ದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಬಂಧನ

ದೆಹಲಿ: ನೂತನ ಕೃಷಿ ಕಾಯ್ದೆಗಳ ವಿರುದ್ಧ ಎರಡು ಕೋಟಿ ಸಹಿ ಸಂಗ್ರಹಿಸಿ ರಾಷ್ಟ್ರಪತಿ ರಾಮ್​ನಾಥ್ ಕೋವಿಂದ್​ರಿಗೆ ಸಲ್ಲಿಸಲು ಹೊರಟಿದ್ದ ಕಾಂಗ್ರೆಸ್ ನಿಯೋಗದ ಪ್ರಿಯಾಂಕಾ ಗಾಂಧಿ ಮತ್ತು ಇತರ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದು ಬಿಡುಗಡೆಗೊಳಿಸಿದ್ದಾರೆ. ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿರಲಿಲ್ಲ. ಆದರೂ ಕಾಂಗ್ರೆಸ್ ನಿಯೋಗ ಪಾದೆಯಾತ್ರೆ ಮೂಲಕ ತೆರಳುತ್ತಿದ್ದರು. ಹೀಗಾಗಿ, ಪ್ರಿಯಾಂಕಾ ಗಾಂಧಿ ಸೇರಿ ಇತರರನ್ನು ವಶಕ್ಕೆ ಪಡೆಯಲಾಗಿತ್ತು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ವಿರೋಧಿಸುವವರೆಲ್ಲ ಭಯೋತ್ಪಾದಕರೆಂದು ಬಿಂಬಿಸಲಾಗುತ್ತಿದೆ ಸರ್ಕಾರದ ನಿರ್ಣಯಗಳ ವಿರುದ್ಧ ಭಿನ್ನಾಭಿಪ್ರಾಯ […]

ಉಡುಪಿ: ಜ. 1ರಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ತರಗತಿ ಆರಂಭ

ಉಡುಪಿ: ಜನವರಿ 1ರಿಂದ ಸುರಕ್ಷತೆ ಹಾಗೂ ಮುಂಜಾಗ್ರತೆ ಕ್ರಮಗಳೊಂದಿಗೆ ಶಾಲೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಸೂಚಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲಾ ಮುಖ್ಯಸ್ಥರಿಗೆ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ಡಿಡಿಪಿಐ ಎನ್.ಎಚ್. ನಾಗೂರ ತಿಳಿಸಿದ್ದಾರೆ. ಉಡುಪಿಯ ಬೋರ್ಡ್ ಹೈಸ್ಕೂಲ್‌ನಲ್ಲಿ ನಡೆದ ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮುಖ್ಯೋಪಾಧ್ಯಯರ ಸಭೆಯಲ್ಲಿ ಅವರು ಮಾತನಾಡಿದರು. ಜ. 1ರಿಂದ 6ನೇ ತರಗತಿಯಿಂದ 9ನೇ ತರಗತಿವರೆಗೆ ವಿದ್ಯಾಗಮ–2 ಕಾರ್ಯಕ್ರಮ ಆರಂಭಿಸಬೇಕು. 10ನೇ ತರಗತಿ ವಿದ್ಯಾರ್ಥಿಗಳಿಗೆ ಅರ್ಧದಿನ ತರಗತಿ ನಡೆಸಬೇಕು. […]