ಮಲ್ಪೆ: ಆಳಸಮುದ್ರ ಮೀನುಗಾರಿಕೆಗೆ ತೆರಳಿದ ಮೀನುಗಾರ ನಾಪತ್ತೆ
ಮಲ್ಪೆ: ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ ಮೀನುಗಾರನೊಬ್ಬ ಕಣ್ಮರೆಯಾಗಿರುವ ಘಟನೆ ಮಲ್ಪೆ ಬಂದರಿನಿಂದ 27 ನಾಟಿಕಲ್ ಮೈಲಿ ದೂರದಲ್ಲಿ ಸಂಭವಿಸಿದೆ. ನಾಪತ್ತೆಯಾದ ಮೀನುಗಾರನನ್ನು ತಮಿಳುನಾಡಿನ ಕಡಲೂರು ಜಿಲ್ಲೆಯ ಜಯಪ್ರಕಾಶ (35) ಎಂದು ಗುರುತಿಸಲಾಗಿದೆ. ಇವರು ಡಿ. 21ರಂದು ಮಧ್ಯಾಹ್ನ 3.30ಕ್ಕೆ ಮಲ್ಪೆಯ ಸತೀಶ ಶೆಟ್ಟಿ ಅವರ ‘ದೇವಿ ಚಾಮುಂಡೇಶ್ವರಿ’ ಎಂಬ ಮೀನುಗಾರಿಕಾ ಬೋಟಿನಲ್ಲಿ ಕೇಶವ, ಉಮೇಶ, ರಾಜಕುಮಾರ ಅವರೊಂದಿಗೆ ಆಳ ಸಮುದ್ರದ ಮೀನುಗಾರಿಕೆಗೆ ತೆರಳಿದ್ದರು. ಬಂದರಿನಿಂದ ಸುಮಾರು 27 ನಾಟಿಕಲ್ ಮೈಲಿ ದೂರದಲ್ಲಿ ಮೀನುಗಾರಿಕೆ ಮಾಡುತ್ತಿರುವ ವೇಳೆ […]
ನಾಳೆ ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ವೃದ್ಧರಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ
ಉಡುಪಿ: ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ದಿನಾಚರಣೆಯ ಪ್ರಯುಕ್ತ ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಮಣಿಪಾಲದ ಹೊಸಬೆಳಕು ಆಶ್ರಮದಲ್ಲಿ ಇರುವ ಮೂವರು ವೃದ್ಧರಿಗೆ ಉಡುಪಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಲಿಸ್ಟ್ ಕಣ್ಣಿನ ಆಸ್ಪತ್ರೆಯಲ್ಲಿ ನಾಳೆ (ಡಿ. 25) ಬೆಳಿಗ್ಗೆ 11.30ಕ್ಕೆ ಉಚಿತ ಕಣ್ಣಿನ ಪೊರೆ (cataract) ಶಸ್ತ್ರಚಿಕಿತ್ಸೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿಳಿಸಿದ್ದಾರೆ.
ಪೇಜಾವರ ಶ್ರೀ ವಿಶ್ವೇಶತೀರ್ಥರ 82ನೇ ಪೀಠಾರೋಹಣ ವರ್ಧಂತಿ ಸಂಸ್ಮರಣೆ: ವಿಶ್ವೇಶತೀರ್ಥರು ದೇಶ ಕಂಡ ಮಹಾನ್ ಯೋಗಿ- ಸಿಎಂ
ಬೆಂಗಳೂರು: 1992ರಲ್ಲಿ ಅಯೋಧ್ಯೆಯಲ್ಲಿ ವಿವಾದಿತ ಕಟ್ಟಡ ಧ್ವಂಸಗೊಂಡ ಬಳಿಕ ಅದೇ ಜಾಗದಲ್ಲಿ ತಾತ್ಕಾಲಿಕ ಶೆಡ್ ನಿರ್ಮಿಸಿ ಸಾವಿರಾರು ಸಾಧು ಸಂತರು ಲಕ್ಷಾಂತರ ಕರಸೇವಕರ ಸಮ್ಮುಖದಲ್ಲಿ ಆ ಶೆಡ್ ನಲ್ಲಿ ಶ್ರೀ ರಾಮಲಲ್ಲಾನ ವಿಗ್ರಹವನ್ನು ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಪ್ರತಿಷ್ಠೆ ಮಾಡಿದ ಸಂದರ್ಭ ನಾನೂ ಅಲ್ಲಿದ್ದು, ಅದಕ್ಕೆ ಸಾಕ್ಷಿಯಾದದ್ದು ನನ್ನ ಈ ಜನ್ಮದ ಮಹಾಭಾಗ್ಯ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ . ಪೇಜಾವರ ಮಠದ ಕೀರ್ತಿಶೇಷ ಶ್ರೀ ವಿಶ್ವೇಶತೀರ್ಥ ಶ್ರೀಪಾದರ 82 ನೇ ಸನ್ಯಾಸ ಪೀಠಾರೋಹಣ ವರ್ಧಂತಿ […]
2022ರ ಐಪಿಎಲ್ ಗೆ ಎರಡು ಹೊಸ ತಂಡ ಸೇರ್ಪಡೆ: ಬಿಸಿಸಿಐ
ಮುಂಬೈ: 2022ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ20 ಕ್ರಿಕೆಟ್ ಟೂರ್ನಿಗೆ ಎರಡು ಹೊಸ ತಂಡಗಳನ್ನು ಸೇರ್ಪಡೆಗೊಳಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರ್ಧಾರ ಕೈಗೊಂಡಿದೆ. ಆ ಮೂಲಕ ಐಪಿಎಲ್‌ನಲ್ಲಿ ಆಡುವ ತಂಡಗಳ ಸಂಖ್ಯೆಯ ಹತ್ತಕ್ಕೆ ಏರಿಕೆಯಾಗಿದೆ. ಗುರುವಾರ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅಧ್ಯಕ್ಷತೆಯಲ್ಲಿ ನಡೆದ ಸರ್ವಸದಸ್ಯರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಲಾಸ್ ಏಂಜಲೀಸ್‌ನಲ್ಲಿ 2028ರಲ್ಲಿ ನಡೆಯಲಿರುವ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರ್ಪಡೆಗೊಳಿಸಲು ಬಿಡ್ ಸಲ್ಲಿಸಲಿರುವ ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿಗೆ ಬೆಂಬಲ ನೀಡಲು ಕೂಡ […]
ರಾತ್ರಿ ಕರ್ಫ್ಯೂ ನಿರ್ಧಾರ ವಾಪಸ್: ಸಿಎಂ ಯಡಿಯೂರಪ್ಪ
ಬೆಂಗಳೂರು: ರೂಪಾಂತರ ಕೊರೊನಾ ವೈರಾಣು ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ಇಂದಿನಿಂದ ಜ. 2ರ ವರೆಗೆ ರಾತ್ರಿ ಕರ್ಫ್ಯೂ ವಿಧಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ದಿಢೀರ್ ಆಗಿ ವಾಪಸು ಪಡೆದಿದೆ. ಸರ್ಕಾರದ ಈ ತೀರ್ಮಾನದ ಕುರಿತಾಗಿ ಸಾರ್ವಜನಿಕ ವಲಯದಲ್ಲಿ ವಿರೋಧಗಳು ವ್ಯಕ್ತವಾಗಿದ್ದವು. ಹೀಗಾಗಿ, ಸಂಪುಟ ಸಹೋದ್ಯೋಗಿಗಳ ಹಾಗೂ ಹಿರಿಯ ಅಧಿಕಾರಿಗಳ ಅಭಿಪ್ರಾಯ ಪಡೆದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾತ್ರಿ ಕರ್ಫ್ಯೂ ನಿರ್ಧಾರದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ.