ಕಾಪು ಬಿಜೆಪಿ ಯುವಮೋರ್ಚಾದಿಂದ ಹಿರಿಯ ನಾಗರಿಕರಿಗೆ ಹಣ್ಣುಹಂಪಲು, ಆರ್ಥಿಕ ಧನಸಹಾಯ ವಿತರಣೆ

ಕಾಪು: ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಹುಟ್ಟುಹಬ್ಬದ ಪ್ರಯುಕ್ತ ಕಾಪು ಬಿಜೆಪಿ ಯುವಮೋರ್ಚಾದ ವತಿಯಿಂದ ಕಟಪಾಡಿ ಕಾರುಣ್ಯ ವೃದ್ಧಾಶ್ರಮದ ಹಿರಿಯ ನಾಗರಿಕರಿಗೆ ಹಣ್ಣುಹಂಪಲು, ಆರ್ಥಿಕ ಧನಸಹಾಯ ವಿತರಣಾ ಕಾರ್ಯಕ್ರಮ ಶುಕ್ರವಾರ ನಡೆಯಿತು. ಈ ಕಾರ್ಯಕ್ರಮದಲ್ಲಿ ಕಾಪು ಬಿಜೆಪಿ ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್, ಕ್ಷೇತ್ರ ಪ್ರಭಾರಿಗಳಾದ ಯಶಪಾಲ್ ಸುವರ್ಣ, ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಂಜಲಿ ಸುವರ್ಣ, ಕಾಪು ಯುವಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ ಪಿತ್ರೋಡಿ, ರೈತ ಮೋರ್ಚಾ ಅಧ್ಯಕ್ಷ ಗುರು ನಂದನ್, […]

ಬಿಜೆಪಿ ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದಿಂದ ಶ್ರೀಕೃಷ್ಣ ಬಾಲನಿಕೇತನ ಅನಾಥಶ್ರಮಕ್ಕೆ ಆಹಾರ ಕಿಟ್ ವಿತರಣೆ

ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವದಲ್ಲಿ ಜಿಲ್ಲೆಯ ಆರು ಮಂಡಲಗಳ ಹಿಂದುಳಿದ ವರ್ಗಗಳ ಮೋರ್ಚಾಗಳ ಸಹಯೋಗದೊಂದಿಗೆ ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಾಧ್ಯಕ್ಷ ನೆ.ಲ. ನರೇಂದ್ರಬಾಬು ಅವರ ನಿರ್ದೇಶನದಂತೆ ಶುಕ್ರವಾರ ಉಡುಪಿ ಕುಕ್ಕಿಕಟ್ಟೆಯ ಶ್ರೀಕೃಷ್ಣ ಬಾಲನಿಕೇತನ ಅನಾಥಶ್ರಮಕ್ಕೆ ಆಹಾರ ಸಾಮಗ್ರಿ ನೀಡುವ ಮೂಲಕ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ‘ಸುಶಾಸನ ದಿನ’ವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗದ ಮೋರ್ಚಾ ಜಿಲ್ಲಾ ಅಧ್ಯಕ್ಷ ಸುರೇಂದ್ರ […]

ಉಡುಪಿ: ಬಿಜೆಪಿ ಜಿಲ್ಲಾ ಯುವ ಮೋರ್ಚಾದಿಂದ ನೀಲಾವರ ಗೋಶಾಲೆ ಸ್ವಚ್ಛತೆ, ಗೋ ಪೂಜೆ

ಉಡುಪಿ: ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನಾಚರಣೆ ಅಂಗವಾಗಿ ಹಾಗೂ ರಾಜ್ಯ ಸರಕಾರ ಜಾರಿಗೆ ತಂದ ಗೋಹತ್ಯೆ ನಿಷೇದ ಕಾಯ್ದೆಯನ್ನು ಸ್ವಾಗತಿಸಿ ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ಇಂದು ನೀಲಾವರ ಗೋಶಾಲೆಯನ್ನು ಸ್ವಚ್ಛಗೊಳಿಸಿ, ಗೋಪೂಜೆ ನೆರವೇರಿಸಲಾಯಿತು. ಯುವಮೋರ್ಚಾ ಜಿಲ್ಲಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ ಮಾತನಾಡಿ, ಅಟಲ್‍ ಬಿಹಾರಿ ವಾಜಪೇಯಿ ಅವರು ಜನನಾಯಕ ಮಾತ್ರವಲ್ಲ, ಅವರು ವಿಶ್ವಮಾನವರಾಗಿದ್ದರು. ಅದಕ್ಕೆ ಅವರ ಸರಳ ವ್ಯಕ್ತಿತ್ವವೇ ಸಾಕ್ಷಿ. ಪ್ರತಿಪಕ್ಷಗಳನ್ನು ಸಹ ಗೌರವಯುತವಾಗಿ ಕಾಣುತ್ತಿದ್ದ ಅವರನ್ನು ಅಜಾತ ಶತ್ರು ಎಂದು ದೇಶದ […]

ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಹೈದರಾಬಾದ್: ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು‌ ಹೈದರಾಬಾದ್ ನ ಅಪೊಲೋ‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ. ಅವರ ರಕ್ತದೊತ್ತಡದಲ್ಲಿ ಏರುಪೇರಾಗಿದ್ದು, ಇದರಿಂದ ಅವರು ಸಾಕಷ್ಟು ಬಳಲಿದ್ದರು.‌ಆದ್ದರಿಂದ ರಜನಿಕಾಂತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ರಜನಿಕಾಂತ್ ಬಹುನಿರೀಕ್ಷಿತ ‘ಅಣ್ಣಾತೆ’ ಸಿನಿಮಾದ ಶೂಟಿಂಗ್​ಗಾಗಿ ಹತ್ತು ದಿನಗಳಿಂದ ಹೈದರಾಬಾದ್​ನಲ್ಲಿದ್ದರು. ಚಿತ್ರೀಕರಣ ತಂಡದಲ್ಲಿರುವ ಕೆಲವರಲ್ಲಿ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದು ತಪಾಸಣೆಗೆ ಒಳಪಡಿಸಿದಾಗ ಸೋಂಕು ಇರುವುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಚಿತ್ರೀಕರಣವನ್ನು ಸ್ಥಗಿತಗೊಳಿಸಲಾಗಿತ್ತು. ಡಿ.22ರಂದು ರಜನಿಕಾಂತ್​ […]

ಸ್ಯಾಂಡಲ್ ವುಡ್ ನ ಖ್ಯಾತ ಯುವ ನಿರ್ದೇಶಕ ಇನ್ನಿಲ್ಲ

ಬೆಂಗಳೂರು: ಕಂಠಿ, ಸಾಹೇಬ ಸಿನಿಮಾಗಳನ್ನು ನಿರ್ದೇಶಿಸಿದ್ದ ಪ್ರತಿಭಾವಂತ ಯುವ ನಿರ್ದೇಶಕ ಎಸ್. ಭರತ್ (45) ವಿಧಿವಶರಾಗಿದ್ದಾರೆ. ಭರತ್‌ ಅವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಇದಕ್ಕೆ ಚಾಮರಾಜನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಭರತ್ ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಶ್ರೀಮುರಳಿ, ರಮ್ಯಾ ನಟಿಸಿದ್ದ ಕಂಠಿ ಸಿನಿಮಾವನ್ನು ನಿರ್ದೇಶಿಸಿದ್ದ ಭರತ್ ಆ ನಂತರ ಬಹು ವರ್ಷಗಳ ಬಿಡುವಿನ ಬಳಿಕ 2017 ರಲ್ಲಿ ಸಾಹೇಬ ಸಿನಿಮಾ ನಿರ್ದೇಶಿಸಿದ್ದರು. ಸಿನಿಮಾ ಒಂದನ್ನೇ ವೃತ್ತಿ ಮಾಡಿಕೊಂಡಿದ್ದ ಭರತ್, […]