾರಿ ಮುದ್ರಾಡಿ ಆರೋಪಿಸಿದ್ದಾರೆ. ಹೆಬ್ರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸಿಯವರು ಬಿಜೆಪಿ ಏಜೆಂಟ್ ರಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಜನಸಾಮಾನ್ಯರ ಕೆಲಸ ಮಾಡುತ್ತಿಲ್ಲ. ಅವರಿಗೆ ಪಕ್ಷದ ಸೇವೆ ಮಾಡುವ ಮನಸಿದ್ದರೆ, ಅದೇ ಪಕ್ಷಕ್ಕೆ ಸೇರಿಕೊಳ್ಳಲಿ ಎಂದು ಡಿಸಿ ವಿರುದ್ಧ […]

ರಾಜ್ಯ ಸಾರಿಗೆ ನೌಕರರ ಮುಷ್ಕರ ಕೊನೆಗೂ ಅಂತ್ಯ: ಇಂದು ಸಂಜೆಯಿಂದಲೇ ಬಸ್ ಸಂಚಾರ ಆರಂಭ

ಬೆಂಗಳೂರು: ರಾಜ್ಯದಲ್ಲಿ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಸಾರಿಗೆ ಸಿಬ್ಬಂದಿ ಮುಷ್ಕರ ಕೊನೆಗೂ ಅಂತ್ಯವಾಗಿದೆ. ಆ ಮೂಲಕ ಸಾರ್ವಜನಿಕರ ಸಂಕಷ್ಟ, ಪರದಾಟಕ್ಕೆ ತೆರೆಬಿದ್ದಿದೆ. ಸಾರಿಗೆ ಸಿಬ್ಬಂದಿ ಮುಷ್ಕರವನ್ನು ವಾಪಸ್ ಪಡೆಯುತ್ತಿದ್ದೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಅವರು ಫ್ರೀಡಂಪಾರ್ಕ್​ನಲ್ಲಿ ನೌಕರರ ಸಮ್ಮುಖದಲ್ಲಿ ಘೋಷಣೆ ಮಾಡಿದರು. ಸರ್ಕಾರದಿಂದ ಲಿಖಿತ ಭರವಸೆ ದೊರತಿರುವ ಹಿನ್ನೆಲೆಯಲ್ಲಿ ಮುಷ್ಕರ ವಾಪಸ್ ಪಡೆದಿದ್ದೇವೆ ಎಂದು ಅವರು ತಿಳಿಸಿದರು. ಸಂಜೆಯಿಂದ ಬಸ್ ಸಂಚಾರ ಆರಂಭ: ಮುಷ್ಕರ ವಾಪಸ್ ಪಡೆದಿರುವ ಹಿನ್ನೆಲೆಯಲ್ಲಿ ಇಂದು ಸಂಜೆಯಿಂದಲೇ ಬಸ್ ಸಂಚಾರ ಆರಂಭವಾಗಿದೆ. ನಾಳೆಯಿಂದ […]

ಕೆಥೊಲಿಕ್ ಸಭಾ ಕುಂದಾಪುರ ವಲಯ ವತಿಯಿಂದ ‘ಸೌಹಾರ್ದ ಕ್ರಿಸ್ಮಸ್’ ಸಂಭ್ರಮ

ಕುಂದಾಪುರ : ಕೆಥೊಲಿಕ್ ಸಭಾ ಕುಂದಾಪುರ ವಲಯ ಸಮಿತಿ ಹಾಗೂ ಶೆವೊಟ್ ಪ್ರತಿಷ್ಠಾನ ವತಿಯಿಂದ ಉಡುಪಿ ಧರ್ಮಪ್ರಾಂತ್ಯದ ಲ್ಯಾಟಿನ್ ಕೆಥೊಲಿಕ್, ಸೀರೊ ಮಲಬಾರ್ ಕೆಥೊಲಿಕ್, ಸಿ.ಎಸ್.ಐ. ಧರ್ಮಸಭೆ, ಅರ್ಥೊಡ್ಯಾಕ್ಸ್ ಸೀರಿಯನ್ ಹಾಗೂ ಸಮಾಜದ ಇತರ ಬಾಂಧವರೊಂದಿಗೆ “ಕ್ರಿಸ್ಮಸ್ ಸೌಹಾರ್ದ” ಕಾರ್ಯಕ್ರಮ ಬಸ್ರೂರು ಸಂತ ಫಿಲಿಪ್ ನೇರಿ ಚರ್ಚ್ ಸಭಾ ಭವನದಲ್ಲಿ ಭಾನುವಾರ ಆಯೋಜಿಸಲಾಗಿತ್ತು. ಕ್ರಿಸ್ಮಸ್ ಸೌಹಾರ್ದ ಕಾರ್ಯಕ್ರಮವನ್ನು ಬಸ್ರೂರು ಸಂತ ಫಿಲಿಪ್ ನೇರಿ ಚರ್ಚಿನ ಧರ್ಮಗುರು ಚಾರ್ಲ್ಸ್ ನೊರೋನ್ಹಾ ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಚಾರ್ಲ್ಸ್ ನೊರೋನ್ಹಾ, […]