ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಮೇಲುಗೈ ಖಚಿತ: ಕೊಡವೂರು
ಉಡುಪಿ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸುವ ಮೂಲಕ ಪಕ್ಷದ ಹಿಂದಿನ ಗತವೈಭವನ್ನು ಮರುಕಳಿಸಲಿದೆ ಎಂಬ ವಿಶ್ವಾಸ ನಮಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು ಹೇಳಿದ್ದಾರೆ. ತಳಮಟ್ಟದ ಕಾರ್ಯಕರ್ತರನ್ನು ಸಂಘನಾತ್ಮಕವಾಗಿ ಒಗ್ಗೂಡಿಸಿ ಜನರಿಗೆ ಕಾಂಗ್ರೆಸ್ ಪಕ್ಷದ ಅವಧಿಯಲ್ಲಿ ನೀಡಿದ ಸೌಲಭ್ಯಗಳ ಅರಿವು ಮೂಡಿಸುವ ಪ್ರಯತ್ನ ಸಾಗಿದೆ. ಕಾಂಗ್ರೆಸ್ ನೇತೃತ್ವದ ಸಿದ್ಧರಾಮಯ್ಯ ಸರಕಾರದ ಅವಧಿಯಲ್ಲಿ ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿತ್ತು. ಬಿ.ಪಿ.ಎಲ್. ಪಡಿತರ […]
ಕುಂದಾಪುರ: ಕಾರು-ಆಟೊ ರಿಕ್ಷಾ ನಡುವೆ ಅಪಘಾತ; ಆಟೊ ಚಾಲಕ ಗಂಭೀರ
ಕುಂದಾಪುರ: ಇಲ್ಲಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಕಾರು ಮತ್ತು ಆಟೊರಿಕ್ಷಾ ನಡುವೆ ಭೀಕರ ಅಪಘಾತ ನಡೆದಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಂದೂರು ಕಡೆಯಿಂದ ಬರುತ್ತಿದ್ದ ಕಾರು ತ್ರಾಸಿಯಿಂದ ಮೊವಾಡಿ ಕಡೆಗೆ ತೆರಳುತ್ತಿದ್ದ ರಿಕ್ಷಾದ ಮಧ್ಯೆ ಢಿಕ್ಕಿ ಸಂಭವಿಸಿದೆ. ಇದರ ಪರಿಣಾಮ ರಿಕ್ಷಾ ಚಾಲಕನಿಗೆ ಗಂಭೀರ ಗಾಯಗೊಂಡಿದ್ದು, ರಿಕ್ಷಾದಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಮೊದಲ ಟೆಸ್ಟ್: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಹೀನಾಯ ಸೋಲು
ಅಡಿಲೇಡ್: ಆಸ್ಟ್ರೇಲಿಯಾ ತಂಡದ ಮಾರಕ ದಾಳಿಗೆ ತತ್ತರಿಸಿದ ಭಾರತ ತಂಡವು ಮೊದಲನೇ ಟೆಸ್ಟ್ ಪಂದ್ಯದಲ್ಲಿ 8 ವಿಕೆಟ್‌ಗಳ ಹೀನಾಯ ಸೋಲು ಕಂಡಿದೆ. ದ್ವಿತೀಯ ಇನಿಂಗ್ಸ್ ನಲ್ಲಿ ಕೊಹ್ಲಿ ಪಡೆ 21.2 ಓವರ್‌ಗಳಿಗೆ ಕೇವಲ 36 ರನ್‌ಗಳಿಗೆ 9 ವಿಕೆಟ್‌ಗಳನ್ನು ಕಳೆದುಕೊಂಡು ಡಿಕ್ಲೇರ್ ಮಾಡಿಕೊಂಡಿತು. ಇದರೊಂದಿಗೆ ಆಸ್ಟ್ರೇಲಿಯಾ ತಂಡಕ್ಕೆ 90 ರನ್ ಗುರಿ ನೀಡಿತು. ಜಾಶ್ ಹೇಝಲ್‌ವುಡ್(8ಕ್ಕೆ5) ಹಾಗೂ ಪ್ಯಾಟ್ ಕಮಿನ್ಸ್ (24ಕ್ಕೆ 4 ) ಅವರ ಮಾರಕ ದಾಳಿ ನಡೆಸಿದರು. ಮಯಾಂಕ್ ಅಗರ್ವಾಲ್ 9 ರನ್, ವಿರಾಟ್ […]
ಕೋಟದಲ್ಲಿ ಹೆಜ್ಜೇನು ದಾಳಿ: ಆರು ಮಂದಿ ಮಹಿಳೆಯರು ಅಸ್ವಸ್ಥ
ಕೋಟ: ಹೆಜ್ಜೇನು ದಾಳಿಯಿಂದ ಆರು ಮಂದಿ ಮಹಿಳೆಯರು ಅಸ್ವಸ್ಥರಾದ ಘಟನೆ ಕೋಟಾ ಗ್ರಾಪಂ ವ್ಯಾಪ್ತಿಯ ಕಾಸನಗುಂದು ಎಂಬಲ್ಲಿ ನಡೆದಿದೆ. ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಪ್ರೇಮಾ, ಬುಡ್ಡು, ಕಾವೇರಿ, ಪದ್ದು, ಸುಶೀಲ, ಲಚ್ಚಿ ಹೆಜ್ಜೇನು ದಾಳಿಗೆ ಒಳಗಾಗಿದ್ದಾರೆ. ಇವರು ಗದ್ದೆಯಲ್ಲಿ ಕೃಷಿ ಕಾರ್ಯದಲ್ಲಿ ತೊಡಗಿದ್ದ ವೇಳೆ ಹೆಜ್ಜೇನು ಹುಳುಗಳು ಏಕಾಏಕಿ ದಾಳಿ ಮಾಡಿದೆ. ಈ ಸಂದರ್ಭದಲ್ಲಿ ಸಿಂಚನಾ ಎಂಬ ಮಹಿಳೆ ತನ್ನ ಜೀವವನ್ನು ಪಣಕ್ಕಿಟ್ಟು ಮಹಿಳೆಯರನ್ನು ರಕ್ಷಣೆ ಮಾಡಲು ಯತ್ನಿಸಿದರು. ಅಲ್ಲದೆ ತಕ್ಷಣವೇ ಆ್ಯಂಬುಲೆನ್ಸ್ ಗೆ ಕರೆ ಮಾಡಿ […]
ಜ.1 ರಿಂದ ಶಾಲೆ ಆರಂಭ:ಸಿ.ಎಂ ನಿರ್ಧಾರ
ಬೆಂಗಳೂರು: ಕೊನೆಗೂ ಶಾಲಾರಂಭದ ದಿನನಿಗಧಿಯಾಗಿದ್ದು ಶಾಲೆಗಳನ್ನು ಆರಂಭಿಸುವ ದಿನವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಶನಿವಾರ ಪ್ರಕಟಿಸಿದ್ದಾರೆ. ‘2021ರ ಜನವರಿ 1ನೇ ತಾರೀಕಿನಿಂದ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿ ಹಾಗೂ ಜ. 6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭ. ಹದಿನೈದು ದಿನಗಳ ಕಾಲ ಪರಿಸ್ಥಿತಿ ಅವಲೋಕಿಸಿ ಇತರ ತರಗತಿ ಪ್ರಾರಂಭಿಸುವ ಕುರಿತು ನಿರ್ಧಾರ ಪ್ರಕಟಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನಿಸಲಾಗಿದೆ, ಎಂದು ಹೇಳಿದೆ. ಈ ಕುರಿತು ಸಿಎಂ ಕಚೇರಿಯ ಟ್ವೀಟ್ ತಿಳಿಸಿದೆ.