ಉಜಿರೆ ಬಾಲಕನ ಅಪಹರಣ ಪ್ರಕರಣ: ಆರು ಮಂದಿ ಆರೋಪಿಗಳ ಬಂಧನ

ಮಂಗಳೂರು: ಉಜಿರೆ ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಆರು ಆರೋಪಿಗಳನ್ನು ಬಂಧಿಸಲಾಗಿದ್ದು, ಆ ಮೂಲಕ ಅಪಹರಣ ಪ್ರಕರಣ ಸುಖ್ಯಾಂತ ಕಂಡಿದೆ. ಆರೋಪಿಗಳನ್ನು ಮಂಡ್ಯದ ಗಂಗಾಧರ್, ಬೆಂಗಳೂರಿನ ಮಹೇಶ್, ಕೋಮಲ್ ಮತ್ತು ಸ್ಥಳೀಯ ನಿವಾಸಿ ಮಂಜುನಾಥ್ ಎಂದು ಗುರುತಿಸಲಾಗಿದೆ. ಕೋಲಾರದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಕೋಲಾರ ಎಸ್ ಪಿ ಕಾರ್ತಿಕ್ ರೆಡ್ಡಿ ನೇತೃತ್ವದ ವಿಶೇಷ ತಂಡ ಮಗುವನ್ನು ರಕ್ಷಿಸಿದೆ. ಡಿಸೆಂಬರ್ 17ರಂದು ಮನೆ ಮುಂದೆ ಆಟವಾಡುತ್ತಿದ್ದ ಮಗುವನ್ನು ಅಪಹರಣ ಮಾಡಲಾಗಿತ್ತು.