ಬಿಜೆಪಿ ರಾಷ್ಟ್ರೀಯ ಪ್ರಧಾನ‌ ಕಾರ್ಯದರ್ಶಿ ಸಿ.ಟಿ. ರವಿ ಅವರಿಂದ ದಿ. ಡಾ. ಬನ್ನಂಜೆ ಗೋವಿಂದಾಚಾರ್ಯರ ಮನೆಗೆ ಭೇಟಿ

ಉಡುಪಿ: ಬಿಜೆಪಿ ರಾಷ್ಟ್ರೀಯ ಪ್ರಧಾನ‌ ಕಾರ್ಯದರ್ಶಿ ಸಿ.ಟಿ. ರವಿ ಇಂದು ಈಚೆಗೆ ಇಹಲೋಕ ತ್ಯಜಿಸಿದ ಹಿರಿಯ ವಿದ್ವಾಂಸ ಡಾ. ಬನ್ನಂಜೆ ಗೋವಿಂದಾಚಾರ್ಯರ ಮನೆಗೆ ಭೇಟಿ ನೀಡಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಿದರು. ಆಚಾರ್ಯರ ಮನೆಯವರೊಂದಿಗೆ ಸ್ವಲ್ಪ ಹೊತ್ತು ಮಾತುಕತೆ ನಡೆಸಿ ಆಚಾರ್ಯರ ಕೊಡುಗೆಗಳನ್ನು ಸ್ಮರಿಸಿಕೊಂಡರು. ಬಹಳ ವರ್ಷಗಳ ಹಿಂದೆ ದಿನ ಪತ್ರಿಕೆಯೊಂದರಲ್ಲಿ *ಕಿಷ್ಕಿಂಧಾ ಕಾಂಡ* ಎಂಬ ಅಂಕಣ ಬರಹದ ಮೂಲಕ ರಾಜಕೀಯದ ಪರಿಸ್ಥಿತಿಯನ್ನು ಅವಲೋಕಿಸಿ ತಮ್ಮ ವ್ಯಂಗ್ಯ ವಿಡಂಬನೆಯಿಂದ ಕೂಡಿದ ಚಿಂತನೆಗಳ ಮೂಲಕ ರಾಜಕಾರಣಿಗಳಿಗೆ […]

ಉಡುಪಿ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ 2021ನೇ ಸಾಲಿನ ಡೈರಿ ಬಿಡುಗಡೆ

ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಇದರ 2021ನೇ ಸಾಲಿನ ಡೈರಿಯನ್ನು ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥ ಶ್ರೀಪಾದರು ಬಿಡುಗಡೆಗೊಳಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ ರವಿ, ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಯಶ್‍ಪಾಲ್ ಸುವರ್ಣ, ಶಾಸಕ ಕೆ. ರಘುಪತಿ ಭಟ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ ಕುಮಾರ್ ಶೆಟ್ಟಿ, ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ, ಡಾ. ಕೃಷ್ಣ ಪ್ರಸಾದ್ ಹಾಗೂ ಅದಮಾರು ಮಠದ ಮ್ಯಾನೇಜರ್ […]

ಸರ್ಕಾರಿ ಕಾರು, ಬಂಗಲೆ ಮರಳಿಸಿದ ಸಭಾಪತಿ ಕೆ.‌ ಪ್ರತಾಪಚಂದ್ರ ಶೆಟ್ಟಿ

ಬೆಂಗಳೂರು: ತಮ್ಮ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಯತ್ನಿಸಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸಭಾಪತಿ ಕೆ.‌ ಪ್ರತಾಪಚಂದ್ರ ಶೆಟ್ಟಿ ಅವರು ವಿಧಾನ ಮಂಡಲದಿಂದ ತಮಗೆ ಒದಗಿಸಿದ್ದ ಕಾರು ಮತ್ತು ಬಂಗಲೆಯನ್ನು ಮರಳಿಸಿದ್ದಾರೆ. ಡಿಸೆಂಬರ್ 15ರಂದು ನಡೆದ ವಿಧಾನ ಪರಿಷತ್ ಅಧಿವೇಶನದಲ್ಲಿ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಯತ್ನಿಸಿದ್ದರು.‌ ಅದು ಸದನದಲ್ಲಿ ಕೋಲಾಹಲಕ್ಕೆ ಕಾರಣವಾಗಿತ್ತು. ಬಳಿಕ ಸದನದ ಕಲಾಪವನ್ನು ಅನಿರ್ದಿಷ್ಟಾವಧಿಯವರೆಗೆ ಮುಂದೂಡಲಾಗಿತ್ತು. ಅಧಿವೇಶನ ಮುಗಿಸಿ ಉಡುಪಿಗೆ […]

ಕಾರ್ಕಳ: ಅರ್ಬಿ ಫಾಲ್ಸ್‌ ಗೆ ಬಿದ್ದು ಯುವಕ ಮೃತ್ಯು

ಕಾರ್ಕಳ: ಯುವಕನೊಬ್ಬ ಆಕಸ್ಮಿಕವಾಗಿ ಮುಂಡ್ಲಿ ಅರ್ಬಿ ಫಾಲ್ಸ್‌ ಗೆ ಬಿದ್ದು ಮೃತಪಟ್ಟಿರುವ ಘಟನೆ ಭಾನುವಾರ ಸಂಜೆ ಸಂಭವಿಸಿದೆ. ವೇಣೂರು ಪಡ್ಯನಡ್ಕ ನಿವಾಸಿ ಕಿರಣ್‌ (21) ಮೃತ ಯುವಕ. ಈತ ತನ್ನ ಸ್ನೇಹಿತರೊಂದಿಗೆ ಕಾರ್ಕಳ ತೆಳ್ಳಾರು ಸಮೀಪದ ಮುಂಡ್ಲಿ ಅರ್ಬಿ ಫಾಲ್ಸ್‌ ವೀಕ್ಷಣೆಗೆ ಬಂದಿದ್ದ. ಈ ವೇಳೆ ಆಯಾತಪ್ಪಿ ಕಿರಣ್ ಫಾಲ್ಸ್ ಗೆ ಬಿದ್ದು ಸಾವನ್ನಪ್ಪಿದ್ದಾನೆ. ಅಜೆಕಾರು ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿತ್ರಪ್ರೇಮಿಗಳಿಗೆ ಸಿಹಿಸುದ್ದಿ: ಕೆಜಿಎಫ್​ ಚಾಪ್ಟರ್ ​-2 ಚಿತ್ರದ ಟೀಸರ್ ಬಿಡುಗಡೆಗೆ ಮುಹೂರ್ತ ಫಿಕ್ಸ್

ಬೆಂಗಳೂರು: ಚಿತ್ರಪ್ರೇಮಿಗಳು ಬಹಳಷ್ಟು ನಿರೀಕ್ಷೆಯಿಂದ ಕಾಯುತ್ತಿರುವ “ಕೆಜಿಎಫ್​ ಚಾಪ್ಟರ್ ​-2” ಚಿತ್ರದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. 2021ರ ಜನವರಿ 8ರಂದು ರಾಕಿ ಬಾಯ್ ಯಶ್ ನಟನೆಯ “ಕೆಜಿಎಫ್​ ಚಾಪ್ಟರ್​​-2” ಚಿತ್ರದ ಟೀಸರ್ ಬಿಡುಗಡೆ ಆಗುತ್ತಿದೆ ಎಂದು ನಿರ್ದೇಶಕ ಪ್ರಶಾಂತ್ ನೀಲ್ ಘೋಷಿಸಿದ್ದಾರೆ. ಅಂದು ಬೆಳಿಗ್ಗೆ 10ಗಂಟೆ 18 ನಿಮಿಷಕ್ಕೆ ಸರಿಯಾಗಿ ಹೊಂಬಾಳೆ ಫಿಲ್ಮ್ಸ್​​ ಯೂಟ್ಯೂಬ್​ ಚಾನಲ್​​ನಲ್ಲಿ ಕೆಜಿಎಫ್​ ಚಾಪ್ಟರ್​-2 ಟೀಸರ್ ರಿಲೀಸ್​ ಆಗಲಿದೆ ಎಂದು ಹೇಳಿದ್ದಾರೆ.