ವಿಶ್ವೇಶತೀರ್ಥ ಶ್ರೀಪಾದರ ಸಂಸ್ಮರಣೆ; ಶ್ರೀಗಳೇ ನೆಟ್ಟ ಸಸಿಗಳಿಗೆ ಆವರಣಗೋಡೆ ಕಟ್ಟಿ ಲೋಕಾರ್ಪಣೆ
ಉಡುಪಿ: ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಪ್ರಥಮ ಪುಣ್ಯತಿಥಿ ದಿನವಾದ ಇಂದು ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಶ್ರೀಗಳ ಶಿಲಾ ವೃಂದಾವನ ಪ್ರತಿಷ್ಠಾ ಪೂರ್ವಕ ಆರಾಧನೋತ್ಸವ ನಡೆದರೆ, ಉಡುಪಿ ಸಹಿತ ದೇಶದ ವಿವಿಧೆಡೆ ಇರುವ ಪೇಜಾವರ ಮಠದ ಶಾಖೆಗಳಲ್ಲೂ ಶ್ರೀಗಳ ಸಂಸ್ಮರಣೋತ್ಸವವು ನಡೆಯಿತು. ಉಡುಪಿಯಲ್ಲಿ ಶ್ರೀಗಳ ಸಂಸ್ಮರಣೆಯ ವಿಶೇಷ ಕಾರ್ಯಕ್ರಮವೊಂದು ನಡೆದಿದೆ ಸ್ಥಳೀಯ ಮುಚ್ಲುಕೋಡು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನ ಕೊಡವೂರು ಶಂಕರನಾರಾಯಣ ದೇವಸ್ಥಾನ, ಪಾಜಕದ ಆನಂದತೀರ್ಥ ವಿದ್ಯಾಲಯಗಳಲ್ಲಿ ಶ್ರೀ ವಿಶ್ವೇಶತೀರ್ಥರು ವಿವಿಧ […]
ಹೊಸ ವರ್ಷಾಚರಣೆಗೆ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ
ಬೆಂಗಳೂರು: ಕ್ರಿಸ್‌ಮಸ್ ಹಾಗೂ ಹೊಸ ವರ್ಷಾಚರಣೆ ಸಂಬಂಧ ಸರ್ಕಾರವು ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಕೋವಿಡ್ ಸೋಂಕು ಪಸರಿಸುವ ಹಿನ್ನಲೆಯಲ್ಲಿ ಹೊಸ ವರ್ಷದ ಅದ್ಧೂರಿ ಆಚರಣೆಗೆ ತಡೆ ನೀಡಿದೆ. ಆದರೆ ಎಂದಿನಂತೆ ಕ್ಲಬ್ ಪಬ್‌ಗಳನ್ನು ತೆರೆಯಲು ಅವಕಾಶ ನೀಡಿದ್ದು, ಈ ಸಂಬಂಧ ಮಾರ್ಗಸೂಚಿಗಳನ್ನು ಹೊರಡಿಸಿದೆ. ಚರ್ಚ್‌ಗಳಲ್ಲಿ ಒಮ್ಮೆಲೆ ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತ ಕಾಯುಕೊಳ್ಳಲು ಮೇಲ್ವಿಚಾರಕರು, ಆಯೋಜಕರು ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಸೂಚಿಸಲಾಗಿದೆ. ಹಬ್ಬದ ಆಚರಣೆಯ ಸಂದರ್ಭದಲ್ಲಿ ಸಾಂಕ್ರಾಮಿಕ ಸೋಂಕು ತಡೆಗಟ್ಟಲು ಸಾರ್ವಜನಿಕರ ಹಸ್ತಲಾಘವ ಮತ್ತು […]
ಗಣೇಶ ಕೊಲೆಕಾಡಿಯವರಿಗೆ ತಲ್ಲೂರು ಕನಕ-ಅಣ್ಣಯ್ಯ ಶೆಟ್ಟಿ ಪ್ರಶಸ್ತಿ
ಉಡುಪಿ: ಯಕ್ಷಗಾನ ಕಲಾರಂಗ ಯಕ್ಷ ವಿದ್ವಾಂಸರಿಗೆ ನೀಡುವ ತಲ್ಲೂರು ಕನಕ-ಅಣ್ಣಯ್ಯ ಶೆಟ್ಟಿ ಸ್ಮರಣೆಯಲ್ಲಿ ನೀಡುವ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಛಾಂದಸ, ಪ್ರಸಂಗ ಕರ್ತ, ಕಲಾವಿದ ಗಣೇಶ ಕೊಲೆಕಾಡಿ ಆಯ್ಕೆಯಾಗಿದ್ದಾರೆಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಡಿಸೆಂಬರ್ 25ರ ಶುಕ್ರವಾರ ಸಂಜೆ 5 ಗಂಟೆಗೆ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ. ಪರ್ಯಾಯ ಅದಮಾರು ಮಠಾಧೀಶರಾದ ಈಶಪ್ರಿಯ ತೀರ್ಥ ಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಿ ಅನುಗ್ರಹಿಸಲಿದ್ದಾರೆ. ಪ್ರಶಸ್ತಿ ₹ […]
ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಸಿಖ್ ಧರ್ಮಗುರು ಆತ್ಮಹತ್ಯೆ
ನವದೆಹಲಿ: ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸಿ ಸಿಖ್ ಧರ್ಮಗುರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ದೆಹಲಿಯ ಸಿಂಘು ಗಡಿಯಲ್ಲೇ ನಡೆದಿದೆ. ಸಂತ ರಾಮ್ ಸಿಂಗ್ ಆತ್ಮಹತ್ಯೆಗೆ ಶರಣಾದ ಧರ್ಮಗುರು. ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬಾಬಾ ರಾಮ್ ಸಿಂಗ್ ಬೆಂಬಲ ನೀಡಿದ್ದರು. ರೈತರ ಪ್ರತಿಭಟನಾ ಸ್ಥಳವಾದ ದೆಹಲಿಯ ಸಿಂಘು ಗಡಿಯಲ್ಲೇ ಗುಂಡು ಹಾರಿಸಿಕೊಂಡು ರಾಮ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಆತ್ಮಹತ್ಯೆ ಮಾಡಿಕೊಂಡ ಜಾಗದಲ್ಲಿ, ‘ರೈತರ ಸಂಕಷ್ಟಗಳನ್ನು ನೋಡಲು ನನ್ನಿಂದ […]
ಡಿ.19ಕ್ಕೆ ಡಾ. ವಿರೂಪಾಕ್ಷ ದೇವರಮನೆ ಅವರ ಹೊಸ ಕೃತಿ ಬಿಡುಗಡೆ
ಉಡುಪಿ: ಸಾವಣ್ಣ ಪ್ರಕಾಶನ ಪ್ರಕಟಿಸಿರುವ ಡಾ. ವಿರೂಪಾಕ್ಷ ದೇವರಮನೆ ಅವರು ಬರೆದಿರುವ ನೂತನ ಪುಸ್ತಕ ‘ಥ್ಯಾಂಕ್ಯೂ ಟೀಚರ್’ (ಗುರುವೇ ನಿಮ್ಮನೆಂತು ಮರೆವೆ?) ಪುಸ್ತಕ ಲೋಕಾರ್ಪಣೆ ಸಮಾರಂಭ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಇದೇ ಡಿಸೆಂಬರ್ 19ರ ಶನಿವಾರ ಸಂಜೆ 4.30ಕ್ಕೆ ನಡೆಯಲಿದೆ. ಜಿಲ್ಲಾಧಿಕಾರಿ ಜಿ. ಜಗದೀಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶಿಕ್ಷಣ ತಜ್ಞ ಡಾ. ಮಹಾಬಲೇಶ್ವರ ರಾವ್, ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ನಿರ್ದೇಶಕ ಡಾ.ಪಿ. ವಿ. ಭಂಡಾರಿ, ಡಯಟ್ ಹಿರಿಯ ಉಪನ್ಯಾಸಕ […]